ವಿಮೋಚನಕಾಂಡ 30:36 - ಕನ್ನಡ ಸತ್ಯವೇದವು C.L. Bible (BSI)36 ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನ ಗುಡಾರದೊಳಗೆ ಆಜ್ಞಾಶಾಸನಗಳಿರುವ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ, ನಾನು ನಿನಗೆ ದರ್ಶನಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿಪರಿಶುದ್ಧವಾದದ್ದೆಂದು ನೀವು ತಿಳುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಸ್ವಲ್ಪ ಧೂಪವನ್ನು ಅರೆದು ಪುಡಿ ಮಾಡು. ಈ ಪುಡಿಯನ್ನು ದೇವದರ್ಶನಗುಡಾರದಲ್ಲಿರುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿಡು. ಈ ಧೂಪದ ಪುಡಿಯನ್ನು ಅದರ ವಿಶೇಷ ಉದ್ದೇಶಕ್ಕಾಗಿ ಮಾತ್ರವೇ ಉಪಯೋಗಿಸಬೇಕು. ಅದು ಅತಿ ಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅದರಲ್ಲಿ ಸ್ವಲ್ಪ ಪುಡಿಮಾಡಿ, ದೇವದರ್ಶನದ ಗುಡಾರದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇಡು. ಅದು ನಿಮಗೆ ಮಹಾಪರಿಶುದ್ಧವಾಗಿರಲಿ. ಅಧ್ಯಾಯವನ್ನು ನೋಡಿ |