Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:1 - ಕನ್ನಡ ಸತ್ಯವೇದವು C.L. Bible (BSI)

1 “ಸುಗಂಧದ್ರವ್ಯಗಳಿಂದ ಧೂಪ ಹಾಕುವುದಕ್ಕಾಗಿ ಜಾಲೀಮರದ ಒಂದು ವೇದಿಕೆಯನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೆ ಜಾಲೀಮರದ ಧೂಪವೇದಿಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ನೀನು ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:1
21 ತಿಳಿವುಗಳ ಹೋಲಿಕೆ  

ಅನಂತರ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಸಮ್ಮುಖದಲ್ಲಿರುವ ಚಿನ್ನದ ಬಲಿಪೀಠದ ಮೇಲೆ ದೇವಜನರೆಲ್ಲರ ಪ್ರಾರ್ಥನೆಯೊಡನೆ ಸಮರ್ಪಿಸಲು ಅವನಿಗೆ ಬಹಳಷ್ಟು ಧೂಪವನ್ನು ಕೊಡಲಾಗಿತ್ತು.


ಬಳಿಕ ಯಾಜಕನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಪರಿಮಳ ಧೂಪವೇದಿಕೆಯ ಕೊಂಬುಗಳಿಗೆ ಆ ರಕ್ತವನ್ನು ಹೆಚ್ಚಿ ಹೋರಿಯ ಮಿಕ್ಕ ರಕ್ತವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ದಹನಬಲಿ ಕೊಡುವ ಬಲಿಪೀಠದ ಬುಡದಲ್ಲಿ ಸುರಿಯಬೇಕು.


ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಕೆಯನ್ನು ಇಟ್ಟು, ಗುಡಾರದ ಬಾಗಿಲಲ್ಲಿ ಪರದೆಯನ್ನು ಕಟ್ಟು.


ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.


ಆ ಗರ್ಭಗುಡಿ 9 ಮೀಟರ್ ಉದ್ದ, 9 ಮೀಟರ್ ಅಗಲ, 9 ಮೀಟರ್ ಎತ್ತರ ಇತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ ವೇದಿಯನ್ನು ದೇವದಾರುಮರದಿಂದಲೂ ಹೊದಿಸಿದನು.


ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಧೂಪವೇದಿಕೆಯ ಕೊಂಬುಗಳಿಗೆ ಹಚ್ಚಬೇಕು.


ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು.


ಗರ್ಭಗುಡಿಯಲ್ಲಿ ಚಿನ್ನದ ಧೂಪಾರತಿ ಮತ್ತು ಚಿನ್ನದ ತಗಡನ್ನು ಸುತ್ತಲೂ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇದ್ದವು. ಈ ಮಂಜೂಷದಲ್ಲಿ ಮನ್ನವನ್ನು ಇಟ್ಟಿದ್ದ ಚಿನ್ನದ ಪಾತ್ರೆ ಆರೋನನ ಚಿಗುರಿದ ಕೋಲು ಮತ್ತು ಒಡಂಬಡಿಕೆಯ ಶಿಲಾಶಾಸನಗಳು ಇದ್ದವು.


ಅದು ಒಂದು ಮೊಳ ಉದ್ದ ಹಾಗು ಒಂದು ಮೊಳ ಅಗಲವಾಗಿದ್ದು ಚಚ್ಚೌಕವಾಗಿರಲಿ. ಅದರ ಎತ್ತರ ಎರಡು ಮೊಳವಿರಲಿ. ಅದರ ಕೊಂಬುಗಳು ಅದರ ಅಂಗಾಂಗವಾಗಿರಲಿ.


ಅಭಿಷೇಕ ತೈಲ, ಪರಿಮಳ ದ್ರವ್ಯ, ಗುಡಾರದ ಬಾಗಿಲಿನ ಪರದೆ,


ಅವರು ನೋಡಿಕೊಳ್ಳಬೇಕಾಗಿದ್ದವುಗಳು ಇವು - ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ತೆರೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.


ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ಪೀಠವನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.


ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿಗಳು ಯಾವುವೆಂದರೆ :- ಬಂಗಾರದ ಧೂಪವೇದಿಕೆ, ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,


ಆರೋನನೂ ಅವನ ವಂಶಜರೂ ಸುಗಂಧ ಕಾಣಿಕೆಗಳನ್ನು ಅರ್ಪಿಸುತ್ತಿದ್ದರು. ಬಲಿಪೀಠದ ಮೇಲೆ ಸಮರ್ಪಿಸುವ ಬಲಿಗಳನ್ನು ಅರ್ಪಣೆಮಾಡುತ್ತಿದ್ದರು. ಅತೀ ಪರಿಶುದ್ಧ ಸ್ಥಳದ ಎಲ್ಲ ಆರಾಧನೆಗೂ ಇಸ್ರಯೇಲರ ಕ್ಷಮಾಪಣೆಗಾಗಿ ಸರ್ವೇಶ್ವರ ನೇಮಿಸಿದ ಬಲಿಯರ್ಪಣೆಗಳಿಗೂ ಧೂಪಾರತಿಗೂ ಅವರೇ ಜವಾಬ್ದಾರರು ಆಗಿದ್ದರು. ದೇವರ ಸೇವಕ ಮೋಶೆ ಕೊಟ್ಟ ನಿಯಮಗಳಿಗೆ ಅನುಸಾರವಾಗಿ ಇದೆಲ್ಲವನ್ನೂ ಅವರು ಮಾಡುತ್ತಿದ್ದರು.


ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕಬಂಗಾರದ ತೂಕ ಎಷ್ಟೆಷ್ಟು ಇರಬೇಕೆಂಬುದನ್ನು ವಿವರಿಸಿದನು. ಹರಡಿದ ರೆಕ್ಕೆಗಳಿಂದ ಸರ್ವೇಶ್ವರನ ನಿಬಂಧನ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.


ಅಲ್ಲಿ ಮರದ ವೇದಿಕೆಯೊಂದಿತ್ತು: ಅದರ ಎತ್ತರ ಒಂದೂವರೆ ಮೀಟರ್, ಉದ್ದ ಒಂದು ಮೀಟರ್; ಅದರ ಮೂಲೆಗಳು, ಪೀಠ ಹಾಗು ಪಕ್ಕೆಗಳು ಮರದ್ದೇ ಆಗಿದ್ದವು. ಆ ಪುರುಷ ನನಗೆ, “ಇದು ಸರ್ವೇಶ್ವರನ ಸಮ್ಮುಖದ ಮೇಜು,” ಎಂದು ಹೇಳಿದನು.


ಮೇಜು, ಅದರ ಉಪಕರಣಗಳು, ಚೊಕ್ಕಬಂಗಾರದ ದೀಪವೃಕ್ಷ, ಅದರ ಉಪಕರಣಗಳು,


ಚಿನ್ನದ ಧೂಪವೇದಿಕೆ, ಅಭಿಷೇಕತೈಲ, ಸುವಾಸನೆಯುಳ್ಳ ಧೂಪ ಇವುಗಳನ್ನೂ; ಡೇರೆಯ ಬಾಗಿಲಿನ ಪರದೆಯನ್ನೂ;


“ತರುವಾಯ ಅವರು ಬಂಗಾರದ ವೇದಿಕೆಯ ಮೇಲೆ ನೀಲಿ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ, ಹೊರುವ ಕೋಲುಗಳನ್ನು ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು