ವಿಮೋಚನಕಾಂಡ 32:10 - ಕನ್ನಡ ಸತ್ಯವೇದವು C.L. Bible (BSI)10 ಆದಕಾರಣ ನೀನು ನನಗೆ ಅಡ್ಡಬರಬೇಡ. ನನ್ನ ಕೋಪಾಗ್ನಿ ಉರಿಯಲಿ. ಅವರನ್ನು ಸುಟ್ಟು ಭಸ್ಮ ಮಾಡುವೆನು. ಬಳಿಕ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗ ಉದಯಿಸುವಂತೆ ಮಾಡುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದಕಾರಣ ನೀನು ನನ್ನನ್ನು ತಡೆಯಬೇಡ; ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡುವೆನು. ತರುವಾಯ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗವುಂಟಾಗುವಂತೆ ಮಾಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ನಾನು ಅವರನ್ನು ಕೋಪದಿಂದ ನಾಶಮಾಡಿಬಿಡುತ್ತೇನೆ. ನನ್ನನ್ನು ತಡೆಯಬೇಡ. ಬಳಿಕ ನಾನು ನಿನ್ನಿಂದ ಒಂದು ಮಹಾಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೀಗಿರುವುದರಿಂದ ನನ್ನ ಕೋಪಾಗ್ನಿಯು ಅವರ ಮೇಲೆ ಉರಿದು ಅವರನ್ನು ದಹಿಸಿಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು,” ಎಂದರು. ಅಧ್ಯಾಯವನ್ನು ನೋಡಿ |