Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:16 - ಕನ್ನಡ ಸತ್ಯವೇದವು C.L. Bible (BSI)

16 ನನಗೂ ನಿಮ್ಮ ಪ್ರಜೆಗಳಾದ ಇವರಿಗೂ ನಿಮ್ಮ ಅನುಗ್ರಹ ದೊರಕಿದೆ ಎಂಬುದು ನೀವೇ ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದೀತು? ನೀವು ಬರುವುದರಿಂದ ನಾನೂ ನಿಮ್ಮ ಪ್ರಜೆಗಳಾದ ಇವರೂ ಜಗದಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶಿಷ್ಟರಾದವರೆಂಬುದು ಖಚಿತವಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ಅನುಗ್ರಹ ದೊರಕಿತೆಂಬದು ನೀನೇ ನಮ್ಮ ಸಂಗಡ ಬರುವದರಿಂದಲೇ ಹೊರತು ಬೇರೆ ಯಾತರಿಂದ ತಿಳಿದುಬರುವದು? ಇದರಿಂದ ನಾನೂ ನಿನ್ನ ಪ್ರಜೆಗಳಾದ ಇವರೂ ಭೂವಿುಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷವಾಗಿದ್ದೇವೆಂಬದು ತೋರುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮಾತ್ರವಲ್ಲದೆ ನನಗೂ ಈ ಜನರಿಗೂ ನಿನ್ನ ದಯೆ ದೊರಕಿದೆಯೆಂದು ನಾವು ತಿಳಿದುಕೊಳ್ಳುವುದಾದರೂ ಹೇಗೆ? ನೀನು ನಮ್ಮೊಡನೆ ಬಂದರೆ, ಆಗ ನಾವು ಇದನ್ನು ಖಚಿತವಾಗಿ ತಿಳಿದುಕೊಳ್ಳುವೆವು. ನೀನು ನಮ್ಮೊಡನೆ ಬಾರದಿದ್ದರೆ, ಆಗ ನಮಗೂ ಭೂಮಿಯ ಮೇಲಿರುವ ಇತರ ಜನರಿಗೂ ಯಾವ ವ್ಯತ್ಯಾಸವಿರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ನನಗೂ ನಿಮ್ಮ ಜನರಿಗೂ ನಿಮ್ಮ ದೃಷ್ಟಿಯಲ್ಲಿ ದಯೆ ದೊರಕಿತೆಂದು ಯಾವುದರಿಂದ ತಿಳಿದುಬರುವುದು? ನೀವು ನನ್ನೊಂದಿಗೆ ಹೋಗುವುದರಿಂದಲ್ಲವೋ? ಹೀಗೆ ನಾನೂ ನಿಮ್ಮ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕವಾಗಿರುವೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:16
15 ತಿಳಿವುಗಳ ಹೋಲಿಕೆ  

ನಾವು ಮೊರೆಯಿಡುವಾಗಲೆಲ್ಲಾ ನಮ್ಮ ದೇವರಾದ ಸರ್ವೇಶ್ವರ ನಮಗೆ ಸಮೀಪವಾಗಿರುವಂತೆ ಬೇರೆ ಯಾವ ಜನಾಂಗಕ್ಕೆ, ಅದೆಷ್ಟೇ ದೊಡ್ಡದಾಗಿರಲಿ, ಯಾವ ದೇವರು ಹೀಗೆ ಸಮೀಪವಾಗಿರುತ್ತಾರೆ?


ಅಲ್ಲದೆ ಸರ್ವೇಶ್ವರಾ, ನೀವು ಇಸ್ರಯೇಲರ ನಡುವೆ ಇರುವುದಾಗಿ, ನೀವು ಇಸ್ರಯೇಲರಿಗೆ ಪ್ರತ್ಯಕ್ಷ ಕಾಣಿಸಿಕೊಳ್ಳುವುದಾಗಿ, ಹಗಲಿನಲ್ಲಿ ಮೇಘಸ್ತಂಭದಲ್ಲೂ, ಇರುಳಲ್ಲಿ ಅಗ್ನಿಸ್ತಂಭದಲ್ಲೂ ಇದ್ದು ಇವರ ಮುಂದೆ ನಡೆದು ಹೋಗುವುದಾಗಿ ಹಾಗೂ ನೀವಿರುವ ಮೇಘ ಇಸ್ರಯೇಲರ ಮೇಲೆ ಇರುವುದಾಗಿ ಈ ನಾಡಿನವರು ಕೇಳಿದ್ದಾರೆ.


ಹೇ ಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬಿಡಿಸುವಾಗ ಅವರಿಗೆ, ‘ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆ’ ಎಂದು ಮೋಶೆಯ ಮುಖಾಂತರ ಹೇಳಿದಿರಲ್ಲವೇ!” ಎಂದು ದೇವರನ್ನು ಪ್ರಾರ್ಥಿಸಿದನು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಸರ್ವೇಶ್ವರ ಮೋಶೆಗೆ, “ಕೇಳು, ನಾನೊಂದು ಒಡಂಬಡಿಕೆಯನ್ನು ಮಾಡುತ್ತೇನೆ. ಜಗದಲ್ಲಿ ಯಾವ ನಾಡಿನಲ್ಲೂ ಯಾವ ಜನಾಂಗದಲ್ಲೂ ನಡೆಯದಂಥ ಮಹಾತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಜನರೆಲ್ಲರು ಸರ್ವೇಶ್ವರನಾದ ನಾನು ಮಾಡುವ ಮಹಾತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಅದ್ಭುತಕರವಾದುದು.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ತಮ್ಮ ಇಸ್ರಯೇಲ್ ಪ್ರಜೆಗೆ ಸಮಾನಾದ ಜನಾಂಗ ಲೋಕದಲ್ಲಿ ಯಾವುದಿದೆ? ತಾವೇ ಬಂದು ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿಸಿಕೊಂಡು, ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರು ಹಾಗು ಇತರ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವುಗಳ ಕಣ್ಮುಂದೆಯೇ ನಿಮ್ಮ ನಾಡಿನವರ ಪರವಾಗಿ ವಿಸ್ಮಯಕರವಾದ ಮಹತ್ಕಾರ್ಯಗಳನ್ನು ನಡೆಸಿದಿರಿ.


ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.


ಬೇರಾವ ಜನಾಂಗಕ್ಕೂ ಆತ ಹೀಗೆ ಮಾಡಿಲ್ಲ I ಆತನ ವಿಧಿನಿಯಮಗಳನು ಅವರಿಗೆ ತಿಳಿಸಿಲ್ಲ I ಅಲ್ಲೆಲೂಯ! II


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ನಾನವರನ್ನು ಕಂಡೆ ಬೆಟ್ಟದ ಶಿಖರದಿಂದ ನೋಡಿದೆನವರನ್ನು ಗುಡ್ಡದೆತ್ತರದಿಂದ,


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.


ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ಮೀಸಲಾಗಿರಬೇಕು.


ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು