Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:21 - ಕನ್ನಡ ಸತ್ಯವೇದವು C.L. Bible (BSI)

21 “ಆರು ದಿವಸಗಳು ನೀವು ದುಡಿಯಬಹುದು. ಆದರೆ ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದು. ಅದು ಉಳುವ ಕಾಲವಾಗಿರಲಿ, ಕೊಯ್ಯುವ ಕಾಲವಾಗಿರಲಿ ಏಳನೆಯ ದಿನ ದುಡಿಯದೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಉಳುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನೀವು ವಾರದಲ್ಲಿ ಆರುದಿನ ಕೆಲಸ ಮಾಡುವಿರಿ. ಆದರೆ ಏಳನೆಯ ದಿನದಲ್ಲಿ ನೀವು ವಿಶ್ರಮಿಸಿಕೊಳ್ಳಬೇಕು. ನೀವು ಬಿತ್ತುವ ಮತ್ತು ಕೊಯ್ಯುವ ಸಮಯದಲ್ಲಿಯೂ ವಿಶ್ರಮಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಆರು ದಿನಗಳು ಕೆಲಸಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:21
13 ತಿಳಿವುಗಳ ಹೋಲಿಕೆ  

ವಾರದಲ್ಲಿ ನೀವು ಆರು ದಿವಸ ಕೆಲಸಮಾಡಿ. ಏಳನೆಯ ದಿವಸ ಯಾವ ಕೆಲಸವನ್ನೂ ಮಾಡದಿರಿ. ಆ ದಿನ ನಿಮ್ಮ ಎತ್ತುಗಳು, ಕತ್ತೆಗಳು, ದಾಸದಾಸಿಯರು ಹಾಗೂ ಪರದೇಶೀಯರು ವಿಶ್ರಮಿಸಿಕೊಳ್ಳಲಿ.


ಯೇಸು ಸಬ್ಬತ್‍ದಿನದಲ್ಲಿ ಗುಣಮಾಡಿದ್ದನ್ನು ಕಂಡು, ಪ್ರಾರ್ಥನಾಮಂದಿರದ ಅಧಿಕಾರಿ ಕುಪಿತನಾದನು. ಕೂಡಿದ್ದ ಜನರನ್ನು ಉದ್ದೇಶಿಸಿ, “ಕೆಲಸ ಮಾಡಲು ಆರು ದಿನಗಳಿವೆ, ಆ ದಿನಗಳಲ್ಲಿ ಬಂದು ಗುಣಮಾಡಿಸಿಕೊಳ್ಳಿರಿ; ಸಬ್ಬತ್‍ದಿನದಲ್ಲಿ ಮಾತ್ರ ಕೂಡದು,” ಎಂದನು.


ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಾಶದಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಾಯುಧ, ರಥಸಾಮಗ್ರಿಗಳನ್ನು ಮಾಡುವವರೂ ಆಗಬೇಕು.


ಎಂದಿಗೂ ವ್ಯವಸಾಯವಿಲ್ಲದಂಥ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ಹೋಗಿ ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.


ಆರು ದಿನಗಳು ದುಡಿಯಬೇಕು. ಏಳನೆಯ ದಿನ ಪರಿಶುದ್ಧವಾದ ದಿನ. ಅದು ಸರ್ವೇಶ್ವರನಿಗೆ ಮೀಸಲಾದ ಸಬ್ಬತ್ ದಿನ. ಆದ್ದರಿಂದ ನೀವು ಸಂಪೂರ್ಣವಾಗಿ ದುಡಿಮೆ ನಿಲ್ಲಿಸಬೇಕು. ಆ ದಿನ ದುಡಿಯುವವನಿಗೆ ಮರಣದಂಡನೆಯಾಗಬೇಕು.


ಅನಂತರ ಅಲ್ಲಿಂದ ಹಿಂದಿರುಗಿ ಶವಲೇಪನಕ್ಕಾಗಿ ಸುಗಂಧದ್ರವ್ಯಗಳನ್ನು ಮತ್ತು ಪರಿಮಳ ತೈಲವನ್ನು ಸಿದ್ಧಮಾಡಿಕೊಂಡರು. ಸಬ್ಬತ್‍ದಿನ, ಧರ್ಮನಿಯಮಾನುಸಾರ ವಿಶ್ರಮಿಸಿಕೊಂಡರು.


ಹೊಲಗೇಯುವ ನಿಮ್ಮ ಎತ್ತುಕತ್ತೆಗಳು ಮೊರದಿಂದಲೂ ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು.


ದೇಶಕ್ಕೆ ಬರಗಾಲ ಬಂದು ಈಗಾಗಲೇ ಎರಡು ವರ್ಷಗಳಾದವು. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ ಕೊಯ್ಯುವುದಕ್ಕಾಗಲಿ ಅವಕಾಶವಿಲ್ಲ.


ಆರು ದಿನಗಳು ಕೆಲಸ ಮಾಡಬಹುದು. ಏಳನೆಯ ದಿನ ವಿಶ್ರಾಂತಿದಿನವಾದ ಸಬ್ಬತ್, ಸರ್ವೇಶ್ವರನಾದ ನನಗೆ ಪರಿಶುದ್ಧ ದಿನ. ಇಂಥ ಸಬ್ಬತ್ ದಿನದಲ್ಲಿ ದುಡಿಯುವವನಿಗೆ ಮರಣ ಶಿಕ್ಷೆಯಾಗಬೇಕು.


ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು.


ಆ ಕಾಲದಲ್ಲಿ, ಜನರು ಸಬ್ಬತ್‍ದಿನ ಜುದೇಯನಾಡಿನಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನು ಕಂಡೆ; ಅಂತೆಯೇ ಕಣದ ಕಾಳನ್ನು ಕೂಡಿಸಿ ಆ ಕಾಳು, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು, ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಜೆರುಸಲೇಮಿಗೆ ತರುವುದನ್ನು ಗಮನಿಸಿದೆ. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ಅವರನ್ನು ಗದರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು