Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಮೋಶೆಯ ಮುಂದೆ ಹಾದುಹೋಗುತ್ತಾ, “ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳ ದೇವರಾಗಿದ್ದಾನೆ. ಯೆಹೋವನು ಕೋಪಗೊಳ್ಳುವುದರಲ್ಲಿ ನಿಧಾನವಾಗಿದ್ದಾನೆ. ಯೆಹೋವನು ಮಹಾ ಪ್ರೀತಿಸ್ವರೂಪನಾಗಿದ್ದಾನೆ. ಯೆಹೋವನು ಭರವಸೆಗೆ ಯೋಗ್ಯನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಅವನೆದುರಿಗೆ ಹಾದು ಹೋಗಿ, “ಯೆಹೋವ ದೇವರು, ಯೆಹೋವ ದೇವರು, ಕರುಣಾಳುವು, ಕೃಪಾಳುವು, ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:6
47 ತಿಳಿವುಗಳ ಹೋಲಿಕೆ  

ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.


ಪ್ರಭು ದಯಾನಿಧಿ, ಕೃಪಾಸಾಗರನು I ಸಹನಶೀಲನು, ಪ್ರೀತಿಪೂರ್ಣನು II


ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.


ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ನೀವು ಸರ್ವೇಶ್ವರನಿಗೆ ಅಭಿಮುಖರಾದರೆ, ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ಮರಳಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಸರ್ವೇಶ್ವರ ದಯಾವಂತರು, ಕನಿಕರವುಳ್ಳವರು. ತಮಗೆ ಅಭಿಮುಖರಾಗುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.


ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ಪ್ರಭು ಕೃಪಾಳು, ನ್ಯಾಯಪ್ರಿಯನು I ಕರುಣಾಮಯನು, ನಮ್ಮ ದೇವನು II


ಮೀರಿದೆ ನಿನ್ನಚಲಪ್ರೀತಿ ಗಗನ ಮಂಡಲವನು I ಮುಚ್ಚಿದೆ ನಿನ್ನ ಸತ್ಯಸಂಧತೆ ಮೇಘರಾಶಿಯನು II


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಆತನ ಅದ್ಭುತಕಾರ್ಯ ಸ್ಮರಣೀಯ I ಕರುಣಾವಂತ ಪ್ರಭು, ಪ್ರೀತಿಮಯ II


ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II


ನಿನ್ನಚಲ ಪ್ರೀತಿ ಮುಟ್ಟುತ್ತಿದೆ ಗಗನಮಂಡಲವನು I ನಿನ್ನ ಸತ್ಯಸಂಧತೆ ತಾಕುತ್ತಿದೆ ಮೇಘಮಂಡಲವನು II


ಏಕೆಂದರೆ ಅವನಿಗಿರುವ ಹೊದಿಕೆ ಅದೊಂದೇ; ಅದನ್ನೇ ಮೈಗೆ ಸುತ್ತಿಕೊಳ್ಳಬೇಕು; ಬೇರೆ ಯಾವುದನ್ನು ಹೊದ್ದುಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕಿವಿಗೊಡುವೆನು. ಏಕೆಂದರೆ ನಾನು ದಯಾಮಯನು.


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ಹೊಸಹೊಸದಾಗಿ ಅವು ಒದಗುತ್ತವೆ ದಿನದಿನವು ಮಹತ್ತರವಾದುದು ಆತನ ಸತ್ಯಸಂಧತೆಯು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II


ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II


ಹೇಳುವಿರಿ ನೀವು ಆ ದಿನದಂದು ಈ ಪರಿ - “ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು ಸ್ಮರಿಸಿರಿ ಆತನ ಶ್ರೀನಾಮವನು ಸಾರಿರಿ ಜನತೆಗೆ ಆತನ ಕಾರ್ಯಗಳನು ಘೋಷಿಸಿರಿ ಆತನ ನಾಮಘನತೆಯನು.


ಯುಗಯುಗಾಂತರಕು ದೃಢವಾಗಿರುವುವು I ಸತ್ಯನೀತಿಗಳು ಅವುಗಳಿಗೆ ಅಡಿಪಾಯವು II


ಆಗ ಇನ್ನೊಮ್ಮೆ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಸರ್ವೇಶ್ವರನ ಮುಂದೆ ನಿಲ್ಲು,” ಎಂದು ವಾಣಿಯಾಯಿತು; ಆಹಾ! ಸರ್ವೇಶ್ವರ ಅಲ್ಲೇ ಹಾದುಹೋದರು, ಅವರ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿ ಬೀಸಿತು; ಸರ್ವೇಶ್ವರ ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲೂ ಅವರಿರಲಿಲ್ಲ.


ಭೂಮ್ಯಾಕಾಶ, ಸಾಗರ, ಚರಾಚರಗಳನು ನಿರ್ಮಿಸಿದವ ಆತನೆ I ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೆ II


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಸರ್ವೇಶ್ವರ, “ನನ್ನ ಒಳ್ಳೆಯತನವೆಲ್ಲ ನಿನ್ನೆದುರಿಗೆ ಹಾದುಹೋಗುವಂತೆ ಮಾಡುವೆನು. ಸರ್ವೇಶ್ವರನಾದ ನನ್ನ ನಾಮದ ಮಹತ್ವವನ್ನು ನಿನ್ನೆದುರಿಗೆ ಪ್ರಕಟಿಸುವೆನು. ಯಾರ್ಯಾರ ಮೇಲೆ ದಯೆಯಿಡಲು ಆಶಿಸುತ್ತೇನೋ ಅವರ ಮೇಲೆ ದಯೆಯಿಡುತ್ತೇನೆ. ಯಾರ್ಯಾರನ್ನು ಕರುಣಿಸಲು ಆಶಿಸುತ್ತೇನೋ ಅವರನ್ನು ಕರುಣಿಸುತ್ತೇನೆ,” ಎಂದರು.


ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.


ಪ್ರಕಟಿಸುವೆನು ನಾನು ಸರ್ವೇಶ್ವರನ ನಾಮಮಹತ್ವವನು ಕೊಂಡಾಡಿ ನೀವು ಆ ದೇವನ ಮಹಾಮಹಿಮೆಯನು.


ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.


ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


ಹಳೆಯ ಕಷ್ಟದುಃಖಗಳು ಇನ್ನು ಕಣ್ಮರೆಯಾಗಿಹೋಗುವುವು: ನಾಡಿನಲ್ಲಿ ಆಶೀರ್ವಾದ ಪಡೆಯುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಆಶೀರ್ವಾದ ಪಡೆಯುವನು. ಶಪಥ ಮಾಡುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಶಪಥಮಾಡುವನು.”


ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.


ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.


ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.


ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.


ಪ್ರೀತಿ ಸತ್ಯತೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಪಟ್ಟಿಯಾಗಿರಲಿ, ಹೃದಯದಹಲಗೆಯಲ್ಲಿ ಲಿಖಿತವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು