Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:18 - ಕನ್ನಡ ಸತ್ಯವೇದವು C.L. Bible (BSI)

18 “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನು ಕಟ್ಟಿಸು. ಅದನ್ನು ಇಡಲು ಒಂದು ತಾಮ್ರದ ಪೀಠವನ್ನು ಮಾಡಿಸು. ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ಅದನ್ನಿಟ್ಟು ಅದರಲ್ಲಿ ನೀರನ್ನು ತುಂಬಿಸಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸ್ನಾನಕ್ಕೋಸ್ಕರ ಒಂದು ತಾಮ್ರದ ಗಂಗಾಳವನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ತಾಮ್ರದ ಗಂಗಾಳವನ್ನು ಮಾಡಿ ಅದನ್ನು ತಾಮ್ರದ ಪೀಠದ ಮೇಲಿಡು. ತೊಳೆದುಕೊಳ್ಳುವುದಕ್ಕೆ ನೀವು ಇದನ್ನು ಉಪಯೋಗಿಸುವಿರಿ. ಗಂಗಾಳವನ್ನು ದೇವದರ್ಶನಗುಡಾರ ಮತ್ತು ಯಜ್ಞವೇದಿಕೆಯ ನಡುವೆ ಇಡು. ಗಂಗಾಳದಲ್ಲಿ ನೀರನ್ನು ತುಂಬಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ತೊಳೆದುಕೊಳ್ಳುವದಕ್ಕಾಗಿ ಕಂಚಿನ ಬೋಗುಣಿಯನ್ನು ಮಾಡಿಸಿ ಅದಕ್ಕೆ ಕಂಚಿನ ಪೀಠವನ್ನೂ ಮಾಡಿಸಿ, ಅದನ್ನು ದೇವದರ್ಶನದ ಗುಡಾರ ಮತ್ತು ಬಲಿಪೀಠದ ಮಧ್ಯದಲ್ಲಿಟ್ಟು, ಅದರಲ್ಲಿ ನೀರನ್ನು ತುಂಬಿಸಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:18
15 ತಿಳಿವುಗಳ ಹೋಲಿಕೆ  

ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ನೀರು ತೊಟ್ಟಿಯನ್ನಿಟ್ಟು ಅದರಲ್ಲಿ ನೀರನ್ನು ತುಂಬಿಸು.


ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆಮಾಡುತ್ತಿದ್ದ ಮಹಿಳೆಯರು ಕೊಟ್ಟ ತಾಮ್ರದ ದರ್ಪಣಗಳಿಂದ ನೀರಿನ ತೊಟ್ಟಿಯನ್ನೂ ಅದರ ಪೀಠವನ್ನೂ ಮಾಡಿದನು.


ಅನಂತರ ಅವನು ‘ಕಂಚಿನ ಕಡಲು’ ಎನಿಸಿಕೊಳ್ಳುವ ಎರಕದ ಒಂದು ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,


ಇದಲ್ಲದೆ ಹೀರಾಮನು 800 ಲೀಟರ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಬಾನೆಗಳನ್ನು ಮಾಡಿ ಪ್ರತಿ ಒಂದು ಪೀಠದ ಮೇಲೆ ಒಂದೊಂದು ಬಾನೆಯನ್ನು ಇಟ್ಟನು.


ಅನಂತರ ಅವನು ‘ಕಡಲು’ ಎನಿಸಿಕೊಳ್ಳುವ ಎರಕದ ಒಂದು ಕೊಳವನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಉದ್ದ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.


ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.


ಇದಲ್ಲದೆ ಅವನು ಹತ್ತು ನೀರಿನ ಬಾನೆಗಳನ್ನು ಮಾಡಿಸಿ ದಹನಬಲಿ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಕಡಲು ಎನಿಸಿಕೊಳ್ಳುವ ಪಾತ್ರೆ ಯಾಜಕರ ಸ್ನಾನಕ್ಕಾಗಿ ಇತ್ತು.


ಬಲಿಪೀಠದ ಮೇಲೆ ಏಳು ಸಾರಿ ಆ ಎಣ್ಣೆಯನ್ನು ಚಿಮುಕಿಸಿ ಬಲಿಪೀಠವನ್ನು, ಅದರ ಎಲ್ಲ ಉಪಕರಣಗಳನ್ನು ಹಾಗು ನೀರಿನ ತೊಟ್ಟಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಧೂಪವೇದಿಕೆ, ಬಲಿಪೀಠ, ಅದರ ಉಪಕರಣಗಳು,


ಸರ್ವೇಶ್ವರ ಮೋಶೆಗೆ ಮತ್ತೆ ಹೀಗೆಂದರು:


ನೀನು ದೇವಾಲಯವನ್ನು ಪ್ರವೇಶಿಸುವಾಗ ಎಚ್ಚರಿಕೆವಹಿಸು. ಮೂಢರು ಅರ್ಪಿಸುವ ಬಲಿಗಿಂತ ದೇವರ ಸಾನ್ನಿಧ್ಯ ಸೇರಿ ಕಿವಿಗೊಟ್ಟು ಆಲಿಸುವುದು ಲೇಸು. ತಾವು ಮಾಡುವುದು ಸರಿಯಲ್ಲ ಎಂದು ಆ ಮೂಢರಿಗೆ ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು