ವಿಮೋಚನಕಾಂಡ 32:26 - ಕನ್ನಡ ಸತ್ಯವೇದವು C.L. Bible (BSI)26 ಹೀಗೆ ಅವರು ಕ್ರಮವಿಲ್ಲದೆ ಸ್ವೇಚ್ಛಾಚಾರದಿಂದ ನಡೆದುಕೊಳ್ಳುವುದನ್ನು ಮೋಶೆ ನೋಡಿ, ಪಾಳೆಯದ ಹೊರಬಾಗಿಲಲ್ಲಿ ನಿಂತುಕೊಂಡು, “ಸರ್ವೇಶ್ವರನ ಪರವಾಗಿರುವವರೆಲ್ಲರು ನನ್ನ ಬಳಿಗೆ ಬರಬೇಕು,” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವರು ಕ್ರಮವಿಲ್ಲದೆ ಸ್ವೇಚ್ಫೆಯಾಗಿ ನಡೆದುಕೊಳ್ಳುವದನ್ನು ಮೋಶೆ ನೋಡಿ ಪಾಳೆಯದ ಬಾಗಲಲ್ಲಿ ನಿಂತುಕೊಂಡು - ಯೆಹೋವನ ಪಕ್ಷದವರೆಲ್ಲರು ನನ್ನ ಬಳಿಗೆ ಬರಬೇಕು ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ಪಾಳೆಯದ ದ್ವಾರದಲ್ಲಿ ಮೋಶೆಯು ನಿಂತು, “ಯೆಹೋವನ ಪಕ್ಷದವರು ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಲೇವಿ ಕುಲದವರೆಲ್ಲಾ ಮೋಶೆಯ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಮೋಶೆಯು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವ ದೇವರ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಲಿ,” ಎಂದನು. ಆಗ ಲೇವಿಯರೆಲ್ಲರು ಅವನ ಬಳಿಗೆ ಕೂಡಿಬಂದರು. ಅಧ್ಯಾಯವನ್ನು ನೋಡಿ |