ವಿಮೋಚನಕಾಂಡ 34:20 - ಕನ್ನಡ ಸತ್ಯವೇದವು C.L. Bible (BSI)20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು. ಹಾಗೆ ಬಿಡಿಸಲಾಗದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಗುವನ್ನು ಕೊಲ್ಲದೆ, ಬದಲುಕೊಟ್ಟು ಬಿಡಿಸಲೇಬೇಕು. ಯಾರೂ ಬರೀಗೈಯಲ್ಲಿ ನನ್ನ ಮುಂದೆ ಕಾಣಿಸಿಕೊಳ್ಳಬಾರದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಗುವನ್ನು ಕೊಲ್ಲದೆ ಬದಲು ಕೊಟ್ಟು ಬಿಡಿಸಲೇಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಚೊಚ್ಚಲಾಗಿ ಹುಟ್ಟಿದ ಕತ್ತೆಯನ್ನು ನೀವು ಇಟ್ಟುಕೊಳ್ಳಲು ಬಯಸಿದರೆ, ಆಗ ನೀವು ಕುರಿಮರಿಯನ್ನು ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಆದರೆ ನೀವು ಅದನ್ನು ಕೊಂಡುಕೊಳ್ಳದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಂದುಬಿಡಬೇಕು. ನೀವು ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನನ್ನಿಂದ ಕೊಂಡುಕೊಳ್ಳಬೇಕು. ಯಾವ ವ್ಯಕ್ತಿಯೂ ಕಾಣಿಕೆಯಿಲ್ಲದೆ, ನನ್ನ ಸನ್ನಿಧಿಗೆ ಬರಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕತ್ತೆಮರಿಗೆ ಬದಲಾಗಿ ಕುರಿಮರಿಯನ್ನು ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ, ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಪುತ್ರರಲ್ಲಿ ಚೊಚ್ಚಲಾದವರನ್ನೆಲ್ಲಾ ವಿಮೋಚಿಸಬೇಕು. “ನನ್ನ ಮುಂದೆ ಯಾರೂ ಬರಿಗೈಯಿಂದ ಕಾಣಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿ |
ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಸರ್ವೇಶ್ವರ ಈಜಿಪ್ಟಿನಲ್ಲಿದ್ದ ಚೊಚ್ಚಲು ಮಕ್ಕಳನ್ನು ಹಾಗು ಪಶುಪ್ರಾಣಿಗಳ ಚೊಚ್ಚಲು ಮರಿಗಳನ್ನೂ ಅಂತೂ ಈ ದೇಶದಲ್ಲಿ ಚೊಚ್ಚಲಾಗಿದ್ದುದೆಲ್ಲವನ್ನು ಸಂಹಾರ ಮಾಡಿದರು. ಆದಕಾರಣ ಗಂಡಾದ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಸರ್ವೇಶ್ವರನಿಗೆ ಸಮರ್ಪಿಸುತ್ತೇವೆ. ಮನುಷ್ಯರಿಗೆ ಹುಟ್ಟಿದ ಪ್ರಥಮ ಗರ್ಭಫಲವನ್ನಾದರೋ ಬದಲು ಕೊಟ್ಟು ಬಿಡಿಸಿಕೊಳ್ಳುತ್ತೇವೆ,” ಎಂದು ಹೇಳಬೇಕು.