Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:8 - ಕನ್ನಡ ಸತ್ಯವೇದವು C.L. Bible (BSI)

8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹದ ಬಸವನನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು, ತಮಗೆ ಎರಕ ಹೊಯ್ದ ಕರುವನ್ನು ಮಾಡಿಕೊಂಡು, ಅದನ್ನು ಆರಾಧಿಸುತ್ತಾ, ಅದಕ್ಕೆ ಬಲಿ ಅರ್ಪಿಸಿ, ‘ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರುಗಳು ಇವುಗಳೇ,’ ಎಂದು ಹೇಳುತ್ತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:8
18 ತಿಳಿವುಗಳ ಹೋಲಿಕೆ  

ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ


ಆದ್ದರಿಂದ ನೀವು ನನಗೆ ಪ್ರತಿಯಾಗಿ ಬೆಳ್ಳಿಬಂಗಾರಗಳಿಂದ ದೇವರುಗಳನ್ನು ಮಾಡಿಕೊಳ್ಳಬಾರದು,


ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಿ ಲೋಹದ ಹೋರಿಕರುವನ್ನು ಮಾಡಿಸಿಕೊಂಡು ಸರ್ವೇಶ್ವರ ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟುಹೋದದ್ದು ನನಗೆ ಕಂಡುಬಂದಿತು.


ಇಸ್ರಯೇಲರು ಇವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಸರ್ವೇಶ್ವರನ ಆಜ್ಞೆಗಳನ್ನು ಪಾಲಿಸುತ್ತಿದ್ದ ತಮ್ಮ ಪೂರ್ವಜರ ಮಾರ್ಗವನ್ನು ಬೇಗನೆ ತ್ಯಜಿಸಿಬಿಟ್ಟರು. ಅವರಂತೆ ನಡೆಯಲೇ ಇಲ್ಲ.


“ಸರ್ವೇಶ್ವರನಾದವನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಬಲಿ ಕೊಡುವವನು ನಾಶಕ್ಕೆ ಅರ್ಹನು.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.


ನೀವು ಆ ನಾಡಿನ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಜಾಗರೂಕರಾಗಿರಿ. ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಬಲಿಯರ್ಪಿಸುವಾಗ ಬಲಿ ಭೋಜನಕ್ಕೆ ನಿಮ್ಮನ್ನು ಕರೆಯಬಹುದು. ನೀವು ಹೋಗಿ ಅದನ್ನು ಭುಜಿಸುವ ಸಂಭವವುಂಟು.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.


ನೀನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ, ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ’ ಎಂದು ಹೇಳಿದರು.


ಬಲಿಯನರ್ಪಿಸಿದರು ನೂತನಾ ದೇವತೆಗಳಿಗೆ, ದೇವರಲ್ಲದಾ ಅಸುರರಿಗೆ, ಪಿತೃಗಳು ಭಜಿಸದಾ, ತಮಗೇ ತಿಳಿಯದಾ ಹೊಸ ದೇವತೆಗಳಿಗೆ.


ಆದರೆ ಅವರ ನಾಲಿಗೆಯಾಡಿತು ಅಸತ್ಯ I ಅವರ ಬಾಯಿ ಮಾಡಿತು ಕೇವಲ ಮುಖಸ್ತುತಿಯ II


ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,


ಆದರೆ ನಿಮ್ಮಲ್ಲಿ ನನ್ನದೊಂದು ಬಿನ್ನಹಃ ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಮುರುವುಗಳನ್ನು ನನಗೆ ಕೊಡಲಿ,” ಎಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದುದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು.


ಅವರಾದರೋ ಎರಕದ ಹೋರಿಕರುವನು ಮಾಡಿಕೊಂಡರು ತಮ್ಮನು ಈಜಿಪ್ಟಿನಿಂದ ಕರೆತಂದುದು ಅದೇ ಎಂದುಕೊಂಡರು. ಈ ಪರಿಯ ವರ್ತನೆಯಿಂದ ನಿಮ್ಮನ್ನೇ ಅಸಡ್ಡೆಮಾಡಿಬಿಟ್ಟರು.


ಹೋರೇಬಿನಲಿ ಮಾಡಿದರು ಬಸವನನು I ಆರಾಧಿಸಿದರು ಆ ಎರಕದ ಶಿಲೆಯನು II


ಸುರಿಯುತ್ತಾರೆ ಜನರು ಚಿನ್ನವನ್ನು ಚೀಲದಿಂದ ತೂಗಿ ತೂಕಹಾಕುತ್ತಾರೆ ಬೆಳ್ಳಿಯನ್ನು ತಕ್ಕಡಿಯಿಂದ. ದೇವರನ್ನು ಮಾಡಿಸುತ್ತಾರೆ ಕೂಲಿಕೊಟ್ಟು ಅಕ್ಕಸಾಲಿಗನಿಂದ ಪೂಜಿಸುತ್ತಾರೆ ಅದನ್ನು ಸಾಷ್ಟಾಂಗ ನಮಸ್ಕಾರದಿಂದ.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು