ವಿಮೋಚನಕಾಂಡ 32:14 - ಕನ್ನಡ ಸತ್ಯವೇದವು C.L. Bible (BSI)14 ಆಗ ಸರ್ವೇಶ್ವರ ತಮ್ಮ ಪ್ರಜೆಗಳಿಗೆ ಮಾಡುವೆನೆಂದು ಹೇಳಿದ ಕೇಡಿನ ಬಗ್ಗೆ ಮನಸ್ಸನ್ನು ಮಾರ್ಪಡಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬೇರೆ ಮಾಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು. ಅಧ್ಯಾಯವನ್ನು ನೋಡಿ |
ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.