ವಿಮೋಚನಕಾಂಡ 32:5 - ಕನ್ನಡ ಸತ್ಯವೇದವು C.L. Bible (BSI)5 ಆರೋನನು ಇದನ್ನು ನೋಡಿ ಆ ಹೋರಿಕರುವಿನ ಮುಂದೆ ಒಂದು ಬಲಿಪೀಠವನ್ನು ಕಟ್ಟಿಸಿ, “ನಾಳೆ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಹಬ್ಬವನ್ನು ಆಚರಿಸಬೇಕು,” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆರೋನನು ಅದನ್ನು ನೋಡಿ ಬಸವನಿಗೆ ಎದುರಾಗಿ ಯಜ್ಞವೇದಿಯನ್ನು ಕಟ್ಟಿಸಿ - ನಾಳೆ ಯೆಹೋವನಿಗೆ ಉತ್ಸವವಾಗಬೇಕು ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬವಿರುವುದು” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆರೋನನು ಅದನ್ನು ನೋಡಿ ಅದರ ಮುಂದೆ ಬಲಿಪೀಠವನ್ನು ಕಟ್ಟಿದನು. “ನಾಳೆ ಯೆಹೋವ ದೇವರಿಗೆ ಹಬ್ಬ,” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿ |