Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:28 - ಕನ್ನಡ ಸತ್ಯವೇದವು C.L. Bible (BSI)

28 ಲೇವಿಯ ಕುಲದವರು ಮೋಶೆಯ ಆಜ್ಞೆಯ ಮೇರೆಗೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಲೇವಿಯ ಕುಲದವರು ಮೋಶೆಯ ಆಜ್ಞೆಯ ಪ್ರಕಾರವೇ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಲೇವಿಯ ಕುಲದವರು ಮೋಶೆಯ ಆಜ್ಞೆಯ ಮೇರೆಗೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಕೊಲ್ಲಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಲೇವಿಕುಲದವರು ಮೋಶೆಯ ಮಾತಿಗೆ ವಿಧೇಯರಾದರು. ಅಂದು ಇಸ್ರೇಲರಲ್ಲಿ ಸುಮಾರು ಮೂರು ಸಾವಿರ ಮಂದಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಲೇವಿಯರು ಮೋಶೆಯು ಆಜ್ಞಾಪಿಸಿದಂತೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:28
12 ತಿಳಿವುಗಳ ಹೋಲಿಕೆ  

ನಿನ್ನ ಆಜ್ಞೆಗಳನ್ನು ಕೈಗೊಳ್ಳಲೆಂದು ನಿನ್ನ ಒಡಂಬಡಿಕೆಯನು ಕಾದಿರಿಸಲೆಂದು ‘ತಂದೆತಾಯಿಗಳ ಪರಿಚಯವಿಲ್ಲ ಅಣ್ಣತಮ್ಮಂದಿರ ಅರಿವಿಲ್ಲ ಸ್ವಂತ ಮಕ್ಕಳ ಗುರುತಿಲ್ಲ’ ಎಂದನಿವನು.


ಅವರಲ್ಲಿ ಕೆಲವರು ಹಾದರಮಾಡಿದ್ದರಿಂದ ಒಂದೇ ದಿನದಲ್ಲಿ ಇಪ್ಪತ್ತಮೂರು ಸಾವಿರಮಂದಿ ಸತ್ತರು. ನಾವು ಹಾದರದಿಂದ ದೂರವಿರಬೇಕು.


ಆದರೂ ಇಸ್ರಯೇಲ್ ಸಮುದಾಯದವರು ಮೋಶೆ ಮತ್ತು ಆರೋನರ ಮೇಲೆ ಗೊಣಗುಟ್ಟ ತೊಡಗಿದರು. ‘ಸರ್ವೇಶ್ವರನ ಜನರನ್ನು ಸಾಯಸಿದವರು ನೀವೇ’ ಎಂದು ಹೇಳುವವರಾದರು.


ಮೋಶೆ ಅವರಿಗೆ, “ಇಸ್ರಯೇಲರ ದೇವರಾದ ಸರ್ವೇಶ್ವರನ ಅಪ್ಪಣೆ ಇದು: ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ನಡುವೆ ಒಂದು ಬಾಗಿಲಿನಿಂದ ಇನ್ನೊಂದು ಬಾಗಿಲಿನವರೆಗೆ ಹೋಗುತ್ತಾ ಬರುತ್ತಾ ಅಣ್ಣ-ತಮ್ಮ, ಗೆಳೆಯ-ನೆರೆಯವ ಎಂದು ಲಕ್ಷಿಸದೆ ಈ ಜನರನ್ನು ಸಂಹರಿಸಬೇಕು,” ಎಂದು ಹೇಳಿದನು.


ಮೋಶೆ ಆ ಲೇವಿಯರಿಗೆ, “ಈದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನೇ ಸರ್ವೇಶ್ವರನ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.


ಇಸ್ರಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿದ್ದರಿಂದ ಸರ್ವೇಶ್ವರ ಅವರನ್ನು ದಂಡಿಸಿದರು.


ಕೂಡಲೆ ಮಹಾಯಾಜಕ ಆರೋನನ ಮೊಮ್ಮಗನೂ ಹಾಗು ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ಕೈಗೆ ತೆಗೆದುಕೊಂಡನು.


ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ I ತಪ್ಪನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ II


ಇಸ್ರಯೇಲರ ಸೊತ್ತಿನಲ್ಲಿ ಆಯಾ ಕುಲದ ಸೊತ್ತಿನ ಅಳತೆಗೆ ತಕ್ಕಹಾಗೆ, ಅಂದರೆ ಹೆಚ್ಚು ಉಳ್ಳವರಿಂದ ಹೆಚ್ಚಾಗಿಯೂ ಕಡಿಮೆ ಉಳ್ಳವರಿಂದ ಕಡಿಮೆಯಾಗಿಯೂ ಲೇವಿಯರಿಗೆ ಊರುಗಳನ್ನು ಕೊಡಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು