Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:26 - ಕನ್ನಡ ಸತ್ಯವೇದವು C.L. Bible (BSI)

26 “ಭೂಮಿಯ ಮೊದಲನೆಯ ಬೆಳೆಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಭೂವಿುಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ನೀವು ಕೊಯ್ಯುವ ಪ್ರಥಮವಾದ ಬೆಳೆಗಳನ್ನು ಯೆಹೋವನಿಗೆ ಕೊಡಿರಿ. ಅವುಗಳನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತನ್ನಿರಿ. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಎಂದಿಗೂ ಬೇಯಿಸಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:26
13 ತಿಳಿವುಗಳ ಹೋಲಿಕೆ  

“ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. "ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


“ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ.


ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ಆದುದರಿಂದ ಸರ್ವೇಶ್ವರಾ, ನೀವು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ; ಸ್ವೀಕರಿಸಬೇಕು’ ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿಟ್ಟು ಅವರನ್ನು ಆರಾಧಿಸಬೇಕು.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


“ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿಗೆ ತಂದೊಪ್ಪಿಸಬೇಕು.


ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದ ಕಾಣಿಕೆಯನ್ನು ತಂದುಕೊಡುವವರೆಗೆ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ, ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನೀವು ಎಲ್ಲಿದ್ದರೂ ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿದೆ.


ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಕಿಂಚಿತ್ತನ್ನು ಸರ್ವೇಶ್ವರನಿಗೆಂದು ಮೀಸಲಾಗಿಡುವಂತೆಯೆ ಆ ಕಣಕದಿಂದ ಮಾಡುವ ಮೊದಲ ರೊಟ್ಟಿಯನ್ನು ಮೀಸಲಾಗಿಡಬೇಕು.


ಆ ಜನರು ತಮ್ಮ ನಾಡಿನ ಎಲ್ಲ ಬೆಳೆಗಳಲ್ಲಿ ನನಗೆ ತರುವ ಪ್ರಥಮ ಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.


ನಮ್ಮ ಭೂಮಿಯ ಮತ್ತು ಎಲ್ಲ ಹಣ್ಣಿನಮರಗಳ ಪ್ರಥಮ ಫಲವನ್ನು ಪ್ರತೀ ವರ್ಷವೂ ಸರ್ವೇಶ್ವರನ ಆಲಯಕ್ಕೆ ತಂದುಕೊಡುತ್ತೇವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು