Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:12 - ಕನ್ನಡ ಸತ್ಯವೇದವು C.L. Bible (BSI)

12 ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಐಗುಪ್ತ್ಯರು ನಿನ್ನ ವಿಷಯದಲ್ಲಿ - ಯೆಹೋವನು ಕೇಡುಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲ್ಯರನ್ನು ಇಲ್ಲಿಂದ ಕರಕೊಂಡು ಹೋದನಲ್ಲಾ; ಅವರನ್ನು ಬೆಟ್ಟಗಳಲ್ಲಿ ಸಾಯಿಸಿ ಭೂವಿುಯಲ್ಲಿ ಉಳಿಯದಂತೆ ನಿರ್ಮೂಲ ಮಾಡುವದಕ್ಕೇನೇ ಅವರನ್ನು ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾಗಬೇಕೇ? ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬೇರೆ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ‘ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಸಾಯಿಸಿ, ಭೂಮಿಯ ಮೇಲಿನಿಂದ ಅವರನ್ನು ಅಳಿಸಿಬಿಡುವುದಕ್ಕೂ, ದೇವರು ಅವರನ್ನು ಹೊರಗೆ ಬರಮಾಡಿದ್ದಾರೆ,’ ಎಂದು ಈಜಿಪ್ಟಿನವರು ಏಕೆ ಹೇಳಬೇಕು? ತಾವು ಕೋಪಾಗ್ನಿಯನ್ನು ಬಿಟ್ಟು ತಿರುಗಿಕೊಳ್ಳಿ. ನಿಮ್ಮ ಜನರಿಗೆ ವಿರೋಧವಾದ ಈ ಕೇಡಿನ ವಿಷಯದಲ್ಲಿ ತಮ್ಮ ಮನಸ್ಸನ್ನು ಬದಲಾಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:12
32 ತಿಳಿವುಗಳ ಹೋಲಿಕೆ  

ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ ಆ ದೇಶದವರು, ‘ಸರ್ವೇಶ್ವರ ಇಸ್ರಯೇಲರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೇ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.


ಕಾನಾನ್ಯರು ಮತ್ತು ನಾಡಿನ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರೇ ಉಳಿಯದಂತೆ ಮಾಡುವರು. ಆಗ ನಿಮ್ಮ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿರಿ?” ಎಂದನು.


ಆಗ ಸರ್ವೇಶ್ವರ ತಮ್ಮ ಪ್ರಜೆಗಳಿಗೆ ಮಾಡುವೆನೆಂದು ಹೇಳಿದ ಕೇಡಿನ ಬಗ್ಗೆ ಮನಸ್ಸನ್ನು ಮಾರ್ಪಡಿಸಿಕೊಂಡರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನಿಮ್ಮ ಪೂರ್ವಜರ ನಿಮಿತ್ತ ನಾನು ಕೋಪಗೊಂಡಾಗ, ನಿಮಗೆ ಕೇಡುಮಾಡಬೇಕೆಂದು ನಿಷ್ಕರುಣಿಯಾಗಿ ಸಂಕಲ್ಪಿಸಿದೆ.


ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”


ಒಡೆಯರಾದ ಸರ್ವೇಶ್ವರ ಇದನ್ನು ಕೇಳಿ ಮನಮರುಗಿ: “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.


ಇದನ್ನು ಕೇಳಿ ಸರ್ವೇಶ್ವರ ಮನಮರುಗಿದರು. “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.


ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಬಿಡುಗಡೆ ಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು, ಕೈಯನ್ನು ಹಿಂದಕ್ಕೆ ತೆಗೆದುಕೊಂಡೆ.


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II


ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II


ತೊರೆದುಬಿಟ್ಟೆ ಸ್ವಾಮೀ, ನಿನ್ನ ರೋಷವನು I ಆರಿಸಿಬಿಟ್ಟೆ ನಿನ್ನ ಕೋಪಾಗ್ನಿಯನು II


ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II


ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II


ಆದುದರಿಂದ ನಮ್ಮ ಮುಂದಾಳುಗಳು ಸರ್ವಸಮೂಹದ ಪರವಾಗಿ ಈ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರು, ನೇಮಿತ ದಿನದಲ್ಲಿ, ತಮ್ಮ ಊರಿನ ಹಿರಿಯರೊಡನೆ ಹಾಗು ನ್ಯಾಯಾಧಿಪತಿಗಳೊಡನೆ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಬಗ್ಗೆ ತಾಳಿರುವ ಉಗ್ರಕೋಪ ಹೀಗೆ ಪರಿಹಾರವಾಗಲಿ,” ಎಂದು ಉತ್ತರಕೊಟ್ಟರು.


ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಗುಡ್ಡೆಯನ್ನು ಹಾಕಿದರು. ಅದು ಇಂದಿನವರೆಗೂ ಇದೆ. ಬಳಿಕ ಸರ್ವೇಶ್ವರನ ಕೋಪಾಗ್ನಿ ತಣ್ಣಗಾಯಿತು. ಈ ಘಟನೆಯಿಂದಾಗಿ ಆ ಸ್ಥಳಕ್ಕೆ ‘ಆಕೋರಿನ ಕಣಿವೆ’ ಎಂಬ ಹೆಸರು ಬಂದಿತು.


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ಆ ಶಾಪಗ್ರಸ್ತ ವಸ್ತುಗಳಲ್ಲಿ ನೀವು ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು.


ಇದನ್ನು ಕಂಡ ಸರ್ವೇಶ್ವರ ಮನುಜನನ್ನು ಇಲ್ಲಿ ಸೃಷ್ಟಿಮಾಡಿದ್ದಕ್ಕಾಗಿ ವ್ಯಥೆಪಟ್ಟು,


ನನಗೆ ನಿಮ್ಮ ದಯೆ ದೊರಕಿದೆಯಾದರೆ ನಾನು ನಿಮ್ಮನ್ನು ಬಲ್ಲವನಾಗಿರುವಂತೆ ನಿಮ್ಮ ಮಾರ್ಗವನ್ನು ನನಗೆ ತೋರಿಸಿರಿ. ಆಗ ನಿಮ್ಮ ದಯೆ ನನಗೆ ದೊರಕಿದೆಯೆಂದು ತಿಳಿದುಕೊಳ್ಳುತ್ತೇನೆ. ಈ ಜನ ನಿಮ್ಮ ಪ್ರಜೆಯೆಂಬುದನ್ನು ನೆನಪಿನಲ್ಲಿಡಿ,” ಎಂದು ಅರಿಕೆ ಮಾಡಿದನು.


“ನೀವು ಈ ಸಮುದಾಯದವರಿಂದ ಪ್ರತ್ಯೇಕವಾಗಿ ನಿಲ್ಲಿ; ನಾನು ಇವರನ್ನು ಒಂದು ಕ್ಷಣಮಾತ್ರದಲ್ಲಿ ಭಸ್ಮ ಮಾಡಿಬಿಡುತ್ತೇನೆ,” ಎಂದರು.


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ಅವರು ನಿಮಗೆ ವಿರುದ್ಧ ಮಾಡಿದ ಎಲ್ಲಾ ಅಪರಾಧದ್ರೋಹಗಳನ್ನು ಕ್ಷಮಿಸಿರಿ; ಅವರನ್ನು ಸೆರೆಗೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸಿರಿ.


ಆದಕಾರಣ ಸರ್ವೇಶ್ವರ ಇಂತೆನ್ನುತ್ತಾರೆ: ಇಗೋ, ನಾನು ನಿನ್ನನ್ನು ಈ ಜಗತ್ತಿನಿಂದ ತೊಲಗಿಸುವೆನು. ನೀನು ಸರ್ವೇಶ್ವರನಾದ ನನಗೆ ವಿರುದ್ಧವಾಗಿ ದ್ರೋಹದ ಮಾತುಗಳನ್ನು ಆಡಿದ್ದರಿಂದ ಇದೇ ವರ್ಷ ಸಾಯುವೆ,” ಎಂದು ಹೇಳಿದನು.


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ನಾವು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ದಿನದಿಂದ ಇಂದಿನವರೆಗೆ ಈ ಜನರ ಪಾಪಗಳನ್ನು ಕ್ಷಮಿಸಿದ್ದೀರಿ. ಅದೇ ಪ್ರಕಾರ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು