Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:32 - ಕನ್ನಡ ಸತ್ಯವೇದವು C.L. Bible (BSI)

32 ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಲ್ಲವಾದರೆ ನೀನು ಬರೆದಿರುವ [ಜೀವಿತರ] ಪಟ್ಟಿಯಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:32
26 ತಿಳಿವುಗಳ ಹೋಲಿಕೆ  

ಉಳಿಸಬೇಡವರನು ಜೀವಬಾಧ್ಯರ ಪಟ್ಟಿಯಲಿ I ಸೇರಿಸಬೇಡವರನು ಸಜ್ಜನರ ಸಂಖ್ಯೆಯಲಿ II


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ನಾನಿನ್ನೂ ಭ್ರೂಣವಾಗಿದ್ದಾಗ ನೋಡಿದವು ನಿನ್ನ ಕಣ್ಣುಗಳು I ಪ್ರಾರಂಭವಾಗುವುದಕ್ಕೆ ಮುನ್ನ ನನ್ನ ಆಯುಷ್ಕಾಲದ ದಿನಗಳು I ಲಿಖಿತವಾದವು ಅವುಗಳಲೊಂದೂ ತಪ್ಪದೆ ನಿನ್ನ ಪುಸ್ತಕದೊಳು II


ನನ್ನ ಅಲೆಮಾರಿತನದ ಲೆಕ್ಕವಿಟ್ಟಿರುವೆ ನಿನ್ನಲಿ I ನನ್ನ ಕಣ್ಣೀರನು ತುಂಬಿಡು ನಿನ್ನ ಬುದ್ದಲಿಯಲಿ I ಅದರ ಕತೆ ಬರೆದಿದೆಯಲ್ಲವೆ ನಿನ್ನ ಪುಸ್ತಕದಲಿ? II


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಆದಕಾರಣ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮನ್ನು ಸೇರಿಸಿ, ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ, ಜಗದಲ್ಲಿ ಅಮಾಲೇಕ್ಯರ ಹೆಸರೇ ಉಳಿಯದಂತೆ ಮಾಡಬೇಕು; ಇದನ್ನು ಮರೆಯಬೇಡಿ.


ಇವರು ನನ್ನ ಆಜ್ಞೆಗೆ ಬಗ್ಗದವರು. ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವೊಂದು ನಿನ್ನಿಂದುಂಟಾಗುವಂತೆ ಮಾಡುವೆನು,’ ಎಂದು ಹೇಳಿದರು.


ನಾವು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ದಿನದಿಂದ ಇಂದಿನವರೆಗೆ ಈ ಜನರ ಪಾಪಗಳನ್ನು ಕ್ಷಮಿಸಿದ್ದೀರಿ. ಅದೇ ಪ್ರಕಾರ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.


ಆದಕಾರಣ ನೀನು ನನಗೆ ಅಡ್ಡಬರಬೇಡ. ನನ್ನ ಕೋಪಾಗ್ನಿ ಉರಿಯಲಿ. ಅವರನ್ನು ಸುಟ್ಟು ಭಸ್ಮ ಮಾಡುವೆನು. ಬಳಿಕ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗ ಉದಯಿಸುವಂತೆ ಮಾಡುವೆನು,” ಎಂದು ಹೇಳಿದರು.


ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು.


ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?”


ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ಯಾವನಾದರೂ ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳಲ್ಲಿ ಏನನ್ನಾದರೂ ತೆಗೆದುಹಾಕಿದರೆ, ಈ ಪುಸ್ತಕದಲ್ಲಿ ವಿವರಿಸಿರುವ ಜೀವವೃಕ್ಷದಲ್ಲಿಯೂ ಪವಿತ್ರನಗರದಲ್ಲಿಯೂ ಅವನಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.”


ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.


ನೀವು ಹೀಗೆ ಮಾಡುವುದಕ್ಕಿಂತಲೂ ನನ್ನನ್ನು ಈ ಕೂಡಲೆ ಕೊಂದುಹಾಕಿದರೆ ಉಪಕಾರವಾದೀತು; ನನಗಾಗುತ್ತಿರುವ ಸಂಕಟವನ್ನು ಸಹಿಸಲಾರೆ,” ಎಂದನು.


ಇದನ್ನು ಕೇಳಿದ್ದೇ ಅರಸನ ಎದೆಯೊಡೆಯಿತು. ಅವನು, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು! ಅಬ್ಷಾಲೋಮನೇ, ನನ್ನ ಮಗನೇ ಮಗನೇ,” ಎಂದು ಕೂಗಿ ಗೋಳಿಡುತ್ತಾ ಹೆಬ್ಬಾಗಿಲಿನ ಮೇಲಿದ್ದ ಕೋಣೆಗೆ ಹೋದನು.


ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.


ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇವರು ನನ್ನ ಜನರು; ನಾನು ಕಾರ್ಯತತ್ಪರನಾಗುವ ದಿನದಂದು ಅವರು ನನಗೆ ಸ್ವಕೀಯಜನರಾಗಿರುವರು. ತಂದೆಯೊಬ್ಬನು ತನಗೆ ಸೇವೆಮಾಡುವ ಮಗನನ್ನು ಕಾಪಾಡುವಂತೆ ನಾನು ಅವರನ್ನು ಕಾಪಾಡುವೆನು.


ಆಗ ಸರ್ವೇಶ್ವರ ಮೇಘದಲ್ಲಿ ಇಳಿದುಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು