Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:25 - ಕನ್ನಡ ಸತ್ಯವೇದವು C.L. Bible (BSI)

25 ಬುಕ್ಕಿಟ್ಟುಗಾರರ ಪದ್ಧತಿಯ ಮೇರೆಗೆ ಇವುಗಳನ್ನು ಮಿಶ್ರಮಾಡಿ ದೇವರ ಸೇವೆಗಾಗಿ ಅಭಿಷೇಕ ತೈಲವನ್ನು ತಯಾರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸುಗಂಧ ದ್ರವ್ಯಕಾರರ ಪದ್ದತಿಯ ಮೇರೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬುಕ್ಕಿಟ್ಟುಗಾರರ ಪದ್ಧತಿಯ ಮೇರೆಗೆ ವಿುಶ್ರಮಾಡಿ ದೇವರ ಸೇವೆಗಾಗಿ ಅಭಿಷೇಕತೈಲವನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಸುವಾಸನೆಯುಳ್ಳ ಪವಿತ್ರ ಅಭಿಷೇಕತೈಲವನ್ನು ಮಾಡಲು ಇವುಗಳನ್ನೆಲ್ಲ ಒಟ್ಟಿಗೆ ಬೆರೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದರಿಂದ ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು. ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:25
18 ತಿಳಿವುಗಳ ಹೋಲಿಕೆ  

ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಅಭಿಷೇಕ ತೈಲವನ್ನು ಹಾಗು ಪರಿಮಳದ್ರವ್ಯಗಳಿಂದ ಮಾಡಲಾದ ಅಪ್ಪಟವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿಧಾನದ ಮೇರೆಗೆ ತಯಾರಿಸಿದನು.


ಆದರೆ ಪರಿಮಳದ್ರವ್ಯಗಳನ್ನು ಮಿಶ್ರಮಾಡುವ ಜವಾಬ್ದಾರಿ ಯಾಜಕರದಾಗಿತ್ತು.


ಬಳಿಕ ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿ ಇರುವುದೆಲ್ಲವನ್ನೂ ಅದರ ಎಲ್ಲ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಾಪಿಸು. ಅಂದಿನಿಂದ ಅದು ಪರಿಶುದ್ಧವಾಗಿರುವುದು.


ಅದು ರಮ್ಯ, ಸುರಿದ ಸುಗಂಧತೈಲ ಗಡ್ಡಕೆ ಇಳಿವಂತೆ I ಆರೋನನ ಗಡ್ಡದಿಂದ ಅವನ ಕೊರಳಪಟ್ಟಿಗೆ ಇಳಿವಂತೆ II


“ನನ್ನ ದಾಸ ದಾವೀದನನು ಗುರುತಿಸಿರುವೆ I ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ II


ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.


ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


ಅಭಿಷೇಕತೈಲವನ್ನು ಅವನ ತಲೆಯ ಮೇಲೆ ಅಭ್ಯಂಜನ ಮಾಡಿ ಅವನನ್ನು ಅಭಿಷೇಕಿಸು.


ಅದಲ್ಲದೆ ಬಲಿಪೀಠದ ಮೇಲಿರುವ ರಕ್ತದಲ್ಲಿಯೂ ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮಕಿಸು. ಹೀಗೆ ಅವನೂ ಅವನ ಮಕ್ಕಳು ಅವನ ವಸ್ತ್ರಗಳ ಸಹಿತವಾಗಿ ಪ್ರತಿಷ್ಠಾಪಿತರಾಗುವರು.


ಅದಕ್ಕೆ ನಾಲ್ಕು ಲೀಟರು ಓಲಿವ್ ಎಣ್ಣೆಯನ್ನು ಕೂಡಿಸಬೇಕು.


ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನವನ್ನು ಅನುಸರಿಸಿ ಬೇರೆ ಕಾರ್ಯಕ್ಕಾಗಿ ತೈಲವನ್ನು ತಯಾರಿಸಲೇ ಕೂಡದು. ಇದು ದೇವರ ವಸ್ತು. ಇದು ಮೀಸಲೆಂದು ನೀವು ತಿಳಿದುಕೊಳ್ಳಬೇಕು.


ಪರಿಮಳದ್ರವ್ಯಕಾರರು ಮಾಡುವಂತೆ ಕಲಸಿ, ಉಪ್ಪು ಹಾಕಿ, ದೇವರ ಸೇವೆಗೆ ಸ್ವಚ್ಚವಾದ ಧೂಪದ್ರವ್ಯವನ್ನು ಮಾಡಿಸಬೇಕು.


ಅಭಿಷೇಕ ತೈಲ, ಪರಿಮಳ ದ್ರವ್ಯ, ಗುಡಾರದ ಬಾಗಿಲಿನ ಪರದೆ,


“ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು, ಅಭಿಷೇಕ ತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಹಾಗು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡು ಬಾ;


ಅನಂತರ ಮೋಶೆ ಅಭಿಷೇಕದ ಎಣ್ಣೆಯನ್ನು ತೆಗೆದುಕೊಂಡು ದೇವದರ್ಶನದ ಗುಡಾರವನ್ನು ಹಾಗು ಅದರಲ್ಲಿದ್ದ ಎಲ್ಲವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.


ಸತ್ತ ನೊಣಗಳಿಂದ ಗಂದಿಗನ ತೈಲ ಕೂಡ ನಾರುತ್ತದೆ. ಅಂತೆಯೇ ಹುಚ್ಚುತನ ಕೊಂಚವಾದರೂ ಜ್ಞಾನಮಾನಗಳನ್ನು ಕೆಡಿಸಿಬಿಡುತ್ತದೆ.


ಈ ಬಗೆಯ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸು. ಆಗ ಅವರು ನನಗೆ ಯಾಜಕರಾಗಿರುವರು.


ಯಾಜಕ ಚಾದೋಕನು ದೇವದರ್ಶನದ ಗುಡಾರದಲ್ಲಿದ್ದ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದುತ್ತಾ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ!” ಎಂದು ಘೋಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು