ವಿಮೋಚನಕಾಂಡ 30:15 - ಕನ್ನಡ ಸತ್ಯವೇದವು C.L. Bible (BSI)15 ಪ್ರಾಣರಕ್ಷಣೆಯ ಈ ತೆರಿಗೆಯನ್ನು ನನಗೆ ಕೊಡುವವರಲ್ಲಿ ಐಶ್ವರ್ಯವಂತರು ಅರ್ಧನಾಣ್ಯಕ್ಕಿಂತ ಹೆಚ್ಚು ಕೊಡಬಾರದು; ಬಡವರು ಕಮ್ಮಿ ಕೊಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಪ್ರಾಣರಕ್ಷಣೆಯ ಕಪ್ಪವನ್ನು ಯೆಹೋವನಿಗೆ ಕೊಡುವದರಲ್ಲಿ ಐಶ್ವರ್ಯವಂತರು ಅರ್ಧ ರೂಪಾಯಿಗಿಂತ ಹೆಚ್ಚು ಕೊಡಬಾರದು, ಬಡವರು ಕಮ್ಮಿಕೊಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಐಶ್ವರ್ಯವಂತರು ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು; ಬಡವರು ಅರ್ಧಶೆಕೆಲಿಗಿಂತ ಕಡಿಮೆ ಕೊಡಬಾರದು. ಜನರೆಲ್ಲರೂ ಈ ಕಾಣಿಕೆಯನ್ನು ಯೆಹೋವನಿಗೆ ಅರ್ಪಿಸಬೇಕು. ಇದು ನಿಮ್ಮ ಪ್ರಾಣರಕ್ಷಣೆಯ ತೆರಿಗೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮ್ಮ ಜೀವನದ ಪ್ರಾಯಶ್ಚಿತ್ತಕ್ಕೆ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವುದರಲ್ಲಿ ಐಶ್ವರ್ಯವಂತರು ಅರ್ಧ ಶೇಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು. ಅಧ್ಯಾಯವನ್ನು ನೋಡಿ |