Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:7 - ಕನ್ನಡ ಸತ್ಯವೇದವು C.L. Bible (BSI)

7 ಆರೋನನು ಪ್ರತಿನಿತ್ಯವು ಬೆಳಿಗ್ಗೆ ದೀಪಗಳನ್ನು ಸರಿಪಡಿಸುವಾಗ ಹಾಗು ಸಂಜೆದೀಪಗಳನ್ನು ಹೊತ್ತಿಸುವಾಗ ಆ ವೇದಿಕೆಯ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆರೋನನು ಪ್ರತಿನಿತ್ಯವೂ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಆರೋನನು ಪ್ರತಿಮುಂಜಾನೆ ಧೂಪವೇದಿಕೆಯ ಮೇಲೆ ಸುಗಂಧದ್ರವ್ಯಗಳ ಧೂಪವನ್ನು ಉರಿಸಬೇಕು. ಅವನು ದೀಪಗಳನ್ನು ಸರಿಪಡಿಸಲು ಬರುವಾಗ ಇದನ್ನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಅದರ ಮೇಲೆ ಆರೋನನು ಪರಿಮಳ ಧೂಪವನ್ನು ಸುಡಬೇಕು. ಪ್ರತಿದಿನ ಬೆಳಿಗ್ಗೆ ಸುಡಬೇಕು. ಪ್ರತಿದಿನ ಬೆಳಿಗ್ಗೆ ದೀಪಗಳನ್ನು ಸಿದ್ಧಮಾಡುವಾಗ ಅದನ್ನು ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:7
20 ತಿಳಿವುಗಳ ಹೋಲಿಕೆ  

ಇಸ್ರಯೇಲರ ಕುಟುಂಬಗಳಲ್ಲೆಲ್ಲಾ ಅವರನ್ನೇ, ಯಾಜಕ ಸೇವಾವೃತ್ತಿಗೆ ಆರಿಸಿಕೊಂಡೆ: ಅಂದರೆ, ಬಲಿಯರ್ಪಿಸುವುದಕ್ಕೆ, ಧೂಪಾರತಿ ಎತ್ತುವುದಕ್ಕೆ ಹಾಗು ‘ಏಫೋದ’ನ್ನು ಧರಿಸಿಕೊಳ್ಳುವುದಕ್ಕೆ ಆರಿಸಿಕೊಂಡೆ; ಇಸ್ರಯೇಲರು ಅರ್ಪಿಸುವ ಬಲಿಶೇಷದ ಹಕ್ಕನ್ನೂ ಅವರಿಗೆ ಅನುಗ್ರಹಿಸಿದೆ.


ಮಹಾದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಧೂಪಾರತಿಯನ್ನು ಅರ್ಪಿಸುವ ಸರದಿಗೆ, ಯಾಜಕರ ಸಂಪ್ರದಾಯದ ಪ್ರಕಾರ, ಚೀಟು ಹಾಕಿದಾಗ ಅದು ಜಕರೀಯನ ಪಾಲಿಗೆ ಬಂದಿತು. ಅಂತೆಯೇ, ಅವನು ಧೂಪಾರತಿಯನ್ನು ಅರ್ಪಿಸುತ್ತಿದ್ದಾಗ


ಅಮ್ರಾಮನ ಮಕ್ಕಳು ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾಪರಿಶುದ್ಧ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟಿದ್ದರು. ಇವರು ಸರ್ವೇಶ್ವರನ ಸನ್ನಿಧಿಯಲ್ಲಿ ಸದಾ ಧೂಪಾರತಿ ಎತ್ತುವವರೂ ಸೇವೆ ಮಾಡುವವರೂ ಸರ್ವೇಶ್ವರನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರಬೇಕಿತ್ತು.


ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು.


ಸಮುವೇಲನು ಸರ್ವೇಶ್ವರನ ಮಂದಿರದಲ್ಲಿ, ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ದೇವರ ದೀಪ ಇನ್ನೂ ಉರಿಯುತ್ತಿತ್ತು.


ಸರ್ವೇಶ್ವರ ಮೋಶೆಗೆ ಮತ್ತೆ ಆಜ್ಞಾಪಿಸಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ ಹಾಗು ಗಂಧದಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಮತ್ತು ಸ್ವಚ್ಚವಾದ ಧೂಪವನ್ನು ಸಮಭಾಗವಾಗಿ ತೆಗೆದುಕೊಂಡು ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ


ಆಜ್ಞಾಶಾಸನಗಳಿರುವ ಮಂಜೂಷದ ಮುಂದೆ ಇರುವ ತೆರೆಗೆ ಎದುರಾಗಿ ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಹಾಗು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.


ಹೀಗೆ ನಿಮ್ಮಿಂದ ಮತ್ತು ನಿಮ್ಮ ಸಂತತಿಯವರಿಂದ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಎಡೆಬಿಡದೆ ಧೂಪಾರ್ಪಣೆ ಇರಬೇಕು.


ಅದರ ಮೇಲೆ ಪರಿಮಳದ್ರವ್ಯಗಳ ಧೂಪವನ್ನು ಹಾಕಿದನು;


ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ


ಆರೋನನ ಸಂತತಿಯವರಲ್ಲದೆ ಇತರರು ಸರ್ವೇಶ್ವರನ ಸನ್ನಿಧಿಗೆ ಬಂದು ಧೂಪವನ್ನು ಅರ್ಪಿಸಬಾರದು; ಅರ್ಪಿಸಿದರೆ ಕೋರಹನಿಗೂ ಅವನ ಪಂಗಡದವರಿಗೂ ಆದ ಗತಿಗೆ ಗುರಿಯಾಗುವರು ಎಂದು ಇಸ್ರಯೇಲರಿಗೆ ಎಚ್ಚರಿಕೆ ನೀಡುವ ಚಿನ್ಹೆಯಾಯಿತು.


ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.


“ಉಜ್ಜೀಯರೇ, ಸರ್ವೇಶ್ವರನಿಗೆ ಧೂಪಾರತಿ ಎತ್ತುವುದು ನಿಮ್ಮ ಕೆಲಸವಲ್ಲ; ಅದಕ್ಕೆ ಆರೋನನ ಸಂತಾನದವರ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟು ಹೋಗಿ; ನೀವು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಸರ್ವೇಶ್ವರನಿಂದ ನಿಮಗೆ ಮರ್ಯಾದೆ ದೊರಕಲಾರದು,” ಎಂದರು.


ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.


ಎಲ್ಕಾನ, ಯೆರೋಹಾಮ, ಎಲೀಯೇಲ, ತೋಹ,


ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.


ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು; ಇಸ್ರಯೇಲ್‍ದೇವರ ಪವಿತ್ರಸ್ಥಾನದಲ್ಲಿ ಧೂಪಾರತಿ ಎತ್ತುವುದನ್ನೂ ದಹನಬಲಿ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.


ಸಮರ್ಪಕವಾಗಲಿ ನನ್ನ ಪ್ರಾರ್ಥನೆ ಧೂಪಾರತಿಯಂತೆ I ಕೈಮುಗಿದು ಮಾಡುವ ವಂದನೆ ಸಂಧ್ಯಾಬಲಿಯರ್ಪಣೆಯಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು