ವಿಮೋಚನಕಾಂಡ 34:28 - ಕನ್ನಡ ಸತ್ಯವೇದವು C.L. Bible (BSI)28 ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಮೋಶೆ ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರಳು ನಾಲ್ವತ್ತು ದಿನ ಇದ್ದನು. ಅವನು ಏನೂ ಊಟಮಾಡಲಿಲ್ಲ, ಏನೂ ಕುಡಿಯಲಿಲ್ಲ. ಆತನು ನಿಬಂಧನದ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಿಗೆಗಳ ಮೇಲೆ ಬರೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು. ಅಧ್ಯಾಯವನ್ನು ನೋಡಿ |