Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:29 - ಕನ್ನಡ ಸತ್ಯವೇದವು C.L. Bible (BSI)

29 ಮೋಶೆ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದು ಬಂದಾಗ ಅವನ ಮುಖ ಪ್ರಕಾಶಮಾನವಾಗಿತ್ತು. ಏಕೆಂದರೆ ಅವನು ಸರ್ವೇಶ್ವರನ ಸಂಗಡ ಸಂಭಾಷಿಸಿದ್ದನು. ಆದರೆ ಅದು ಅವನಿಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆಯು ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದುಬಂದಾಗ ಅವನು ಯೆಹೋವನ ಸನ್ನಿಧಿಯಲ್ಲಿ ಇದ್ದು ಆತನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಅ ಪ್ರಭಾವವು ಅವನಿಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೋಶೆ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದು ಬಂದಾಗ ಅವನು ಯೆಹೋವನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಆ ಸಂಗತಿ ಅವನಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ತರುವಾಯ ಮೋಶೆಯು ಸೀನಾಯಿ ಬೆಟ್ಟದಿಂದ ಇಳಿದು ಬಂದನು. ಒಡಂಬಡಿಕೆಯ ವಾಕ್ಯಗಳು ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಅವನು ಹಿಡಿದುಕೊಂಡಿದ್ದನು. ಯೆಹೋವನು ಅವನೊಡನೆ ಮಾತಾಡಿದ್ದರಿಂದ ಅವನ ಮುಖವು ಹೊಳೆಯುತ್ತಿತ್ತು. ಆದರೆ ಮೋಶೆಗೆ ಇದು ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ, ಅವನು ಯೆಹೋವ ದೇವರ ಸಂಗಡ ಬೆಟ್ಟದಲ್ಲಿ ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿಸುತ್ತದೆಂದು ಬೆಟ್ಟದಿಂದ ಇಳಿದಾಗ ಮೋಶೆಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:29
22 ತಿಳಿವುಗಳ ಹೋಲಿಕೆ  

ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು.


ಪ್ರಾರ್ಥನೆಮಾಡುವ ಸಮಯದಲ್ಲಿ ಯೇಸುವಿನ ಮುಖಚರ್ಯೆಯು ಮಾರ್ಪಟ್ಟಿತು. ಅವರ ಉಡುಪು ಬೆಳ್ಳಗೆ ಪ್ರಜ್ವಲಿಸಿತು.


ಮೋಶೆ ಆಜ್ಞಾಶಾಸನಗಳಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಗೆಗಳ ಎರಡು ಪಕ್ಕಗಳಲ್ಲೂ ಅಕ್ಷರಗಳು ಬರೆದಿದ್ದವು. ಇಕ್ಕಡೆಗಳಲ್ಲೂ ಬರಹವಿತ್ತು.


ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.


ಕುಂದಿಹೋಗುವಂಥ ಮಹಿಮೆಯು ನಂದಿಹೋಗುವುದನ್ನು ಇಸ್ರಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕುಹಾಕಿಕೊಳ್ಳುತ್ತಿದ್ದನು. ನಾವು ಆತನಂತೆ ಅಲ್ಲ.


ನಾನು ಮತ್ತೊಂದು ದೃಶ್ಯವನ್ನು ಕಂಡೆ. ಒಬ್ಬ ಬಲಿಷ್ಠ ದೇವದೂತನು ಸ್ವರ್ಗದಿಂದ ಇಳಿದುಬಂದನು. ಅವನು ಮೇಘಾಂಬರನಾಗಿದ್ದನು. ಅವನ ತಲೆಯ ಮೇಲೆ ಮುಗಿಲು ಬಿಲ್ಲೊಂದು ಇತ್ತು. ಮುಖವು ಸೂರ್ಯನಂತೆ ಇತ್ತು. ಕಾಲುಗಳು ಅಗ್ನಿಸ್ತಂಭಗಳಂತಿದ್ದವು.


ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.


ತನ್ನನ್ನು ಗುಣಪಡಿಸಿದವರು ಯಾರೆಂದು ಅವನಿಗೆ ತಿಳಿದಿರಲಿಲ್ಲ; ಅಲ್ಲದೆ ಜನಸಂದಣಿಯ ನಿಮಿತ್ತ ಯೇಸು ಆಗಲೇ ಮರೆಯಾಗಿಬಿಟ್ಟಿದ್ದರು.


ಪೇತ್ರನು ಸೆರೆಮನೆಯ ಹೊರಕ್ಕೆ ಅವನನ್ನು ಹಿಂಬಾಲಿಸಿ ಹೋದನು. ಅಷ್ಟಾದರೂ ದೂತನು ಮಾಡುತ್ತಿರುವುದು ನಿಜವೆಂದು ಅವನಿಗೆ ಅರಿವಾಗಲಿಲ್ಲ; ತನಗೇನೋ ದರ್ಶನವಾಗುತ್ತಿದೆಯೆಂದೆ ಭಾವಿಸಿದನು.


ಪ್ರತ್ಯುತ್ತರವಾಗಿ ಪೌಲನು, “ಸಹೋದರರೇ, ಇವರು ಪ್ರಧಾನ ಯಾಜಕರೆಂದು ನನಗೆ ತಿಳಿಯದೆ ಹೋಯಿತು. ‘ನಿಮ್ಮ ಪ್ರಜಾಪಾಲನನ್ನು ದೂಷಿಸಬೇಡ’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ ಅಲ್ಲವೆ?” ಎಂದನು.


ಅದಕ್ಕೆ ಉತ್ತರವಾಗಿ ಯೇಸು, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆಹೋಯಿತೇ?” ಎಂದರು.


ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದೇ ತಿಳಿಯಲಿಲ್ಲ. ಶಿಷ್ಯರು ಅಷ್ಟು ಭಯಭ್ರಾಂತ ಆಗಿದ್ದರು!


ಅವನ ಶಕ್ತಿ ಇಂಗಿಹೋಯಿತು. ಆಗ ಅವಳು, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತು, “ಮುಂಚಿನಂತೆಯೇ ಈಗಲೂ ಕೊಸರಿಕೊಂಡು ಹೋಗುವೆನು,” ಎಂದುಕೊಂಡನು. ಆದರೆ ಸರ್ವೇಶ್ವರ ತನ್ನನ್ನು ಬಿಟ್ಟುಹೋಗಿ ಇದ್ದಾರೆಂಬುದು ಅವನಿಗೆ ತಿಳಿಯಲಿಲ್ಲ.


ಬೆಳಿಗ್ಗೆ ಆಯಿ ಊರಿನರಸನು ಈ ಸಮಾಚಾರವನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತ ಇಸ್ರಯೇಲರ ಸಂಗಡ ಯುದ್ಧಮಾಡಲು ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಸ್ಥಳಕ್ಕೆ ಎದುರಾಗಿದ್ದ ಆ ಕಣಿವೆಗೆ ಬಂದರು. ನಗರದ ಹಿಂಭಾಗದಲ್ಲಿ ಹೊಂಚಿ ನೋಡುತ್ತಿರುವವರ ವಿಷಯ ಅವನಿಗೆ ಗೊತ್ತಿರಲಿಲ್ಲ.


ವೇಶ್ಯೆ ಆ ಇಬ್ಬರನ್ನು ಅಡಗಿಸಿಟ್ಟು, ಕೇಳಲು ಬಂದವರಿಗೆ, “ಆ ವ್ಯಕ್ತಿಗಳು ನನ್ನ ಬಳಿಗೆ ಬಂದದ್ದೇನೋ ನಿಜ. ಅವರು ಎಲ್ಲಿಯವರೆಂದು ನನಗೆ ತಿಳಿಯದೆ ಹೋಗಿದೆ.


ಪುನಃ ಶಿಷ್ಯರ ಬಳಿಗೆ ಬಂದಾಗ, ಅವರು ಇನ್ನೂ ನಿದ್ರಾವಸ್ಥೆಯಲ್ಲಿದ್ದರು; ಅವರ ಕಣ್ಣುಗಳು ಬಹುಭಾರವಾಗಿದ್ದವು. ಯೇಸುವಿಗೆ ಏನು ಉತ್ತರಕೊಡಬೇಕೆಂದು ಅವರಿಗೆ ತಿಳಿಯದೆಹೋಯಿತು.


ಇಸ್ರಯೇಲರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ‘ಮನ್ನ’ ಎಂದರು. ಇದೇನಿರಬಹುದೆಂದು ವಿಚಾರಿಸಿದರು ಮೋಶೆ ಅವರಿಗೆ, “ಇದು ಸರ್ವೇಶ್ವರ ಸ್ವಾಮಿ ನಿಮಗೋಸ್ಕರ ಕೊಟ್ಟ ಆಹಾರ.


ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವುದನ್ನು ಮುಗಿಸಿದ ಮೇಲೆ ಅವನಿಗೆ ತಮ್ಮ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳಾದ ಎರಡು ಆಜ್ಞಾಶಾಸನಗಳನ್ನು ಕೊಟ್ಟರು.


ಸರ್ವೇಶ್ವರ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದೆ; ನನ್ನಿಂದ ಸಿದ್ಧ ಆಗಿದ್ದ ಮಂಜೂಷದಲ್ಲಿ ಅವರ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆ; ಅವು ಇಂದಿನವರೆಗೂ ಅದರಲ್ಲೇ ಇವೆ.


ಜ್ಞಾನಿಗೆ ಸಮಾನರು ಯಾರು? ಅವನಲ್ಲದೆ ಬಗೆಹರಿಸಬಲ್ಲವರು ಯಾರು? ಜ್ಞಾನವು ಮನುಷ್ಯನ ಮುಖವನ್ನು ವಿಕಾಸಗೊಳಿಸುತ್ತದೆ; ಗಂಟುಮೋರೆಯನ್ನು ಮಾರ್ಪಡಿಸುತ್ತದೆ.


ಮೋಶೆಯ ಮುಖ ಪ್ರಕಾಶಮಾನವಾಗಿರುವುದನ್ನು ಇಸ್ರಯೇಲರು ಗಮನಿಸುತ್ತಿದ್ದರು. ಆದಕಾರಣ ಅವನು ಸರ್ವೇಶ್ವರನ ಸಂಗಡ ಮಾತಾಡಲು ಹೋಗುವವರೆಗೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡಿರುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು