Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:10 - ಕನ್ನಡ ಸತ್ಯವೇದವು C.L. Bible (BSI)

10 ಆ ಮೇಘಸ್ತಂಭ ಗುಡಾರದ ಬಾಗಿಲಲ್ಲಿ ನಿಲ್ಲುವುದನ್ನು ಜನರೆಲ್ಲರು ನೋಡಿ, ಎದ್ದುನಿಂತು ತಮ್ಮತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ನಿಂತಿದ್ದನ್ನು ಜನರೆಲ್ಲರೂ ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಮೇಘಸ್ತಂಭವು ಡೇರೆಯ ಬಾಗಲಲ್ಲಿ ನಿಂತದ್ದನ್ನು ಜನರೆಲ್ಲರು ನೋಡಿ ಎದ್ದು ತಮ್ಮ ತಮ್ಮ ಡೇರೆಗಳ ಬಾಗಲಲ್ಲೇ ಅಡ್ಡ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಗುಡಾರದ ದ್ವಾರದಲ್ಲಿ ಮೇಘಸ್ತಂಭವಿರುವುದನ್ನು ಜನರು ನೋಡಿದಾಗ, ಅವರು ತಮ್ಮ ಸ್ವಂತ ಡೇರೆಗಳ ದ್ವಾರದಲ್ಲಿ ತಲೆಬಾಗಿ ಯೆಹೋವನನ್ನು ಆರಾಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಜನರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡುವಾಗ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಯೆಹೋವ ದೇವರನ್ನು ಆರಾಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:10
7 ತಿಳಿವುಗಳ ಹೋಲಿಕೆ  

ಬಳಿಕ ಸೊಲೊಮೋನನು ಇಸ್ರಯೇಲರೆಲ್ಲರ ಎದುರಿನಲ್ಲಿ ಸರ್ವೇಶ್ವರನ ಬಲಿಪೀಠದ ಮುಂದೆ ನಿಂತು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:


ಇದಾದ ಮೇಲೆ, ಎದ್ದುನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ಅರಸನು ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.


ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ಸರ್ವೇಶ್ವರ ಸ್ವಾಮಿ ಅವರಿಗೆ ಹಗಲು ಹೊತ್ತಿನಲ್ಲಿ ದಾರಿತೋರಿಸಲು ಮೇಘಸ್ತಂಭ ರೂಪದಲ್ಲೂ ರಾತ್ರಿವೇಳೆಯಲ್ಲಿ ಬೆಳಕನ್ನೀಯಲು ಅಗ್ನಿಸ್ತಂಭ ರೂಪದಲ್ಲೂ ಅವರ ಮುಂದೆ ಸಾಗಿದರು. ಹೀಗೆ ಅವರು ಹಗಲಿರುಳು ಪ್ರಯಾಣ ಮಾಡಿದರು.


ಮೋಶೆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವೊಂದು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು. ಆಗ ಮೋಶೆಯ ಸಂಗಡ ಸರ್ವೇಶ್ವರ ಮಾತಾಡುತ್ತಿದ್ದರು.


ಒಬ್ಬ ಮನುಷ್ಯ ತನ್ನ ಗೆಳೆಯನೊಡನೆ ಹೇಗೆ ಮಾತಾಡುತ್ತಾನೋ ಹಾಗೆಯೇ ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದರು. ತರುವಾಯ ಮೋಶೆ ಪಾಳೆಯಕ್ಕೆ ಮರಳಿ ಬರುತ್ತಿದ್ದನು. ಆದರೆ ನೂನನ ಮಗನಾದ ಯೆಹೋಶುವ ಎಂಬ ಹೆಸರುಳ್ಳ ಯುವಕನೊಬ್ಬನು ಮೋಶೆಯ ಶಿಷ್ಯನಾಗಿ ಆ ಗುಡಾರದಲ್ಲೇ ಇರುತ್ತಿದ್ದನು. ಅದನ್ನು ಬಿಟ್ಟು ಹೋಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು