Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:23 - ಕನ್ನಡ ಸತ್ಯವೇದವು C.L. Bible (BSI)

23 ಬಳಿಕ ನಾನು ಕೈ ತೆಗೆವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವೆ. ಆದರೆ ನನ್ನ ಮುಖ ನಿನಗೆ ಕಾಣಿಸದು,” ಎಂದು ಸರ್ವೇಶ್ವರ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತರುವಾಯ ನಾನು ನನ್ನ ಕೈಯನ್ನು ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವುದಿಲ್ಲ” ಎಂದು ಯೆಹೋವನು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತರುವಾಯ ನಾನು ಕೈ ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಳಿಕ ನನ್ನ ಕೈಯನ್ನು ತೆಗೆಯುವೆನು. ಆಗ ನೀನು ನನ್ನ ಹಿಂಭಾಗವನ್ನು ನೋಡುವೆ; ಆದರೆ ನನ್ನ ಮುಖವು ನಿನಗೆ ಕಾಣಿಸದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ತರುವಾಯ ನನ್ನ ಕೈಯನ್ನು ತೆಗೆದುಬಿಡುವೆನು. ಆಗ ನೀನು ನನ್ನ ಬೆನ್ನನ್ನು ನೋಡುವೆ, ಆದರೆ ನನ್ನ ಮುಖವು ನಿನಗೆ ಕಾಣಿಸುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:23
6 ತಿಳಿವುಗಳ ಹೋಲಿಕೆ  

ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಮತ್ತೆ ಅವರು, “ಆದರೆ ನೀನು ನನ್ನ ಮುಖವನ್ನು ನೋಡಲಾಗದು. ಏಕೆಂದರೆ ನನ್ನನ್ನು ನೋಡಿದ ಮಾನವ ಜೀವಂತನಾಗಿ ಉಳಿಯಲಾರ,” ಎಂದು ಹೇಳೀದರು.


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ದೇವರ ಅದ್ಭುತಗಳಲ್ಲಿ ಇವು ಕೆಲವು ಮಾತ್ರ ಆತನ ಬಗ್ಗೆ ನಾವು ಕೇಳಿರುವುದು ಕಿಂಚಿತ್ತು ಮಾತ್ರ ಆತನ ಘನ ಗರ್ಜನೆಯ ಪ್ರಾಬಲ್ಯವನ್ನು ಗ್ರಹಿಸಲು ಯಾರಿಂದ ಸಾಧ್ಯ?”


ನೀನು ಕಂಡುಕೊಳ್ಳಬಲ್ಲೆಯಾ ದೇವರ ಅಂತರಾಳವನ್ನು? ಗ್ರಹಿಸಿಕೊಳ್ಳಬಲ್ಲೆಯಾ ಸರ್ವಶಕ್ತನ ಇತಿಮಿತಿಯನ್ನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು