Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:3 - ಕನ್ನಡ ಸತ್ಯವೇದವು C.L. Bible (BSI)

3 ಅದು ಹಾಲೂ ಜೇನೂ ಹರಿಯುವ ಶ್ರೀಮಂತ ನಾಡು. ನಾನು ಸ್ವತಃ ನಿಮ್ಮ ಸಂಗಡ ಬರುವುದಿಲ್ಲ. ಏಕೆಂದರೆ ನೀವು ನನ್ನ ಆಜ್ಞೆಗೆ ತಲೆಬಾಗದ ಹಟಮಾರಿ ಜನ; ದಾರಿಯಲ್ಲೇ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದು ಹಾಲೂ ಜೇನೂ ಹರಿಯುವ ದೇಶವೇ. ಆದರೆ ನಾನೇ ನಿಮ್ಮ ಸಂಗಡ ಬರುವದಿಲ್ಲ; ನೀವು ನನ್ನ ಆಜ್ಞೆಗೆ ಬೊಗ್ಗದವರಾದ್ದರಿಂದ ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸೇನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ಸಮೃದ್ಧಿಕರವಾದ ಆ ದೇಶಕ್ಕೆ ಹೋಗಿರಿ. ಆದರೆ ನಾನು ನಿಮ್ಮೊಂದಿಗೆ ಬರುವುದಿಲ್ಲ. ನೀವು ನನ್ನ ಆಜ್ಞೆಗೆ ವಿಧೇಯರಾಗದೆ ನನ್ನನ್ನು ಕೋಪಗೊಳಿಸುತ್ತೀರಿ. ನಾನು ನಿಮ್ಮೊಂದಿಗೆ ಬಂದರೆ, ದಾರಿಯಲ್ಲಿ ನಿಮ್ಮನ್ನು ಸಂಹರಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು. ನಾನು ನಿಮ್ಮ ಸಂಗಡ ಹೋಗುವುದಿಲ್ಲ ಏಕೆಂದರೆ ನೀವು ಮಾತು ಕೇಳದ ಹಟಮಾರಿ ಜನರಾಗಿದ್ದೀರಿ ಮತ್ತು ಮಾರ್ಗದಲ್ಲಿ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:3
33 ತಿಳಿವುಗಳ ಹೋಲಿಕೆ  

ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.


ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.


“ನೀವು ಈ ಸಮುದಾಯದವರಿಂದ ಪ್ರತ್ಯೇಕವಾಗಿ ನಿಲ್ಲಿ; ನಾನು ಇವರನ್ನು ಒಂದು ಕ್ಷಣಮಾತ್ರದಲ್ಲಿ ಭಸ್ಮ ಮಾಡಿಬಿಡುತ್ತೇನೆ,” ಎಂದರು.


ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.


ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, “ಜನರೇ, ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು,” ಎಂದನು.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಅವರು ಅವನಿಗೆ, “ನಾವು ಬರುವುದಿಲ್ಲ, ಹಾಲೂಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆತಂದು ಈ ಮರಳುಗಾಡಿನಲ್ಲಿ ಸಾಯಿಸುತ್ತಿರುವೆ. ಇದು ಅಲ್ಪಕಾರ್ಯವೆಂದು ಎಣಿಸುತ್ತೀಯೋ? ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತಿರುವೆಯೋ?”


ಆಗಲಿ, ನಾನು ಇವರಿಗೆ ದೊಡ್ಡ ರೋಗವನ್ನು ಬರಮಾಡಿ ಇವರನ್ನು ನಿರ್ಮೂಲ ಮಾಡಿಬಿಡುತ್ತೇನೆ; ಇವರಿಗಿಂತ ದೊಡ್ಡದೂ ಬಲಿಷ್ಠವೂ ಆದ ಜನಾಂಗವೊಂದನ್ನು ನಿನ್ನಿಂದಲೇ ಹುಟ್ಟಿಸುವೆನು,” ಎಂದು ಹೇಳಿದರು.


ಹಾಲೂ ಜೇನೂ ಹರಿಯುವ ನಾಡದು! ಸರ್ವೇಶ್ವರನಿಗೆ ಮೆಚ್ಚುಗೆಯಾದರೆ ಅದರಲ್ಲಿ ನಮ್ಮನ್ನು ಸೇರಿಸುವರು, ಅದನ್ನೇ ನಮ್ಮ ಸ್ವಾಧೀನಕ್ಕೆ ಕೊಡುವರು.


ಮೋಶೆಗೆ, “ನೀವು ನಮ್ಮನ್ನು ಕಳಿಸಿದ ನಾಡಿಗೆ ಹೋಗಿದ್ದೆವು. ಅದು ಹಾಲು-ಜೇನು ಹರಿಯುವಂಥ ನಾಡು. ಅಲ್ಲಿನ ಹಣ್ಣುಹಂಪಲುಗಳು ಇಂಥವು.


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.


ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಆಗ ಸರ್ವೇಶ್ವರ ತಮ್ಮ ಪ್ರಜೆಗಳಿಗೆ ಮಾಡುವೆನೆಂದು ಹೇಳಿದ ಕೇಡಿನ ಬಗ್ಗೆ ಮನಸ್ಸನ್ನು ಮಾರ್ಪಡಿಸಿಕೊಂಡರು.


ನೀವು ಆತನಲ್ಲಿ ಲಕ್ಷ್ಯವಿಟ್ಟು ಮಾತಿಗೆ ಕಿವಿಗೊಡಬೇಕು. ಆತನಿಗೆ ಅವಿಧೇಯರಾಗಿ ಇರಬಾರದು. ಏಕೆಂದರೆ ಆತ ಬರುವುದು ನನ್ನ ಹೆಸರಿನಲ್ಲಿ. ನೀವು ಅವಿಧೇಯರಾದರೆ ಆತ ನಿಮ್ಮನ್ನು ಕ್ಷಮಿಸಲಾರನು.


ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ಏಕೆಂದರೆ ಮೋಶೆಯ ಮುಖಾಂತರ ಸರ್ವೇಶ್ವರ, “ನೀವು ನನ್ನ ಆಜ್ಞೆಗಳಿಗೆ ಬಗ್ಗದ ಹಟಮಾರಿಗಳು. ನಾನು ಕ್ಷಣಮಾತ್ರ ನಿಮ್ಮೊಡನೆ ಬರುವುದಾದರೆ ನಿರ್ಮೂಲವಾಗಿಬಿಡುವಿರಿ, ಎಚ್ಚರಿಕೆ! ಆದ್ದರಿಂದ ನಿಮ್ಮ ಒಡವೆವಸ್ತುಗಳನ್ನು ತೆಗೆದುಬಿಡಿ. ನಿಮಗೇನು ಮಾಡಬೇಕೆಂದು ಆಲೋಚಿಸುವೆನು,” ಎಂದಿದ್ದರು.


ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಕಬಳಿಸಿಬಿಡುವ ಅಗ್ನಿಯಂಥವರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡದ ದೇವರು.


ತಿಳಿದಿದೆ ನನಗೆ ನಿನ್ನ ಹಟಮಾರಿತನ ನಿನ್ನ ಕುತ್ತಿಗೆಯ ನರಗಳು ಕಬ್ಬಿಣ ನಿನ್ನ ಹಣೆ ಕಂಚಿನಂತೆ ಕಠಿಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು