Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:16 - ಕನ್ನಡ ಸತ್ಯವೇದವು C.L. Bible (BSI)

16 ಆದುದರಿಂದ ಇಸ್ರಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆ ಅವರಿಗೂ ಅವರ ಪೀಳಿಗೆಗೂ ಶಾಶ್ವತವಾದ ಒಂದು ನಿಬಂಧನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದದರಿಂದ ಇಸ್ರಾಯೇಲ್ಯರು ಸಬ್ಬತ್ ದಿವಸವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಬಂಧನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲರು ಸಬ್ಬತ್ ದಿನವನ್ನು ಜ್ಞಾಪಿಸಿಕೊಂಡು ಅದನ್ನು ವಿಶೇಷ ದಿನವನ್ನಾಗಿ ಮಾಡಿಕೊಳ್ಳತಕ್ಕದ್ದು. ಅವರು ಇದನ್ನು ಎಂದೆಂದೂ ಮಾಡತಕ್ಕದ್ದು. ಇದು ಎಂದೆಂದಿಗೂ ಮುಂದುವರಿಯುವ ಒಡಂಬಡಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗಿರಲಾಗಿ ಇಸ್ರಾಯೇಲರು ತಮ್ಮ ತಲತಲಾಂತರಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ ದಿನವನ್ನು ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:16
7 ತಿಳಿವುಗಳ ಹೋಲಿಕೆ  

ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ನೀವು ನಿಮ್ಮ ಜನನಾಂಗದ ಮುಂದೊಗಲನ್ನು ಸುನ್ನತಿಮಾಡಿಸಿಕೊಳ್ಳಬೇಕು. ಅದೇ ನಿಮಗೂ ನನಗೂ ಆದ ಒಡಂಬಡಿಕೆಯ ಗುರುತು.


ಮೇಘಗಳಲ್ಲಿ ನಾನಿಟ್ಟಿರುವ ಮಳೆಬಿಲ್ಲೇ ಗುರುತು. ನನಗೂ ಭೂಪ್ರಾಣಿಗಳಿಗೂ ಆದ ಒಡಂಬಡಿಕೆಗೆ ಇದೇ ಕುರುಹು.


ಆರು ದಿನಗಳು ಕೆಲಸ ಮಾಡಬಹುದು. ಏಳನೆಯ ದಿನ ವಿಶ್ರಾಂತಿದಿನವಾದ ಸಬ್ಬತ್, ಸರ್ವೇಶ್ವರನಾದ ನನಗೆ ಪರಿಶುದ್ಧ ದಿನ. ಇಂಥ ಸಬ್ಬತ್ ದಿನದಲ್ಲಿ ದುಡಿಯುವವನಿಗೆ ಮರಣ ಶಿಕ್ಷೆಯಾಗಬೇಕು.


ನನಗೂ ಇಸ್ರಯೇಲರಿಗೂ ನಡುವೆ ಇದೊಂದು ಸದಾಕಾಲದ ಗುರುತು. ಆರು ದಿನಗಳಲ್ಲಿ ಸರ್ವೇಶ್ವರನಾದ ನಾನು ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿ ಏಳನೆಯ ದಿನದಲ್ಲಿ ದುಡಿಯದೆ ವಿಶ್ರಮಿಸಿಕೊಂಡೆನಲ್ಲವೆ?”


“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ


ಆ ಕಾಲದಲ್ಲಿ, ಜನರು ಸಬ್ಬತ್‍ದಿನ ಜುದೇಯನಾಡಿನಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನು ಕಂಡೆ; ಅಂತೆಯೇ ಕಣದ ಕಾಳನ್ನು ಕೂಡಿಸಿ ಆ ಕಾಳು, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು, ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಜೆರುಸಲೇಮಿಗೆ ತರುವುದನ್ನು ಗಮನಿಸಿದೆ. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ಅವರನ್ನು ಗದರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು