Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:11 - ಕನ್ನಡ ಸತ್ಯವೇದವು C.L. Bible (BSI)

11 ಒಬ್ಬ ಮನುಷ್ಯ ತನ್ನ ಗೆಳೆಯನೊಡನೆ ಹೇಗೆ ಮಾತಾಡುತ್ತಾನೋ ಹಾಗೆಯೇ ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದರು. ತರುವಾಯ ಮೋಶೆ ಪಾಳೆಯಕ್ಕೆ ಮರಳಿ ಬರುತ್ತಿದ್ದನು. ಆದರೆ ನೂನನ ಮಗನಾದ ಯೆಹೋಶುವ ಎಂಬ ಹೆಸರುಳ್ಳ ಯುವಕನೊಬ್ಬನು ಮೋಶೆಯ ಶಿಷ್ಯನಾಗಿ ಆ ಗುಡಾರದಲ್ಲೇ ಇರುತ್ತಿದ್ದನು. ಅದನ್ನು ಬಿಟ್ಟು ಹೋಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮನುಷ್ಯರೊಳಗೆ ಒಬ್ಬನು ತನ್ನ ಸ್ನೇಹಿತನೊಡನೆ ಹೇಗೆ ಮಾತಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದನು; ತರುವಾಯ ಮೋಶೆ ಪಾಳೆಯಕ್ಕೆ ತಿರಿಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಹೆಸರುಳ್ಳ ಯೌವನಸ್ಥನಾದ ಅವನ ಶಿಷ್ಯನು ಆ ಡೇರೆಯಲ್ಲೇ ಇದ್ದನು; ಅದರ ಬಳಿಯಿಂದ ಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಮೋಶೆಯೊಂದಿಗೆ ಮುಖಾಮುಖಿಯಾಗಿ ಮಾತಾಡುತ್ತಿದ್ದನು. ಒಬ್ಬನು ತನ್ನ ಸ್ನೇಹಿತನೊಂದಿಗೆ ಮಾತಾಡುವಂತೆ ಯೆಹೋವನು ಮೋಶೆಯೊಂದಿಗೆ ಮಾತಾಡುತ್ತಿದ್ದನು. ಯೆಹೋವನೊಂದಿಗೆ ಮಾತಾಡಿದ ನಂತರ ಮೋಶೆಯು ಪಾಳೆಯಕ್ಕೆ ಮರಳಿ ಹೋಗುತ್ತಿದ್ದನು. ನೂನನ ಮಗನೂ ಯೌವನಸ್ಥನೂ ಆಗಿದ್ದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯು ಗುಡಾರವನ್ನು ಬಿಟ್ಟುಹೋದಾಗ ಯೆಹೋಶುವನು ಗುಡಾರದಲ್ಲಿಯೇ ಇರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಯೆಹೋವ ದೇವರು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದರು. ತರುವಾಯ ಅವನು ಪಾಳೆಯಕ್ಕೆ ಹಿಂದಿರುಗಿ ಹೋಗುತ್ತಿದ್ದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವನೆಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:11
19 ತಿಳಿವುಗಳ ಹೋಲಿಕೆ  

ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.


ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡಿದರು.


ಮೋಶೆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವೊಂದು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು. ಆಗ ಮೋಶೆಯ ಸಂಗಡ ಸರ್ವೇಶ್ವರ ಮಾತಾಡುತ್ತಿದ್ದರು.


ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ಸರ್ವೇಶ್ವರ ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ಮುಖಾಮುಖಿಯಾಗಿ ನಮ್ಮೊಂದಿಗೆ ಮಾತಾಡಿದರು.


ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.


ಆದುದರಿಂದಲೇ, “ಅಬ್ರಹಾಮನು ದೇವರಲ್ಲಿ ವಿಶ್ವಾಸ ಇಟ್ಟನು. ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ಮಾತು ನೆರವೇರಿತು. ಅಬ್ರಹಾಮನು ದೇವರ ಮಿತ್ರನೆನಿಸಿಕೊಂಡನು.


ಬಳಿಕ ಯೇಸು, “ನಮ್ಮ ಮಿತ್ರನಾದ ಲಾಸರನು ನಿದ್ರೆಮಾಡುತ್ತಿದ್ದಾನೆ, ಅವನನ್ನು ಎಬ್ಬಿಸಲು ನಾನು ಹೋಗಬೇಕು,” ಎಂದು ನುಡಿದರು.


ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.


ಇದು ನನಗೆ ನ್ಯಾಯ ದೊರಕಿಸಲಿ, ದೇವರ ಮುಂದೆ ತನ್ನ ಮಿತ್ರನಿಗಾಗಿ ಒಬ್ಬನು ವಾದಿಸುವಂತೆ.


ನಮ್ಮ ದೇವರಾದ ನೀವು ನಿಮ್ಮ ಪ್ರಜೆಗಳಾದ ಇಸ್ರಯೇಲರ ಎದುರಿನಿಂದ ಈ ನಾಡಿನ ನಿವಾಸಿಗಳನ್ನು ಹೊರದೂಡಿಸಿ, ಇದನ್ನು ಮಿತ್ರ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸೊತ್ತಾಗಿ ಕೊಟ್ಟಿರಲ್ಲವೆ?


ಇತ್ತ ಇಸ್ರಯೇಲರು ಕೇಕೆ ಹಾಕುತ್ತಾ ಕೂಗಾಡುತ್ತಿದ್ದುದನ್ನು ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಕಾಳಗದ ಧ್ವನಿ ಕೇಳಿಸುತ್ತಿದೆ,” ಎಂದು ಹೇಳಿದನು.


‘ಮೋಶೆ ಯೆಹೋಶುವನಿಗೆ, “ನೀನು ಯೋಧರನ್ನು ಆರಿಸಿಕೊಂಡು ನಾಳೆ ನಮ್ಮ ಪರವಾಗಿ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ದೇವದಂಡವನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು,” ಎಂದು ಹೇಳಿದನು.


ಆ ಮೇಘಸ್ತಂಭ ಗುಡಾರದ ಬಾಗಿಲಲ್ಲಿ ನಿಲ್ಲುವುದನ್ನು ಜನರೆಲ್ಲರು ನೋಡಿ, ಎದ್ದುನಿಂತು ತಮ್ಮತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.


ಚಿಕ್ಕಂದಿನಿಂದ ಮೋಶೆಗೆ ಶಿಷ್ಯನಾಗಿದ್ದ ಹಾಗೂ ನೂನನ ಮಗನಾಗಿದ್ದ ಯೆಹೋಶುವನು ಮೋಶೆಗೆ, “ಗುರುವೇ, ಅವರಿಗೆ ಅದು ಬೇಡವೆನ್ನಬೇಕು ಎಂದು ವಿನಂತಿಸಿದನು.


ನನ್ನ ದಾಸನಾದ ಮೋಶೆ ಅಂಥವನಲ್ಲ ಅವನೇ ನಂಬಿಗಸ್ತ ನನ್ನ ಮನೆಯಲ್ಲೆಲ್ಲಾ.


ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು