Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:34 - ಕನ್ನಡ ಸತ್ಯವೇದವು C.L. Bible (BSI)

34 ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡಿಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆಯಲ್ಲಿ ನಡೆಯುವನು. ಆದರೂ ನಾನು ಅವರನ್ನು ಶಿಕ್ಷಿಸುವಾಗ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:34
21 ತಿಳಿವುಗಳ ಹೋಲಿಕೆ  

ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


“ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೆ ಹಾಗು ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆದುತರುವುದಕ್ಕೆ ಒಬ್ಬ ದೂತನನ್ನು ನಿಮ್ಮ ಮುಂದೆ ಕಳಿಸುತ್ತೇನೆ.


ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.


ಇಸ್ರಯೇಲರ ಪಾಪಕೃತ್ಯಗಳಿಗಾಗಿ ಅವರನ್ನು ದಂಡಿಸುವೆನು. ಬೇತೇಲಿನ ಯಜ್ಞವೇದಿಗಳನ್ನು ಚೂರುಚೂರು ಮಾಡುವೆನು. ಆ ಯಜ್ಞವೇದಿಯ ಮೂಲೆಕೊಂಬುಗಳನ್ನು ಕತ್ತರಿಸಿ ಬೀದಿಪಾಲಾಗಿಸುವೆನು.


“ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ.


ಇವುಗಳ ನಿಮಿತ್ತ ನಾನು ದಂಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪವನ್ನು ತೀರಿಸದಿರುವೆನೋ?


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ I ತಪ್ಪನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ II


ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ.


ನಾನು ಒಬ್ಬ ದೂತನನ್ನು ನಿನಗೆ ಮುಂದಾಗಿ ಕಳಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು, ಹಾಗು ಯೆಬೂಸಿಯರನ್ನು ಅಲ್ಲಿಂದ ಹೊರದೂಡುವೆನು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ ನೀನವರನ್ನು ತಂದು ನೆಲೆಗೊಳಿಸುವೆ. ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ.


ಮೋಶೆ ಸರ್ವೇಶ್ವರ ಸ್ವಾಮಿಗೆ, ” ಈ ಜನರನ್ನು ಇಂಥ ಈ ನಾಡಿಗೆ ನಡೆಸಿಕೊಂಡು ಹೋಗಬೇಕೆಂದು ನನಗೆ ನೀವು ವಿಧಿಸಿದಿರಿ. ನನ್ನ ಸಂಗಡ ಬೇರೆ ಯಾರನ್ನು ಕಳುಹಿಸುವಿರೆಂದು ನನಗೆ ತಿಳಿಸಲಿಲ್ಲ. ‘ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ. ನಿನಗೆ ನನ್ನ ದಯೆ ದೊರಕಿದೆ,’ ಎಂದು ಹೇಳಿದ್ದೀರಿ.


ಇಸ್ರಯೇಲರ ದೇವರಾದ ಸರ್ವೇಶ್ವರ, ತಮ್ಮ ಜನರೆಂಬ ಕುರಿಗಳನ್ನು ಮೇಯಿಸುವ ಕುರಿಗಾಹಿಗಳ ದ್ರೋಹವನ್ನು ಅರಿತಿದ್ದಾರೆ. ಅಂಥವರನ್ನು ಕುರಿತು ಹೀಗೆನ್ನುತ್ತಾರೆ : “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟಿದ್ದೀರಿ. ಅವುಗಳ ಬಗ್ಗೆ ಎಚ್ಚರ ವಹಿಸಲೇ ಇಲ್ಲ. ನಿಮ್ಮ ನೀಚಕಾರ್ಯಗಳ ನಿಮಿತ್ತ ನಿಮ್ಮನ್ನು ವಿಚಾರಣೆಗೆ ಗುರಿಪಡಿಸುವೆನು.


ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು