ವಿಮೋಚನಕಾಂಡ 32:6 - ಕನ್ನಡ ಸತ್ಯವೇದವು C.L. Bible (BSI)6 ಅಂತೆಯೇ ಮರುದಿನ ಬೆಳಿಗ್ಗೆ ಜನರು ಎದ್ದು ದಹನಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು. ಆಮೇಲೆ ಎದ್ದು ಕುಣಿದಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಮೇಲೆ ಎದ್ದು ಕುಣಿದಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಮರುದಿನ ಮುಂಜಾನೆ ಜನರೆಲ್ಲರೂ ಬೇಗನೆ ಎದ್ದು ತಮ್ಮ ಪಶುಗಳನ್ನು ವಧಿಸಿ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಿ ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಬಳಿಕ ಎದ್ದು ಕುಣಿದಾಡಿದರು ಮತ್ತು ಕೂಗಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಮರುದಿನ ಬೆಳಿಗ್ಗೆ ಜನರು ಎದ್ದು, ದಹನಬಲಿಗಳನ್ನೂ, ಸಮಾಧಾನ ಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು, ಆಮೇಲೆ ಎದ್ದು ಕುಣಿದಾಡಿದರು. ಅಧ್ಯಾಯವನ್ನು ನೋಡಿ |