Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:30 - ಕನ್ನಡ ಸತ್ಯವೇದವು C.L. Bible (BSI)

30 ಅಲ್ಲದೆ ಆರೋನನು ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಆರೋನನನ್ನು ಮತ್ತು ಅವನ ಪುತ್ರರನ್ನು ಈ ತೈಲದಿಂದ ಅಭಿಷೇಕಿಸು. ಅವರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾರೆಂದು ಇದು ತೋರಿಸುವುದು. ಆಗ ಅವರು ಅಭಿಷೇಕಿಸಲ್ಪಟ್ಟ ಯಾಜಕರಾಗಿ ನನ್ನ ಸೇವೆಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಆರೋನನನ್ನೂ, ಅವನ ಪುತ್ರರನ್ನೂ ಅಭಿಷೇಕಿಸಿ, ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆ ಮಾಡು, ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:30
11 ತಿಳಿವುಗಳ ಹೋಲಿಕೆ  

ಆ ಎಣ್ಣೆಯಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಬಳಿಕ ಮೋಶೆ ಅಭಿಷೇಕ ಎಣ್ಣೆಯಿಂದಲೂ ಬಲಿಪೀಠದ ಮೇಲಿದ್ದ ರಕ್ತದಿಂದಲೂ ಸ್ವಲ್ಪ ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೂ ಚಿಮುಕಿಸಿದನು. ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠಿಸಿದನು.


ಯಾರಿಗೆ ನಾನು ಕಲಾಕುಶಲತೆಯನ್ನು ಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥವರೊಡನೆ ಚರ್ಚಿಸಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕ ಸೇವೆಗೆ ಪ್ರತಿಷ್ಠಿತನಾಗಲಿ.


ಯಾಜಕ ಸೇವಾವೃತ್ತಿಯನ್ನು ಕೈಗೊಳ್ಳುವುದಕ್ಕೆ ಅಭಿಷೇಕದಿಂದ ಪ್ರತಿಷ್ಠಿತರಾದವರು ಇವರೇ.


ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನು ಕೂಡ ಅಭಿಷೇಕಿಸು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು,” ಎಂದು ಹೇಳಿದರು.


ಈ ಬಗೆಯ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸು. ಆಗ ಅವರು ನನಗೆ ಯಾಜಕರಾಗಿರುವರು.


ಅವು ಅತಿ ಪರಿಶುದ್ಧವಾಗುವಂತೆ ಪ್ರತಿಷ್ಠಿಸಬೇಕು. ಅವುಗಳಿಗೆ ಸೋಕಿದ್ದೆಲ್ಲವು ಪರಿಶುದ್ಧವಾಗುವುದು.


ನೀನು ಇಸ್ರಯೇಲರಿಗೆ, ‘ನೀವು ಮತ್ತು ನಿಮ್ಮ ಸಂತತಿಯವರು ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಅದು ರಮ್ಯ, ಸುರಿದ ಸುಗಂಧತೈಲ ಗಡ್ಡಕೆ ಇಳಿವಂತೆ I ಆರೋನನ ಗಡ್ಡದಿಂದ ಅವನ ಕೊರಳಪಟ್ಟಿಗೆ ಇಳಿವಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು