Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:12 - ಕನ್ನಡ ಸತ್ಯವೇದವು C.L. Bible (BSI)

12 “ನೀನು ಇಸ್ರಯೇಲರ ಜನಗಣತಿ ಮಾಡುವಾಗ ಲೆಕ್ಕಿಸಬೇಕಾದ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಸರ್ವೇಶ್ವರನಾದ ನನಗೆ ತೆರಿಗೆಯನ್ನು ಕೊಡಬೇಕು. ಆಗ ಅವರಿಗೆ ಯಾವ ವಿಪತ್ತು ಸಂಭವಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ಖಾನೇಷುಮಾರಿಯಾಗತಕ್ಕ ಇಸ್ರಾಯೇಲ್ಯರನ್ನು ಲೆಕ್ಕಿಸುವಾಗ ಅವರೊಳಗೆ ವ್ಯಾಧಿಸಂಭವಿಸದಂತೆ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಯೆಹೋವನಿಗೆ ಕಪ್ಪವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಇಸ್ರೇಲರನ್ನು ಲೆಕ್ಕಿಸು. ಹೀಗಾಗಿ ಎಷ್ಟು ಮಂದಿ ಜನರಿರುತ್ತಾರೆಂದು ನೀನು ತಿಳಿದುಕೊಳ್ಳುವೆ. ಪ್ರತಿಸಾರಿ ಇದನ್ನು ಮಾಡಿದಾಗ, ಪ್ರತಿಯೊಬ್ಬನು ತನಗೋಸ್ಕರವಾಗಿ ಯೆಹೋವನಿಗೆ ತೆರಿಗೆಯನ್ನು ಕೊಡಬೇಕು. ಆಗ ಜನರಿಗೆ ಯಾವ ಕೇಡುಗಳೂ ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನೀನು ಇಸ್ರಾಯೇಲರನ್ನು ಎಣಿಸಲು ಜನಗಣತಿಯನ್ನು ತೆಗೆದುಕೊಂಡಾಗ ಪ್ರತಿಯೊಬ್ಬನು ತನ್ನ ಜೀವನದ ವಿಮೋಚನೆಯ ಕ್ರಯವನ್ನು ಯೆಹೋವ ದೇವರಿಗೆ ಕೊಡಬೇಕು. ಈ ರೀತಿ ಮಾಡಿದಲ್ಲಿ ಅವರನ್ನು ಎಣಿಸುವಾಗ ಅವರಲ್ಲಿ ವ್ಯಾಧಿ ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:12
21 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ನಮ್ಮ ಪ್ರಾಣಗಳನ್ನು ಕಾಪಾಡಿದ್ದಾರೆ. ಅದಕ್ಕೆ ಈಡಾಗಿ ಅವರಿಗೆ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು, ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ, ಮುಂತಾದುವುಗಳನ್ನು ತಂದಿದ್ದೇವೆ,” ಎಂದರು.


ಚೆರೂಯಳ ಮಗ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಯೇಲರ ಮೇಲೆ ದೇವರ ಕೋಪವುಂಟಾಗಿ, ಅದನ್ನು ಪೂರ್ತಿಗೊಳಿಸಲಿಲ್ಲ. ಈ ಜನಗಣತಿ ದಾವೀದನ ರಾಜ್ಯದ ಇತಿಹಾಸದಲ್ಲಿ ಲಿಖಿತವಾಗಲಿಲ್ಲ.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ತನ್ನನು ತಾನೇ ಮುಕ್ತಗೊಳಿಸಿಕೊಳ್ಳುವ ಜೀವಾತ್ಮನಿಲ್ಲ I ದೇವರಿಗೆ ಈಡುಕೊಟ್ಟು ಪ್ರಾಣ ಉಳಿಸಿಕೊಳ್ಳಬಲ್ಲ ನರನಿಲ್ಲ II


ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.


ನರಪುತ್ರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಬೋಧಿಸಿದರು.


ಸಿರಿಸಂಪತ್ತು ನಿನ್ನನು ಕುಚೋದ್ಯಕ್ಕೆ ನೂಕೀತು, ಎಚ್ಚರಿಕೆ! ಹೆಚ್ಚು ಲಂಚಕೋರತನದಿಂದ ವಂಚಿತನಾಗಬೇಡ.


‘ಇವನನ್ನು ಕಾಪಾಡಿ; ಅಧೋಲೋಕಕ್ಕೆ ತಳ್ಳಬೇಡಿ, ಬಿಡುಗಡೆ ಬೇಕಾದ ಈಡು ಇದೋ ಇಲ್ಲಿ!’ ಎಂದು ಹೇಳಿದರೆ,


ಆದರೂ ಆ ಲೇವಿಯರು ಅವಸರಪಡಲಿಲ್ಲ. ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ, “ಸರ್ವೇಶ್ವರನ ದಾಸನಾದ ಮೋಶೆಯ ವಿಧಿಗನುಸಾರ ಇಸ್ರಯೇಲ್ ಸಮಾಜದವರೆಲ್ಲರು ದೇವದರ್ಶನದ ಗುಡಾರಕ್ಕೆ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಜೆರುಸಲೇಮಿನ ಜನರಿಂದಲೂ ವಸೂಲಿ ಮಾಡುವಂತೆ ನೀನೇಕೆ ನೋಡಿಕೊಳ್ಳಲಿಲ್ಲ?


ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು; ಅವರಲ್ಲಿ ಇಪ್ಪತ್ತು ಸಾವಿರ ಜನರು ಸತ್ತರು.


‘ಮೂರು ವರ್ಷಗಳ ಕಾಲ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಇಸ್ರಯೇಲರ ಸಮಸ್ತ ಪ್ರಾಂತ್ಯಗಳಿಗೆ ಸರ್ವೇಶ್ವರ ಕಳುಹಿಸುವ ಸಂಹಾರಕ ದೂತನಿಂದ ಉಂಟಾಗುವ ಮೂರು ದಿನಗಳ ಘೋರ ವ್ಯಾಧಿರೂಪವಾದ ಸರ್ವೇಶ್ವರನ ಶಿಕ್ಷೆ ಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ’ ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದು ಹೇಳಿದನು.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಹೇಳಿದರು:


“ನಿಮ್ಮ ದಾಸರಾದ ನಾವು ನಮ್ಮ ಅಧಿಕಾರಕ್ಕೆ ಒಳಪಟ್ಟ ಸೈನಿಕರನ್ನು ಲೆಕ್ಕಿಸಿದಾಗ ಒಬ್ಬನಾದರೂ ಕಡಿಮೆ ಆಗಿಲ್ಲವೆಂದು ಗೊತ್ತಾಯಿತು.


ಸೈತಾನನು ಇಸ್ರಯೇಲರಿಗೆ ವಿರೋಧವಾಗಿ ಎದ್ದು ಇಸ್ರಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರಿಸಿದನು.


ಆಗ ಯೋವಾಬನು, “ನನ್ನ ಒಡೆಯರಾದ ಅರಸರೇ, ಸರ್ವೇಶ್ವರ ತಮ್ಮ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ; ಅವರೆಲ್ಲರೂ ನನ್ನ ಒಡೆಯರ ಸೇವಕರಷ್ಟೇ. ಆದರೆ ಒಡೆಯರು ಇಂಥದನ್ನು ಅಪೇಕ್ಷಿಸಿದ್ದೇಕೆ? ಇಸ್ರಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ?” ಎಂದನು.


ದೇವರ ದಾಸ ಮೋಶೆಯು ಮರುಭೂಮಿಯಲ್ಲಿ ವಿಧಿಸಿದಂತೆ ಇಸ್ರಯೇಲರು ಸರ್ವೇಶ್ವರನಿಗೆ ಕೊಡಬೇಕಾದ ಕಾಣಿಕೆಯನ್ನು ತಂದುಕೊಡಬೇಕು ಎಂಬುದಾಗಿ ಜುದೇಯದಲ್ಲೂ ಜೆರುಸಲೇಮಿನಲ್ಲೂ ಪ್ರಕಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು