ವಿಮೋಚನಕಾಂಡ 31:14 - ಕನ್ನಡ ಸತ್ಯವೇದವು C.L. Bible (BSI)14 ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪವಿತ್ರವೆಂದು ವರ್ತಿಸುವವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ದುಡಿಯುವವನನ್ನು ತನ್ನ ಕುಲದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪರಿಶುದ್ಧವಾದದ್ದೆಂದು ಎಣಿಸಿ ನಡೆದವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಕೆಲಸವೇನಾದರೂ ಮಾಡುವವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “‘ಸಬ್ಬತ್ ದಿನವನ್ನು ವಿಶೇಷ ದಿನವೆಂದು ಪರಿಗಣಿಸಿ ಆಚರಿಸಿರಿ. ಆ ದಿನವನ್ನು ಬೇರೆ ದಿನದಂತೆ ಪರಿಗಣಿಸಿ ನಡೆಯುವವನಿಗೆ ಮರಣದಂಡನೆಯಾಗಬೇಕು. ಸಬ್ಬತ್ ದಿನದಲ್ಲಿ ಯಾವನಾದರೂ ಕೆಲಸಮಾಡಿದರೆ ಅವನನ್ನು ಬಹಿಷ್ಕರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ ‘ಹೀಗಿರುವುದರಿಂದ ನೀವು ಸಬ್ಬತ್ ದಿನವನ್ನು ಕೈಗೊಳ್ಳಬೇಕು. ಏಕೆಂದರೆ ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರ ಮಾಡುವ ಪ್ರತಿಯೊಬ್ಬನು ಸಾಯಲೇಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ, ಅವರನ್ನು ನಿಮ್ಮ ಜನರೊಳಗಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |