Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:7 - ಕನ್ನಡ ಸತ್ಯವೇದವು C.L. Bible (BSI)

7 ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಾವಿರಾರು ತಲೆಗಳವರೆಗೂ ದಯೆತೋರಿಸುವವನು; ದೋಷಾಪರಾಧಪಾಪಗಳನ್ನು ಕ್ಷವಿುಸುವವನು; ಆದರೂ [ಅಪರಾಧಗಳನ್ನು] ಶಿಕ್ಷಿಸದೆ ಬಿಡದವನು; ತಂದೆಗಳ ದೋಷ ಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಸಾವಿರಾರು ತಲೆಗಳವರೆಗೆ ತನ್ನ ದಯೆ ತೋರಿಸುತ್ತಾನೆ. ಜನರು ಮಾಡುವ ಪಾಪಗಳನ್ನು ಯೆಹೋವನು ಕ್ಷಮಿಸುತ್ತಾನೆ. ಆದರೆ ಅಪರಾಧಿಗಳನ್ನು ಶಿಕ್ಷಿಸುವುದಕ್ಕೆ ಆತನು ಮರೆಯುವುದಿಲ್ಲ. ಯೆಹೋವನು ಅಪರಾಧಿಗಳನ್ನು ಶಿಕ್ಷಿಸುವನು ಮತ್ತು ಅವರ ಅಪರಾಧದ ಫಲವು ಅವರ ಮಕ್ಕಳ ಮೇಲೂ ಮೊಮ್ಮಕ್ಕಳ ಮೇಲೂ ಮತ್ತು ಮರಿಮೊಮ್ಮಕ್ಕಳ ಮೇಲೂ ಬರುವಂತೆ ಮಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಾವಿರ ತಲೆಗಳವರೆಗೂ ಕರುಣೆ ತೋರಿಸುವಾತನು. ದೋಷವನ್ನು, ಅಪರಾಧವನ್ನು, ಪಾಪವನ್ನು ಕ್ಷಮಿಸುವಾತನು ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನು,” ಎಂದು ಪ್ರಕಟಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:7
57 ತಿಳಿವುಗಳ ಹೋಲಿಕೆ  

ಮನ್ನಿಸುವನಾತ ನನ್ನ ದೋಷಗಳನು I ವಾಸಿಮಾಡುವನು ನನ್ನ ರೋಗಗಳನು II


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.


ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು.


ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II


ನಾನು ತಪ್ಪುಮಾಡಿದರೆ ಅದನು ಕಂಡುಹಿಡಿದು ಆ ದೋಷಕ್ಕೆ ಕ್ಷಮೆ ನೀಡಕೂಡದೆಂದು.


ನಿರಪರಾಧಿಯೂ ನೀತಿವಂತನೂ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಲೇಕೂಡದು; ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ: “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,


“ನನ್ನ ಸಹೋದರರೇ, ನಿಮಗಿದು ತಿಳಿದಿರಲಿ: ಪಾಪಕ್ಷಮೆ ಯೇಸುವಿನ ಮುಖಾಂತರವೇ ಸಾಧ್ಯ ಎಂದು ಸಾರಲಾಗುತ್ತಿದೆ. ಮೋಶೆಯ ನಿಯಮಗಳ ಪಾಲನೆಯ ಮೂಲಕ ಪಾಪಗಳಿಂದ ವಿಮೋಚನೆ ಹೊಂದಲು ನಿಮ್ಮಿಂದಾಗಲಿಲ್ಲ; ಆದರೆ ಯೇಸುವನ್ನು ವಿಶ್ವಾಸಿಸುವ ಪ್ರತಿ ಒಬ್ಬನೂ ಅವೆಲ್ಲವುಗಳಿಂದ ವಿಮೋಚನೆ ಪಡೆಯುತ್ತಾನೆ.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಆಗ ಯೆಹೋಶುವನು ಅವರಿಗೆ, “ನೀವು ಸರ್ವೇಶ್ವರನಿಗೆ ಸೇವೆಸಲ್ಲಿಸಲು ಶಕ್ತರಲ್ಲ. ಸರ್ವೇಶ್ವರಸ್ವಾಮಿ ಪರಿಶುದ್ಧರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಪಾಪ, ಅಪರಾಧಗಳನ್ನು ಕ್ಷಮಿಸರು.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ನೀವು ಆತನಲ್ಲಿ ಲಕ್ಷ್ಯವಿಟ್ಟು ಮಾತಿಗೆ ಕಿವಿಗೊಡಬೇಕು. ಆತನಿಗೆ ಅವಿಧೇಯರಾಗಿ ಇರಬಾರದು. ಏಕೆಂದರೆ ಆತ ಬರುವುದು ನನ್ನ ಹೆಸರಿನಲ್ಲಿ. ನೀವು ಅವಿಧೇಯರಾದರೆ ಆತ ನಿಮ್ಮನ್ನು ಕ್ಷಮಿಸಲಾರನು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಅನಂತರ ಯೇಸು ಆ ಮಹಿಳೆಗೆ: “ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನು ಮನ್ನಾ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ “ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?” ಎಂದು ಕೇಳಿದರು.


“ಮಾನವರು ಮಾಡುವ ಪ್ರತಿಯೊಂದು ಪಾಪಕ್ಕೂ ಆಡುವ ದೇವದೂಷಣೆಗೂ ಕ್ಷಮೆ ಉಂಟು. ಆದರೆ ಪವಿತ್ರಾತ್ಮನ ವಿರುದ್ಧ ಆಡುವ ದೂಷಣೆಗೆ ಕ್ಷಮೆಯೇ ಇಲ್ಲ.


ಕಳ್ಳ ತಕ್ಕಡಿಗಳಿಂದ ಮೋಸದ ಬಟ್ಟುಗಳಿಂದ ಅಳೆದುಹಾಕುವವನು ನಿರ್ದೋಷಿಯೆಂದು ತೀರ್ಮಾನಿಸಲೆ?


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


ಫರೋಹನನ್ನೂ ಅವನ ಸೈನ್ಯವನ್ನೂ ಆ ಕಡಲಲ್ಲಿ ಮುಳುಗಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಈಜಿಪ್ಟಿನ ಚೊಚ್ಚಲುಗಳನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.


ಅವನು ಇನ್ನೂ ತಡಮಾಡುತ್ತಿರುವುದನ್ನು ಕಂಡು, ಆ ಮನುಷ್ಯರು ಅವನನ್ನು ಹಾಗು ಅವನ ಹೆಂಡತಿ ಮಕ್ಕಳನ್ನು ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಸರ್ವೇಶ್ವರ ಸ್ವಾಮಿಗೆ ಅವನ ಮೇಲೆ ಅಷ್ಟು ಕನಿಕರವಿತ್ತು.


ಸರ್ವೇಶ್ವರ, “ನನ್ನ ಒಳ್ಳೆಯತನವೆಲ್ಲ ನಿನ್ನೆದುರಿಗೆ ಹಾದುಹೋಗುವಂತೆ ಮಾಡುವೆನು. ಸರ್ವೇಶ್ವರನಾದ ನನ್ನ ನಾಮದ ಮಹತ್ವವನ್ನು ನಿನ್ನೆದುರಿಗೆ ಪ್ರಕಟಿಸುವೆನು. ಯಾರ್ಯಾರ ಮೇಲೆ ದಯೆಯಿಡಲು ಆಶಿಸುತ್ತೇನೋ ಅವರ ಮೇಲೆ ದಯೆಯಿಡುತ್ತೇನೆ. ಯಾರ್ಯಾರನ್ನು ಕರುಣಿಸಲು ಆಶಿಸುತ್ತೇನೋ ಅವರನ್ನು ಕರುಣಿಸುತ್ತೇನೆ,” ಎಂದರು.


ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


ತಮ್ಮನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವರು. ಇದನ್ನು ನೀವು ತಿಳಿದುಕೊಳ್ಳಬೇಕು. ಹಗೆಯವರ ವಿಷಯದಲ್ಲಿ ಅವರು ತಡಮಾಡದೆ ಆಗಲೇ ಮುಯ್ಯಿತೀರಿಸುವರು.


ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.


ನೀವು ಸರ್ವೇಶ್ವರನಿಗೆ ಅಭಿಮುಖರಾದರೆ, ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ಮರಳಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಸರ್ವೇಶ್ವರ ದಯಾವಂತರು, ಕನಿಕರವುಳ್ಳವರು. ತಮಗೆ ಅಭಿಮುಖರಾಗುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”


ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..


ನಿನ್ನ ನಾಮದ ನಿಮಿತ್ತ ನನ್ನನು ಈಕ್ಷಿಸು I ಎನ್ನ ಘೋರ ಪಾಪವನು ಪ್ರಭು ಕ್ಷಮಿಸು II


ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ I ತಪ್ಪನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ II


ಮರೆಯದಿರಲಿ ಪ್ರಭು ಅವನಾ ಹಿರಿಯರ ದೋಷವನು I ಪರಿಹರಿಸದಿರಲಿ ಅವನ ತಾಯಿಯು ಗೈದ ಪಾಪವನು II


ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು