Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:3 - ಕನ್ನಡ ಸತ್ಯವೇದವು C.L. Bible (BSI)

3 ಜನರೆಲ್ಲರು ತಮ್ಮ ತಮ್ಮ ಕಿವಿಯೋಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ಮುರುವುಗಳನ್ನು ಕಿತ್ತು ಆರೋನನ ಬಳಿಗೆ ತಂದು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ಅವರೆಲ್ಲರೂ ತಮ್ಮ ಚಿನ್ನದ ಓಲೆಗಳನ್ನು ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಜನರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:3
10 ತಿಳಿವುಗಳ ಹೋಲಿಕೆ  

ಆ ಬೊಂಬೆಗಳ ಭೂಷಣಕ್ಕಾಗಿ ಸಾಗಿಬರುತ್ತವೆ ತಾರ್ಷೀಷಿನಿಂದ ಬೆಳ್ಳೀತಗಡುಗಳು, ಊಫಜಿನಿಂದ ಚಿನ್ನ. ಅವು ಕೆತ್ತನೆಗಾರನ, ಎರಕದವನ ಕೈಕೆಲಸಗಳು ಅವುಗಳ ಉಡುಪು ನೀಲಧೂಮ್ರ ವರ್ಣದ ವಸ್ತ್ರಗಳು. ಇವೆಲ್ಲವು ಕೇವಲ ಕಲಾಕುಶಲರ ಕೌಶಲ್ಯಗಳು.


ಸುರಿಯುತ್ತಾರೆ ಜನರು ಚಿನ್ನವನ್ನು ಚೀಲದಿಂದ ತೂಗಿ ತೂಕಹಾಕುತ್ತಾರೆ ಬೆಳ್ಳಿಯನ್ನು ತಕ್ಕಡಿಯಿಂದ. ದೇವರನ್ನು ಮಾಡಿಸುತ್ತಾರೆ ಕೂಲಿಕೊಟ್ಟು ಅಕ್ಕಸಾಲಿಗನಿಂದ ಪೂಜಿಸುತ್ತಾರೆ ಅದನ್ನು ಸಾಷ್ಟಾಂಗ ನಮಸ್ಕಾರದಿಂದ.


ಒಂಟೆಗಳು ಕುಡಿದಾದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ತೊಡಿಸಿದನು.


ಅಂತೆಯೆ ಅವರು ತಮ್ಮಲ್ಲಿದ್ದ ಎಲ್ಲ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಕೋಬನಿಗೆ ಒಪ್ಪಿಸಿಬಿಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರ ಇದ್ದ ಒಂದು ಓಕ್ ಮರದ ಬುಡದಡಿಯಲ್ಲಿ ಹೂಳಿಬಿಟ್ಟನು.


ಅದಕ್ಕೆ ಆರೋನನು, “ನಿಮ್ಮ ಹೆಂಡತಿಯರು, ಗಂಡುಮಕ್ಕಳು ಹಾಗು ಹೆಣ್ಣುಮಕ್ಕಳು ಹಾಕಿಕೊಂಡಿರುವ ಚಿನ್ನದ ಕಿವಿಯೋಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ,” ಎಂದನು.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.


ಅಂತೆಯೇ ಇಸ್ರಯೇಲರು ಹೋರೆಬ್ ಬೆಟ್ಟದಿಂದೀಚೆಗೆ ಒಡವೆವಸ್ತುಗಳನ್ನು ತೊಟ್ಟುಕೊಳ್ಳದೆ ಇದ್ದರು.


ಜುಮಕಿ, ಬಳೆ, ಕುಲಾವಿ, ಶಿರವಸ್ತ್ರ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು