Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:16 - ಕನ್ನಡ ಸತ್ಯವೇದವು C.L. Bible (BSI)

16 ಅದೂ ಅಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಹೆಣ್ಣುಗಳನ್ನು ತೆಗೆದುಕೊಳ್ಳುವುದಕ್ಕೆ ಆಸ್ಪದವುಂಟಾಗುವುದು. ಅನಂತರ ಆ ಸೊಸೆಯಂದಿರು ತೌರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನು ಅನ್ಯದೇವರುಗಳ ಪೂಜೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು. ಆದ್ದರಿಂದ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಕನ್ನಿಕೆಗಳನ್ನು ತೆಗೆದುಕೊಳ್ಳುವದಕ್ಕೆ ಆಸ್ಪದವುಂಟಾಗುವದು; ತರುವಾಯ ಆ ಸೊಸೆಯರು ತೌರಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಅವರ ಪುತ್ರಿಯರನ್ನು ನಿನ್ನ ಪುತ್ರರಿಗೋಸ್ಕರ ತೆಗೆದುಕೊಳ್ಳಬೇಕಾಗಬಹುದು. ತೆಗೆದುಕೊಂಡರೆ ಅವರ ಪುತ್ರಿಯರು ತಮ್ಮ ದೇವರುಗಳನ್ನು ಆರಾಧಿಸಿ, ನಿಮ್ಮ ಪುತ್ರರನ್ನೂ ಅನ್ಯದೇವರುಗಳ ಆರಾಧನೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:16
23 ತಿಳಿವುಗಳ ಹೋಲಿಕೆ  

ಇಸ್ರಯೇಲರಲ್ಲಿ ಸಾಧಾರಣಜನರು, ಯಾಜಕರು, ಲೇವಿಯರು ತಮಗೆ ಹಾಗು ತಮ್ಮ ಗಂಡುಮಕ್ಕಳಿಗೆ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಗುತ್ತಿದೆ; ನಾಯಕರೇ, ಮುಖ್ಯಸ್ಥರೇ, ಈ ದ್ರೋಹಕ್ಕೆ ಮುಂದಾಳುಗಳಾಗುತ್ತಿದ್ದಾರೆ,” ಎಂದು ತಿಳಿಸಿದರು.


ಕೋಪಗೊಂಡು ಅವರನ್ನು ಶಪಿಸಿದೆ; ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕೀಳಿಸಿದೆ.


ಅದೇ ಕಾಲದಲ್ಲಿ ಅಷ್ಡೋದ್, ಅಮ್ಮೋನಿಯ ಹಾಗು ಮೋವಾಬ್ ಮಹಿಳೆಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ನಾನು ವಿಚಾರಮಾಡಿದೆ.


ದೇವರಿಗೆ ವಿಮುಖರಾಗಿ, ನಿಮ್ಮ ಮಧ್ಯೆ ಉಳಿದಿರುವ ಈ ಜನಾಂಗಗಳೊಡನೆ ಕೊಟ್ಟು ತಂದು ಮಿಶ್ರವಾಗಬೇಡಿ.


ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.


ಅವರ ಕನ್ಯೆಯರನ್ನು ತಾವು ತಂದು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು ಅವರ ದೇವತೆಗಳನ್ನು ಪೂಜಿಸಿದರು.


ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ವರಿಸಬೇಕೆಂದಿರುವೆಯಾ? ನಿನ್ನ ಬಂಧುಗಳಲ್ಲಿ ಅದೂ ನಮ್ಮ ಎಲ್ಲಾ ಜನರಲ್ಲಿ ನಿನಗೆ ಹೆಣ್ಣು ಸಿಕ್ಕುವುದಿಲ್ಲವೇ?” ಎಂದು ಪ್ರತಿಭಟಿಸಿದರು. ಅವನು, “ನನಗಾಗಿ ಆಕೆಯನ್ನೇ ತನ್ನಿ. ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ,” ಎಂದನು.


ಅರಸ ಸೊಲೊಮೋನನು ಫರೋಹನ ಮಗಳನ್ನಲ್ಲದೆ, ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು, ಹಿತ್ತಿಯರು ಎಂಬೀ ಜನಾಂಗಗಳ ಮಹಿಳೆಯರನ್ನೂ ಮೋಹಿಸಿದನು.


ಹೀಗಿರಲಾಗಿ, ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗಾಗಿ ಅವರ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಲೂಬಾರದು. ಅವರಿಗೆ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ, ನೀವು ಬಲಗೊಂಡು, ಆ ನಾಡಿನ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತ ಸೊತ್ತನ್ನಾಗಿ ಬಿಡುವಿರಿ’ ಎಂದು ಹೇಳಿದಿರಲ್ಲವೆ?


‘ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ; ನಮ್ಮ ಮಕ್ಕಳಿಗೆ ಅವರಿಂದ ಹೆಣ್ಣು ತೆಗೆದುಕೊಳ್ಳುವುದಿಲ್ಲ;


“ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು;


ಇಲ್ಲವಾದರೆ ಅವನ ಸಂತತಿ ಸ್ವಜನರೊಳಗೆ ಅಪವಾದಕ್ಕೆ ಗುರಿಯಾಗುವುದು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


ಇಸ್ರಯೇಲರು ಕಾನಾನ್ಯ, ಹಿತ್ತಿಯ, ಅಮೋರಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ


ಈ ಬಂಗಾರದಿಂದ ಗಿದ್ಯೋನನು ಒಂದು ‘ಏಫೋದ’ನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದನ್ನು ಪೂಜಿಸುತ್ತಿದ್ದುದರಿಂದ ಇಸ್ರಯೇಲರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಒಂದು ಉರುಲು ಆಯಿತು.


ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಅವನು ಜುದೇಯದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಜೆರುಸಲೇಮಿನವರು ದೇವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.


ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್‍ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;


ಅಶುದ್ಧರಾದರವರು ತಮ್ಮ ದುಷ್ಕೃತ್ಯಗಳಿಂದ I ದೇವದ್ರೋಹಿಗಳಾದರು ದುರಾಚಾರಗಳಿಂದ II


ಸರ್ವೇಶ್ವರಸ್ವಾಮಿ ಪ್ರಥಮವಾಗಿ ಹೊಶೇಯನ ಸಂಗಡ ಮಾತನಾಡುತ್ತಾ ಆತನಿಗೆ ಹೇಳಿದ್ದೇನೆಂದರೆ: “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೊ. ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೊ. ಏಕೆಂದರೆ, ನನ್ನ ಪ್ರಜೆ ನನ್ನನ್ನು ತೊರೆದುಬಿಟ್ಟು ವ್ಯಭಿಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇದು ನಿದರ್ಶನವಾಗಿರಲಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು