Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ಮೋಶೆ, “ನಿಮ್ಮ ಮಹಿಮೆಯನ್ನು ದಯಮಾಡಿ ನನಗೆ ತೋರಿಸಿ,” ಎಂದು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಮೋಶೆಯು, “ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಕ್ಕೆ ಮೋಶೆ - ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು ಎಂದು ಕೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಳಿಕ ಮೋಶೆ, “ಈಗ ದಯವಿಟ್ಟು ನಿನ್ನ ಮಹಿಮೆಯನ್ನು ನನಗೆ ತೋರಿಸು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಮೋಶೆ, “ನಿಮ್ಮ ಮಹಿಮೆಯನ್ನು ನನಗೆ ತೋರಿಸಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:18
10 ತಿಳಿವುಗಳ ಹೋಲಿಕೆ  

ಮತ್ತೆ ಅವರು, “ಆದರೆ ನೀನು ನನ್ನ ಮುಖವನ್ನು ನೋಡಲಾಗದು. ಏಕೆಂದರೆ ನನ್ನನ್ನು ನೋಡಿದ ಮಾನವ ಜೀವಂತನಾಗಿ ಉಳಿಯಲಾರ,” ಎಂದು ಹೇಳೀದರು.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ಪ್ರಾಣಕ್ಕಿಂತ ಮಿಗಿಲಾದುದು ನಿನ್ನಚಲ ಪ್ರೀತಿ I ಎಡೆಬಿಡದೆ ಮಾಳ್ಪುದು ನನ್ನೀ ತುಟಿ ನಿನ್ನ ಸ್ತುತಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು