Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:16 - ಕನ್ನಡ ಸತ್ಯವೇದವು C.L. Bible (BSI)

16 ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದವು. ಅವುಗಳಲ್ಲಿ ಬರೆದಿದ್ದು ದೇವರು ಕೆತ್ತಿದ ಅಕ್ಷರಗಳೇ ಆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದು, ಅವುಗಳಲ್ಲಿ ಕೆತ್ತಿದ ಅಕ್ಷರಗಳು ದೇವರೇ ಬರೆದದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಶಿಲಾಶಾಸನಗಳು ದೇವರ ಕೆಲಸವೇ; ಅವುಗಳಲ್ಲಿ ಬರೆದದ್ದು ದೇವರು ಕೆತ್ತಿದ ಅಕ್ಷರಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ತಾನೇ ಆ ಕಲ್ಲುಗಳನ್ನು ಮಾಡಿ ಅವುಗಳ ಮೇಲೆ ಬರೆದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಹಲಗೆಗಳು ದೇವರ ಕೆಲಸಗಳಾಗಿದ್ದವು. ಆ ಹಲಗೆಗಳ ಮೇಲೆ ಕೆತ್ತಿದ ಬರಹವು ದೇವರದ್ದೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:16
12 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವುದನ್ನು ಮುಗಿಸಿದ ಮೇಲೆ ಅವನಿಗೆ ತಮ್ಮ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳಾದ ಎರಡು ಆಜ್ಞಾಶಾಸನಗಳನ್ನು ಕೊಟ್ಟರು.


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.


ಕಲ್ಲಿನ ಮೇಲೆ ಕೊರೆಯಲಾದ ಶಾಸನ ಪ್ರಕಟವಾದಾಗ ದೇವರ ಮಹಿಮೆ ಕಾಣಿಸಿಕೊಂಡಿತು. ಆಗ ಮೋಶೆಯ ಮುಖವನ್ನು ಆವರಿಸಿದ್ದ ಪ್ರಭೆ ಕುಂದಿಹೋಗುವಂಥದ್ದಾಗಿದ್ದರೂ ಆ ಪ್ರಭೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿನೋಡಲು ಇಸ್ರಯೇಲರಿಗೆ ಆಗಲಿಲ್ಲ.


“ಆ ಕಾಲದಲ್ಲಿ ಸರ್ವೇಶ್ವರ ನನಗೆ, ‘ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಬೇರೆ ಎರಡು ಹಲಗೆಗಳನ್ನು ಸಿದ್ಧಪಡಿಸಿಕೊಂಡು ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.


ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುತ್ತಿದ್ದ ಆ ಬೆಟ್ಟದಿಂದ ಇಳಿದುಬಂದು ನೋಡಿದೆ.


ಅಂತೆಯೇ ಮೋಶೆ ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೊಂಡು, ಸರ್ವೇಶ್ವರನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟವನ್ನು ಹತ್ತಿದನು.


ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನು ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದುಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು.


ಮೋಶೆ ಆಜ್ಞಾಶಾಸನಗಳಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಗೆಗಳ ಎರಡು ಪಕ್ಕಗಳಲ್ಲೂ ಅಕ್ಷರಗಳು ಬರೆದಿದ್ದವು. ಇಕ್ಕಡೆಗಳಲ್ಲೂ ಬರಹವಿತ್ತು.


ಇತ್ತ ಇಸ್ರಯೇಲರು ಕೇಕೆ ಹಾಕುತ್ತಾ ಕೂಗಾಡುತ್ತಿದ್ದುದನ್ನು ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಕಾಳಗದ ಧ್ವನಿ ಕೇಳಿಸುತ್ತಿದೆ,” ಎಂದು ಹೇಳಿದನು.


ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು ಶಾಶ್ವತ ಶಾಸನವಾಗಿಸಿದ್ದರೆ ಎಷ್ಟೋ ಒಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು