ವಿಮೋಚನಕಾಂಡ 30:13 - ಕನ್ನಡ ಸತ್ಯವೇದವು C.L. Bible (BSI)13 ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನು ನನಗೆ ಅರ್ಧ ಶೆಕೆಲ್ ನಾಣ್ಯದ ಮೇರೆಗೆ ತೆರಿಗೆ ಕಟ್ಟಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಅರ್ಧರ್ಧ ನಾಣ್ಯವನ್ನು ತೆರಿಗೆಯಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿಯೊಬ್ಬನು ಯೆಹೋವನಿಗೆ ಅರ್ಧ ರೂಪಾಯಿಯ ಮೇರೆಗೆ ಕಪ್ಪ ಕೊಡಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧರ್ಧ ರೂಪಾಯಿ ಕಪ್ಪವಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧಶೆಕೆಲ್ ಕಪ್ಪಕಾಣಿಕೆಯನ್ನು ಕೊಡಬೇಕು. ಈ ಅರ್ಧಶೆಕೆಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಲೆಕ್ಕಿತರಾದವರಲ್ಲಿ ಸೇರುವ ಪ್ರತಿಯೊಬ್ಬ ಮನುಷ್ಯನು ಕೊಡಬೇಕಾದದ್ದು ಏನೆಂದರೆ ಶೆಕೆಲಿಗೆ ಇಪ್ಪತ್ತು ಗೇರಾಗಳ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರ್ಧ ಶೆಕೆಲ್ ಕೊಡಬೇಕು. ಅರ್ಧ ಶೆಕೆಲ್ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು. ಅಧ್ಯಾಯವನ್ನು ನೋಡಿ |
“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.
ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.