Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:4 - ಕನ್ನಡ ಸತ್ಯವೇದವು C.L. Bible (BSI)

4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಬಸವನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಲಾಗಿ ಅವರು - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡುಬಂದ ದೇವರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:4
36 ತಿಳಿವುಗಳ ಹೋಲಿಕೆ  

ಅವರಾದರೋ ಎರಕದ ಹೋರಿಕರುವನು ಮಾಡಿಕೊಂಡರು ತಮ್ಮನು ಈಜಿಪ್ಟಿನಿಂದ ಕರೆತಂದುದು ಅದೇ ಎಂದುಕೊಂಡರು. ಈ ಪರಿಯ ವರ್ತನೆಯಿಂದ ನಿಮ್ಮನ್ನೇ ಅಸಡ್ಡೆಮಾಡಿಬಿಟ್ಟರು.


ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಿ ಲೋಹದ ಹೋರಿಕರುವನ್ನು ಮಾಡಿಸಿಕೊಂಡು ಸರ್ವೇಶ್ವರ ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟುಹೋದದ್ದು ನನಗೆ ಕಂಡುಬಂದಿತು.


ಮಾತ್ರವಲ್ಲ, ಹೋರಿಕರುವಿನ ಆಕಾರದ ವಿಗ್ರಹವೊಂದನ್ನು ಮಾಡಿ ಅದಕ್ಕೆ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಿಗಾಗಿ ಮೆರೆದಾಡಿದರು.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ.


ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ


ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.


“ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು.


ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.


ಸುರಿಯುತ್ತಾರೆ ಜನರು ಚಿನ್ನವನ್ನು ಚೀಲದಿಂದ ತೂಗಿ ತೂಕಹಾಕುತ್ತಾರೆ ಬೆಳ್ಳಿಯನ್ನು ತಕ್ಕಡಿಯಿಂದ. ದೇವರನ್ನು ಮಾಡಿಸುತ್ತಾರೆ ಕೂಲಿಕೊಟ್ಟು ಅಕ್ಕಸಾಲಿಗನಿಂದ ಪೂಜಿಸುತ್ತಾರೆ ಅದನ್ನು ಸಾಷ್ಟಾಂಗ ನಮಸ್ಕಾರದಿಂದ.


ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿಕರುಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಸರ್ವೇಶ್ವರನ ರಾಜ್ಯಕ್ಕೆ ವಿರುದ್ಧ ದಂಗೆಯೆದ್ದು ಗೆಲ್ಲಬಹುದೆಂದು ನೆನಸುತ್ತೀರೋ?


ತಾವೇ ಏರ್ಪಡಿಸಿದ್ದ ಪೂಜಾಸ್ಥಳಗಳಿಗಾಗಿ ಹಾಗೂ ಅಜದೇವತೆ, ಹೋರಿಕರುಗಳ ಮೂರ್ತಿಪೂಜೆಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿಕೊಂಡಿದ್ದರು. ಆದುದರಿಂದ ಅವರು ಗೋಮಾಳಗಳಿದ್ದ ತಮ್ಮ ಸೊತ್ತುಗಳನ್ನು ಬಿಟ್ಟು ಜುದೇಯನಾಡಿಗೂ ಜೆರುಸಲೇಮಿಗೂ ಬಂದರು.


ಆದ್ದರಿಂದ ನೀವು ನನಗೆ ಪ್ರತಿಯಾಗಿ ಬೆಳ್ಳಿಬಂಗಾರಗಳಿಂದ ದೇವರುಗಳನ್ನು ಮಾಡಿಕೊಳ್ಳಬಾರದು,


ಆದರೂ ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಕೈಬಿಡದೆ, ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಹೋರಿಕರುಗಳನ್ನು ಪೂಜಿಸುತ್ತಿದ್ದನು.


‘ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಯೇಲರು ನೋಡಿ, ಆರೋನನ ಬಳಿಗೆ ಕೂಡಿಬಂದರು. ಅವನಿಗೆ, “ಈಜಿಪ್ಟ್ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆ ಏನಾದನೋ ಗೊತ್ತಿಲ್ಲ. ಆದ್ದರಿಂದ ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು,” ಎಂದು ಕೇಳಿದರು.


ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ, ನಾಡಿನ ಜಾತ್ರೆಗೆ ಸಮನಾದ ಜಾತ್ರೆ ಬೇತೇಲಿನಲ್ಲಿ ನಡೆಯಬೇಕೆಂದು ಅಪ್ಪಣೆ ಮಾಡಿದನು. ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ್ದ ಹೋರಿಕರುಗಳ ಮೂರ್ತಿಗಳಿಗೆ, ಪೀಠದ ಮೇಲೆ ಬಲಿ ಅರ್ಪಿಸಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.


ಮುದ್ರಾ, ರತ್ನವನ್ನು ಕೆತ್ತುವಂತೆ, ಈ ಎರಡು ರತ್ನಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.


ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸು.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಅವರಲ್ಲಿ ಕೆಲವರು ವಿಗ್ರಹಾರಾಧಕರಾದಂತೆ ನಾವು ಆಗಬಾರದು. ಇವರನ್ನು ಕುರಿತೇ : “ತಿನ್ನಲೆಂದು ಕುಡಿಯಲೆಂದು ಕುಳಿತರು ಕುಣಿಯಲೆಂದು ಕಾಮವೆದ್ದು ನಿಂತರು ಈ ಜನರು” - ಎಂದು ಬರೆದಿದೆ.


ಜನರೆಲ್ಲರು ತಮ್ಮ ತಮ್ಮ ಕಿವಿಯೋಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದುಕೊಟ್ಟರು.


ಆರೋನನು ಇದನ್ನು ನೋಡಿ ಆ ಹೋರಿಕರುವಿನ ಮುಂದೆ ಒಂದು ಬಲಿಪೀಠವನ್ನು ಕಟ್ಟಿಸಿ, “ನಾಳೆ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಹಬ್ಬವನ್ನು ಆಚರಿಸಬೇಕು,” ಎಂದು ಪ್ರಕಟಿಸಿದನು.


ಇತ್ತ ಸರ್ವೇಶ್ವರ ಮೋಶೆಗೆ, “ನೀನು ಕೂಡಲೆ ಬೆಟ್ಟದಿಂದ ಇಳಿದುಹೋಗು, ಈಜಿಪ್ಟಿನಿಂದ ನೀನು ಕರೆದುತಂದ ನಿನ್ನ ಜನರು ಕೆಟ್ಟುಹೋದರು.


ಅದಕ್ಕೆ ನಾನು, “ಯಾರಲ್ಲಿ ಚಿನ್ನದ ಒಡವೆ ಇದೆಯೋ ಅವರೆಲ್ಲರು ಅದನ್ನು ತೆಗೆದು ನನಗೆ ಕೊಡಬೇಕು,” ಎಂದೆ. ಅವರು ಹಾಗೆಯೇ ಕೊಟ್ಟರು. ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರು ಹೊರಗೆ ಬಂತು,” ಎಂದನು.


ಇಸ್ರಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿದ್ದರಿಂದ ಸರ್ವೇಶ್ವರ ಅವರನ್ನು ದಂಡಿಸಿದರು.


ಇದಲ್ಲದೆ ಅವನು ದೂತರ ಮುಖಾಂತರ, “ಬಾಳನ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಪಡಿಸಿಕೊಂಡು ಜಾತ್ರೆಗೆ ಬರಬೇಕು,” ಎಂದು ಇಸ್ರಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಪ್ರಕಟಿಸಿದನು.


ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.


ಅವಳು ಈಜಿಪ್ಟಿನಲ್ಲಿ ಇದ್ದಂದಿನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಬಾಲ್ಯದಲ್ಲಿಯೇ ಅಲ್ಲಿಯವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ನಸುಕಿ, ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.


ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ.


ಆದರೆ ನಿಮ್ಮಲ್ಲಿ ನನ್ನದೊಂದು ಬಿನ್ನಹಃ ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಮುರುವುಗಳನ್ನು ನನಗೆ ಕೊಡಲಿ,” ಎಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದುದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು.


ಈ ಬಂಗಾರದಿಂದ ಗಿದ್ಯೋನನು ಒಂದು ‘ಏಫೋದ’ನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದನ್ನು ಪೂಜಿಸುತ್ತಿದ್ದುದರಿಂದ ಇಸ್ರಯೇಲರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಒಂದು ಉರುಲು ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು