Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:15 - ಕನ್ನಡ ಸತ್ಯವೇದವು C.L. Bible (BSI)

15 ನೀವು ಆ ನಾಡಿನ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಜಾಗರೂಕರಾಗಿರಿ. ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಬಲಿಯರ್ಪಿಸುವಾಗ ಬಲಿ ಭೋಜನಕ್ಕೆ ನಿಮ್ಮನ್ನು ಕರೆಯಬಹುದು. ನೀವು ಹೋಗಿ ಅದನ್ನು ಭುಜಿಸುವ ಸಂಭವವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞ ಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಎಚ್ಚರಿಕೆಯಾಗಿರಿ, ಆ ದೇಶದಲ್ಲಿ ವಾಸಿಸುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ನೀವು ಅವರೊಂದಿಗೆ ಸೇರಿಕೊಳ್ಳುವಿರಿ. ಅವರೊಂದಿಗೆ ಸೇರಿಕೊಳ್ಳುವಂತೆ ನಿಮ್ಮನ್ನು ಆಹ್ವಾನಿಸುವರು; ಅವರ ಯಜ್ಞಾರ್ಪಣೆಗಳನ್ನು ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನೀನು ಆ ದೇಶದ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಎಚ್ಚರದಿಂದಿರು. ಅವರು ಅನ್ಯದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞ ಅರ್ಪಿಸುವ ಸಮಯದಲ್ಲಿ ಒಬ್ಬನು ನಿನ್ನನ್ನು ಕರೆದಾನು, ನೀನು ಅವನ ಯಜ್ಞಭೋಜನವನ್ನು ಮಾಡಬೇಕಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:15
36 ತಿಳಿವುಗಳ ಹೋಲಿಕೆ  

ಇಸ್ರಯೇಲರು ಇವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಸರ್ವೇಶ್ವರನ ಆಜ್ಞೆಗಳನ್ನು ಪಾಲಿಸುತ್ತಿದ್ದ ತಮ್ಮ ಪೂರ್ವಜರ ಮಾರ್ಗವನ್ನು ಬೇಗನೆ ತ್ಯಜಿಸಿಬಿಟ್ಟರು. ಅವರಂತೆ ನಡೆಯಲೇ ಇಲ್ಲ.


ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


ಬಾಳ್‍ಪೆಗೋರ ದೇವತೆಯ ಊಳಿಗದವರಾದರು I ಸತ್ತವರಿಗರ್ಪಿಸಿದ ಬಲಿಯನು ಉಣ್ಣುವವರಾದರು II


ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಆ ಮಹಿಳೆಯರು ತಮ್ಮ ದೇವತೆಗಳಿಗೆ ಮಾಡಿದ ಬಲಿಔತಣಗಳಲ್ಲಿ ಭಾಗಿಗಳಾಗಲು ಇಸ್ರಯೇಲರನ್ನು ಆಹ್ವಾನಿಸುತ್ತಿದ್ದರು. ಇವರು ಪ್ರಸಾದ ಸ್ವೀಕರಿಸಿ ಆ ದೇವತೆಗಳಿಗೆ ತಲೆಬಾಗುತ್ತಿದ್ದರು.


ಕ್ರೈಸ್ತವಿಶ್ವಾಸಿ ಅಲ್ಲದವನು, ನಿಮ್ಮನ್ನು ಊಟಕ್ಕೆ ಕರೆದಾಗ, ನಿಮಗಿಷ್ಟವಿದ್ದರೆ ಹೋಗಿರಿ; ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಅವನು ಬಡಿಸಿದ್ದನ್ನು ಊಟಮಾಡಿರಿ.


ನೈಜ ಅರಿವುಳ್ಳವನೆಂದು ಹೇಳಿಕೊಳ್ಳುವ ನೀನು ವಿಗ್ರಹದ ಗುಡಿಯಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲ ಮನಸ್ಸಾಕ್ಷಿಯುಳ್ಳ ಸೋದರನು ಕಂಡರೆ, ಅವನು ಸಹ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಲು ಧೈರ್ಯಗೊಳ್ಳಲಾರನೇ?


ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ.


ಕಲ್ಲುಮರಗಳಿಗೆ ಆರಾಧನೆಮಾಡಿ ವ್ಯಭಿಚಾರಿಣಿಯಾದಳು. ಇದೆಲ್ಲ ಲಘುವೆಂದು ಭಾವಿಸಿ ತನ್ನ ವೇಶ್ಯಾ ವರ್ತನೆಯಿಂದ ನಾಡನ್ನು ಅಪವಿತ್ರಪಡಿಸಿದಳು.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.


ನೀವು ಸೇರುವ ನಾಡಿನ ನಿವಾಸಿಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಮಾಡಿಕೊಂಡರೆ ಅದು ಕೊರಳನ್ನು ಸಿಕ್ಕಿಸುವ ಉರುಳಾಗುವುದು.


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ಇಸ್ರಯೇಲ್, ಹರ್ಷಿಸದಿರು; ಇತರ ರಾಷ್ಟ್ರಗಳೊಡನೆ ಆನಂದಿಸದಿರು. ನಿನ್ನ ದೇವರನ್ನು ತೊರೆದು ವ್ಯಭಿಚಾರ ಮಾಡಿರುವೆ. ಇತರರ ಕಣಗಳಿಂದ ದೊರಕುವ ಕಾಳು ನಿನ್ನ ವ್ಯಭಿಚಾರದ ಸಂಭಾವನೆಯೆಂದು ಹಂಬಲಿಸಿರುವೆ.


ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.


ವಿನಾಶವಾಗುವರು ನಿನ್ನಿಂದ ದೂರ ಸರಿವವರು I ಧ್ವಂಸವಾಗುವರು ನಿನಗೆ ದ್ರೋಹವೆಸಗಿದವರು II


ಪರಲೋಕ ದೇವರಿಗೆ ದಹನಬಲಿಗಳನ್ನು ಸಮರ್ಪಿಸಲು ಬೇಕಾದ ಹೋರಿ, ಟಗರು, ಕುರಿಗಳನ್ನೂ ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಜೆರುಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನ ತಪ್ಪದೆ ಒದಗಿಸಿಕೊಡಬೇಕೆಂದು ಆಜ್ಞಾಪಿಸುತ್ತೇನೆ.


ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,


ಆ ಗೊಂಡೆಗಳ ಪ್ರಯೋಜನವಿದು - ನೀವು ಅವುಗಳನ್ನು ನೋಡುವಾಗ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅವುಗಳನ್ನು ಪಾಲಿಸಬೇಕು. ಹಿಂದೆ ನೀವು ನನಗೆ ದ್ರೋಹಿಗಳಾಗಿ ನಿಮ್ಮ ಮನಸ್ಸಿಗೆ ಬಂದಂತೆ, ಕಣ್ಣಿಗೆ ತೋರಿದಂತೆ ದಾರಿತಪ್ಪಿ ನಡೆದಿರಿ.


ಸರ್ವೇಶ್ವರ ಮೋಶೆಗೆ, “ಕೇಳು, ನಾನೊಂದು ಒಡಂಬಡಿಕೆಯನ್ನು ಮಾಡುತ್ತೇನೆ. ಜಗದಲ್ಲಿ ಯಾವ ನಾಡಿನಲ್ಲೂ ಯಾವ ಜನಾಂಗದಲ್ಲೂ ನಡೆಯದಂಥ ಮಹಾತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಜನರೆಲ್ಲರು ಸರ್ವೇಶ್ವರನಾದ ನಾನು ಮಾಡುವ ಮಹಾತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಅದ್ಭುತಕರವಾದುದು.


ನೀವು ಅವರೊಡನೆಯಾಗಲಿ, ಅವರ ದೇವತೆಗಳೊಡನೆಯಾಗಲಿ ಯಾವ ವಿಧವಾದ ಒಪ್ಪಂದವನ್ನೂ ಮಾಡಿಕೊಳ್ಳಬಾರದು.


ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.


“ಸರ್ವೇಶ್ವರನಾದವನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಬಲಿ ಕೊಡುವವನು ನಾಶಕ್ಕೆ ಅರ್ಹನು.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ.


ಇಸ್ರಯೇಲರು ಶಿಟ್ಟೀಮಿನಲ್ಲಿ ವಾಸಮಾಡುತ್ತಿದ್ದಾಗ ಮೋವಾಬ್ ಮಹಿಳೆಯರೊಡನೆ ಸಹವಾಸ ಮಾಡತೊಡಗಿದರು.


ಅವರೊಡನೆ ಬೀಗತನ ಮಾಡಬಾರದು; ಅವರ ಮಕ್ಕಳಿಗೆ ಹೆಣ್ಣುಗಳನ್ನು ಕೊಡಲೂಬಾರದು, ಅವರಿಂದ ತರಲೂಬಾರದು.


ಆಗ ನುಡಿವನು ಸ್ವಾಮಿ ಸರ್ವೇಶ್ವರ ಇಂತೆಂದು; ಎಲ್ಲಿಗೆ ಹೋದರು ಅವರು ಪೂಜಿಸುತ್ತಿದ್ದ ದೇವರುಗಳು? ಎಲ್ಲಿರುವನು ಅವರು ಆಶ್ರಯಿಸಿಕೊಂಡಿದ್ದ ದುರ್ಗವಾದವನು.


ಅವರು ಬಲಿಕೊಟ್ಟ ಕೊಬ್ಬು ಮಾಂಸವನು ತಿಂದವರೆಲ್ಲಿ? ಸಮರ್ಪಿಸಿದ ಪಾನಗಳನು ಕುಡಿದ ದೇವತೆಗಳೆಲ್ಲಿ? ಅವರೇ ನಿಮಗೆ ನೆರವಾಗಲಿ, ನಿಮ್ಮನೀಗ ಕಾಯಲಿ!


ದೇವರಿಗೆ ವಿಮುಖರಾಗಿ, ನಿಮ್ಮ ಮಧ್ಯೆ ಉಳಿದಿರುವ ಈ ಜನಾಂಗಗಳೊಡನೆ ಕೊಟ್ಟು ತಂದು ಮಿಶ್ರವಾಗಬೇಡಿ.


ಅವರ ಕನ್ಯೆಯರನ್ನು ತಾವು ತಂದು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು ಅವರ ದೇವತೆಗಳನ್ನು ಪೂಜಿಸಿದರು.


ಆದರೆ ಜನರು ತಮ್ಮ ಪಿತೃಗಳ ದೇವರಿಗೆ ಅವಿಧೇಯರಾದರು. ಆ ಪ್ರದೇಶದಿಂದ ದೇವರೇ ಹೊರದೂಡಿದ ಬೇರೆ ಜನಾಂಗಗಳ ದೇವತೆಗಳನ್ನು ಪೂಜಿಸಿದರು.


ಹೀಗಿರಲಾಗಿ, ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗಾಗಿ ಅವರ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಲೂಬಾರದು. ಅವರಿಗೆ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ, ನೀವು ಬಲಗೊಂಡು, ಆ ನಾಡಿನ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತ ಸೊತ್ತನ್ನಾಗಿ ಬಿಡುವಿರಿ’ ಎಂದು ಹೇಳಿದಿರಲ್ಲವೆ?


“ಪ್ರಾಣಿಪಶು ಸಂಗಮಾಡಿದವನಿಗೆ ಮರಣದಂಡನೆಯಾಗಬೇಕು.


ಅವರು ನನ್ನನ್ನು ಬಿಟ್ಟು, ಇತರ ದೇವರುಗಳನ್ನು ಆಶ್ರಯಿಸಿ, ಬಹಳ ದುಷ್ಕೃತ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು