Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:29 - ಕನ್ನಡ ಸತ್ಯವೇದವು C.L. Bible (BSI)

29 ಅವು ಅತಿ ಪರಿಶುದ್ಧವಾಗುವಂತೆ ಪ್ರತಿಷ್ಠಿಸಬೇಕು. ಅವುಗಳಿಗೆ ಸೋಕಿದ್ದೆಲ್ಲವು ಪರಿಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಿ ಅವು ಅತಿ ಪರಿಶುದ್ಧವಾಗುವಂತೆ ಪ್ರತಿಷ್ಠಿಸಬೇಕು. ಅವುಗಳಿಗೆ ಸೋಂಕಿದೆಲ್ಲವು ಪರಿಶುದ್ಧವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ನೀನು ಈ ಉಪಕರಣಗಳನ್ನೆಲ್ಲ ಪವಿತ್ರಗೊಳಿಸುವೆ. ಅವುಗಳು ಯೆಹೋವನಿಗೆ ಬಹು ವಿಶೇಷವಾಗಿವೆ. ಅವುಗಳಿಗೆ ಸೋಂಕಿದ್ದೆಲ್ಲವೂ ಪವಿತ್ರವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವು ಮಹಾಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವುದೆಲ್ಲವೂ ಪರಿಶುದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:29
10 ತಿಳಿವುಗಳ ಹೋಲಿಕೆ  

ದೃಷ್ಟಿಹೀನರೇ! ಯಾವುದು ಶ್ರೇಷ್ಠ? ಕಾಣಿಕೆಯೋ, ಕಾಣಿಕೆಯನ್ನು ಪಾವನಗೊಳಿಸುವ ಬಲಿಪೀಠವೋ?


ಆರೋನನ ವಂಶಜರಾದ ಗಂಡಸರೆಲ್ಲರು ಅದನ್ನು ತಿನ್ನಬಹುದು. ಸರ್ವೇಶ್ವರನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ಶಾಶ್ವತ ನಿಯಮವಾಗಿ ಆರೋನನ ಸಂತತಿಗೆ ಸಲ್ಲತಕ್ಕದು. ಆ ದ್ರವ್ಯಗಳಿಗೆ ಸೋಂಕಿದೆಲ್ಲವೂ ಪರಿಶುದ್ಧವಾಗುವುದು.


ಹೀಗೆ ಏಳು ದಿನಗಳವರೆಗೆ ಬಲಿಪೀಠದ ನಿಮಿತ್ತ ಪಾಪಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪ್ರತಿಷ್ಠಾಪಿಸು. ಬಲಿಪೀಠವು ಅತಿಶುದ್ಧವಾಗಿರಬೇಕು. ಅದನ್ನು ಸೋಕಿದ್ದೆಲ್ಲವು ಪರಿಶುದ್ಧವಾಗುವುದು.


ದೃಷ್ಟಿಗೆಟ್ಟ ಮತಿಭ್ರಷ್ಟರೇ, ಯಾವುದು ಶ್ರೇಷ್ಠ? ಚಿನ್ನವೋ, ಚಿನ್ನವನ್ನು ಪಾವನಗೊಳಿಸುವ ದೇವಾಲಯವೋ? ಅಂತೆಯೇ,


ಬಲಿಪೀಠ, ಬಲಿಪೀಠದ ಉಪಕರಣಗಳು, ನೀರಿನ ತೊಟ್ಟಿ ಹಾಗು ಅದರ ಪೀಠ ಇವುಗಳನ್ನೆಲ್ಲ ಅಭಿಷೇಕಿಸಬೇಕು.


ಅಲ್ಲದೆ ಆರೋನನು ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.


ಬಲಿಪೀಠದ ಮೇಲೆ ಏಳು ಸಾರಿ ಆ ಎಣ್ಣೆಯನ್ನು ಚಿಮುಕಿಸಿ ಬಲಿಪೀಠವನ್ನು, ಅದರ ಎಲ್ಲ ಉಪಕರಣಗಳನ್ನು ಹಾಗು ನೀರಿನ ತೊಟ್ಟಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಬಲಿಪೀಠವನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಬಲಿಪೀಠವನ್ನು ಪ್ರತಿಷ್ಠಾಪಿಸು. ಅದು ಪರಮಪವಿತ್ರವಾಗಿರಬೇಕು.


ಅನಂತರ ಮೋಶೆ ಅಭಿಷೇಕದ ಎಣ್ಣೆಯನ್ನು ತೆಗೆದುಕೊಂಡು ದೇವದರ್ಶನದ ಗುಡಾರವನ್ನು ಹಾಗು ಅದರಲ್ಲಿದ್ದ ಎಲ್ಲವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.


ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನು ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು