Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:4 - ಕನ್ನಡ ಸತ್ಯವೇದವು C.L. Bible (BSI)

4 ಈ ದುಃಖಕರವಾದ ಮಾತುಗಳನ್ನು ಕೇಳಿ, ಇಸ್ರಯೇಲರು ಶೋಕತಪ್ತರಾದರು; ಒಬ್ಬರೂ ಒಡವೆ ವಸ್ತುಗಳನ್ನು ಧರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ ಜನರು ಈ ದುಃಖಕರವಾದ ವಾಕ್ಯವನ್ನು ಕೇಳಿ ಮನಗುಂದಿದವರಾದರು; ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈ ದುಃಖದ ಸಮಾಚಾರವನ್ನು ಕೇಳಿ ಜನರು ನೊಂದುಕೊಂಡರು. ಅವರಲ್ಲಿ ಒಬ್ಬರಾದರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜನರು ಈ ಕಠಿಣವಾದ ಮಾತುಗಳನ್ನು ಕೇಳಿದಾಗ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:4
20 ತಿಳಿವುಗಳ ಹೋಲಿಕೆ  

ಮೋಶೆ ಸರ್ವೇಶ್ವರನ ಮಾತುಗಳನ್ನೆಲ್ಲಾ ಇಸ್ರಯೇಲರಿಗೆ ತಿಳಿಸಿದನು. ಅವರು ಬಹಳವಾಗಿ ವ್ಯಸನಪಟ್ಟರು.


ಆಗ ಸಮುದ್ರದ ಸುತ್ತುಮುತ್ತಲಿನ ಎಲ್ಲ ಒಡೆಯರು ತಮ್ಮ ಸಿಂಹಾಸನಗಳಿಂದಿಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ಕಸೂತಿ ವಸ್ತ್ರಗಳನ್ನು ಕಿತ್ತೆಸೆದು, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಕ್ಕರಿಸಿ, ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿಬೆರಗಾಗುವರು.


ಗಾರಿಗೆಯನ್ನು ತಿನ್ನದೆ, ರುಮಾಲನ್ನು ಸುತ್ತಿಕೊಂಡು, ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ. ಆದರೆ ನಿಮ್ಮ ಅಧರ್ಮದಿಂದ ಕ್ಷೀಣವಾಗಿ ನರಳುವಿರಿ. ಒಬ್ಬರೆದುರಿಗೆ ಒಬ್ಬರು ನರಳುವಿರಿ.


ಸದ್ದಿಲ್ಲದೆ ಮೊರೆಯಿಡು, ವಿಯೋಗದುಃಖ ತೋರಿಸಬೇಡ. ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”


ಜನರೆಲ್ಲರು, ಈ ವರದಿಯನ್ನು ಕೇಳಿ ಗಟ್ಟಿಯಾಗಿ ಗೋಳಿಟ್ಟರು. ರಾತ್ರಿಯೆಲ್ಲಾ ಅಳುತ್ತಿದ್ದರು.


“ಯಾಜಕರಿಗೂ ನಾಡಿನ ಸಕಲ ಜನರಿಗೂ ಹೀಗೆಂದು ತಿಳಿಸಲು: ನೀವು ಕಳೆದ ಎಪ್ಪತ್ತು ವರ್ಷಗಳಿಂದ 5ನೇ ಮತ್ತು 7ನೇ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡಿದ್ದು ನನಗೋಸ್ಕರವೋ?


ಅಲ್ಲದೆ, ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೇವಾಲಯದ ಯಾಜಕರನ್ನೂ ಪ್ರವಾದಿಗಳನ್ನೂ ಕಂಡು, “ನಾವು ಇಷ್ಟು ವರ್ಷಗಳಿಂದ ಅನುಸರಿಸಿಕೊಂಡು ಬಂದಂತೆ, 5ನೆಯ ತಿಂಗಳಲ್ಲಿ ಉಪವಾಸವಿದ್ದು ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.


ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು.


ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.


ಸುಖವಾಗಿರುವವರೇ, ಗಡಗಡನೆ ನಡುಗಿರಿ. ನಿಶ್ಚಿಂತರಾಗಿರುವವರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಗಳನ್ನು ಕಿತ್ತುಹಾಕಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


ದೂರದಿಂದ ನೋಡಿದಾಗ ಆತನ ಗುರುತುಹಚ್ಚಲು ಕೂಡ ಅವರಿಂದಾ ಆಗಲಿಲ್ಲ. ಎಂದೇ ಅವರು ಗಟ್ಟಿಯಾಗಿ ಅತ್ತರು. ದುಃಖ ತಾಳಲಾರದೆ ತಂತಮ್ಮ ಮೇಲಂಗಿಯನ್ನು ಸೀಳಿಕೊಂಡರು.


ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:


ಈ ಸಮಾಚಾರವನ್ನು ಕೇಳಿದೊಡನೆ ನಾನು ಸಿಟ್ಟಿನಿಂದ ಬಟ್ಟೆಗಳನ್ನೂ ಮೇಲಂಗಿಯನ್ನೂ ಹರಿದುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆ.


ಈ ವರದಿಯನ್ನು ಕೇಳಿದ ಹಿಜ್ಕೀಯನು ಕೋಪದಿಂದ ತನ್ನ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು.


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.


ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನ ದರ್ಶನಕ್ಕೆ ಬಂದನು. ಅರಸನು ಜೆರುಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಪಾದಗಳನ್ನು ತೊಳೆದುಕೊಂಡಿರಲಿಲ್ಲ; ಮೀಸೆಯನ್ನು ಕತ್ತರಿಸಿರಲಿಲ್ಲ; ಬಟ್ಟೆಗಳನ್ನು ಒಗೆಸಿಕೊಂಡಿರಲಿಲ್ಲ.


ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.


ಅಂತೆಯೇ ಇಸ್ರಯೇಲರು ಹೋರೆಬ್ ಬೆಟ್ಟದಿಂದೀಚೆಗೆ ಒಡವೆವಸ್ತುಗಳನ್ನು ತೊಟ್ಟುಕೊಳ್ಳದೆ ಇದ್ದರು.


ಮಂಜೂಷವನ್ನು ತೆರೆದು ನೋಡಿದ ಬೇತ್ ಷೆಮೆಷಿನವರಾದ ಎಪ್ಪತ್ತು ಮಂದಿಯನ್ನು ಸರ್ವೇಶ್ವರ ನಾಶಮಾಡಿದರು. ಈ ವಿನಾಶಕ್ಕಾಗಿ ಬೇತ್ ಷೆಮೆಷಿನವರು ಗೋಳಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು