Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:19 - ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರ, “ನನ್ನ ಒಳ್ಳೆಯತನವೆಲ್ಲ ನಿನ್ನೆದುರಿಗೆ ಹಾದುಹೋಗುವಂತೆ ಮಾಡುವೆನು. ಸರ್ವೇಶ್ವರನಾದ ನನ್ನ ನಾಮದ ಮಹತ್ವವನ್ನು ನಿನ್ನೆದುರಿಗೆ ಪ್ರಕಟಿಸುವೆನು. ಯಾರ್ಯಾರ ಮೇಲೆ ದಯೆಯಿಡಲು ಆಶಿಸುತ್ತೇನೋ ಅವರ ಮೇಲೆ ದಯೆಯಿಡುತ್ತೇನೆ. ಯಾರ್ಯಾರನ್ನು ಕರುಣಿಸಲು ಆಶಿಸುತ್ತೇನೋ ಅವರನ್ನು ಕರುಣಿಸುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನು - ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಾಗಿ ದಾಟಿಹೋಗುವಂತೆ ಮಾಡುವೆನು; ಯೆಹೋವನ ನಾಮದ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ಯಾವನ ಮೇಲೆ ದಯೆಯಿಡುವೆನೋ ಅವನ ಮೇಲೆ ದಯೆಯಿಡುವೆನು; ಯಾರನ್ನು ಕರುಣಿಸುವೆನೋ ಅವರನ್ನು ಕರುಣಿಸುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಯೆಹೋವನು “ನನ್ನ ನಾಮದ ಮಹತ್ವವನ್ನು ನಿನ್ನ ಮುಂದೆ ದಾಟಿಹೋಗುವಂತೆ ಮಾಡುವೆನು. ನಾನೇ ಯೆಹೋವನು. ನಿನಗೆ ಕೇಳಿಸುವಂತೆ ನನ್ನ ಹೆಸರನ್ನು ಪ್ರಕಟಿಸುವೆನು. ನಾನು ಆರಿಸಿಕೊಂಡ ಜನರಿಗೆ ದಯೆಯನ್ನೂ ಪ್ರೀತಿಯನ್ನೂ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಅವರು, “ನಾನು ನನ್ನ ಒಳ್ಳೆಯತನವನ್ನೆಲ್ಲಾ ನಿನ್ನ ಎದುರಿಗೆ ಹಾದು ಹೋಗ ಮಾಡಿ, ಯೆಹೋವ ದೇವರ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ, ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:19
16 ತಿಳಿವುಗಳ ಹೋಲಿಕೆ  

ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಹೇಳುವಿರಿ ನೀವು ಆ ದಿನದಂದು ಈ ಪರಿ - “ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು ಸ್ಮರಿಸಿರಿ ಆತನ ಶ್ರೀನಾಮವನು ಸಾರಿರಿ ಜನತೆಗೆ ಆತನ ಕಾರ್ಯಗಳನು ಘೋಷಿಸಿರಿ ಆತನ ನಾಮಘನತೆಯನು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ವಶಮಾಡಿಕೊಂಡರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನು ಸಾರವತ್ತಾದ ಹೊಲಗಳನು, ಧಾನ್ಯ ತುಂಬಿದ ಮನೆಗಳನು, ತೋಡಿದ ಬಾವಿಗಳನು ದ್ರಾಕ್ಷೀತೋಟಗಳನು, ಎಣ್ಣೇಮರ ತೋಪುಗಳನು, ನಾನಾಫಲವೃಕ್ಷಗಳನು. ತಿಂದು ತೃಪ್ತರಾದರು, ಕೊಬ್ಬಿದರು, ನೀವಿತ್ತ ಸಮೃದ್ಧಿಯಲಿ ನಲಿದಾಡಿದರು.


ಈ ಮೂಲಕ ತಮ್ಮ ಕರುಣೆಯನ್ನು ಹೊಂದಲು ಅವರು ಮೊದಲೇ ತಯಾರಿಸಿದ್ದ ಕುಡಿಕೆಯನ್ನು ಹೋಲುವವರಿಗೆ ದೇವರು ತಮ್ಮ ಮಹಿಮಾತಿಶಯವನ್ನು ತೋರ್ಪಡಿಸಲು ಇಚ್ಛಿಸಿದರು.


ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II


ಬಾಳುವನಂಥವನು ಸುಖಸೌಭಾಗ್ಯದಿಂದ I ಬದುಕುವುದವನ ಸಂತತಿ ನಾಡಿನೊಡೆತನದಿಂದ II


ಪ್ರಕಟಿಸುವೆನು ನಾನು ಸರ್ವೇಶ್ವರನ ನಾಮಮಹತ್ವವನು ಕೊಂಡಾಡಿ ನೀವು ಆ ದೇವನ ಮಹಾಮಹಿಮೆಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು