Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:26 - ಕನ್ನಡ ಸತ್ಯವೇದವು C.L. Bible (BSI)

26 ನಿಪುಣೆಯರಾದ ಬೇರೆ ಮಹಿಳೆಯರು ಆಡಿನ ತುಪ್ಪಟವನ್ನು ನೇಯ್ದು ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಬುದ್ಧಿವಂತೆಯರಾದ ಬೇರೆ ಸ್ತ್ರೀಯರು ಆಡಿನ ಕೂದಲುಗಳನ್ನು ನೇಯ್ದು ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಬೇರೆ ಜಾಣೆಯರಾದ ಸ್ತ್ರೀಯರು ಆಡಿನ ಕೂದಲುಗಳನ್ನು ನೂತು ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿಪುಣರಾಗಿದ್ದ ಇತರ ಸ್ತ್ರೀಯರು ಆಡುಕೂದಲಿನಿಂದ ಬಟ್ಟೆಯನ್ನು ತಯಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಕುಶಲತೆ ಬಲ್ಲ ಎಲ್ಲಾ ಸ್ತ್ರೀಯರು ಮೇಕೆ ಕೂದಲುಗಳನ್ನು ನೇಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:26
8 ತಿಳಿವುಗಳ ಹೋಲಿಕೆ  

ಅವರಲ್ಲಿ ಉದಾರ ಹೃದಯಿಗಳು ಸ್ವಂತ ಇಷ್ಟದಿಂದ ಮುಂದೆ ಬಂದು ದೇವದರ್ಶನದ ಗುಡಾರದ ಕೆಲಸಕ್ಕೂ, ಅದರ ಸಮಸ್ತ ಸೇವೆಗೂ ಹಾಗೂ ದೀಕ್ಷಾವಸ್ತ್ರಗಳಿಗೂ ಬೇಕಾದುವುಗಳನ್ನು ಸರ್ವೇಶ್ವರನಿಗೆ ಕಾಣಿಕೆಯಾಗಿ ತಂದರು.


ನಿಪುಣ ಶಿಲ್ಪಗಾರರೆಲ್ಲರು ಸೇರಿ ಹತ್ತು ತಾನು ನಯವಾದ ನಾರುಬಟ್ಟೆಯಿಂದ ಗುಡಾರವನ್ನು ನಿರ್ಮಿಸಿದರು. ಆ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿಹಾಕಿ ಮಾಡಿದರು.


ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು.


ನಿಪುಣೆಯರಾದ ಮಹಿಳೆಯರು ತಮ್ಮ ಕೈಗಳಿಂದ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ನೂಲನ್ನು ಹಾಗು ನಯವಾದ ನಾರಿನ ನೂಲನ್ನು ನೇಯ್ದು ಆ ನೂಲುಗಳನ್ನು ತಂದುಕೊಟ್ಟರು.


ಜನನಾಯಕರು ಮಹಾಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು, ವಕ್ಷ ಕವಚದಲ್ಲಿ ಖಚಿಸಬೇಕಾದ ರತ್ನಗಳನ್ನು,


ಬೆಚಲೇಲನನ್ನು ಒಹೋಲೀಯಾಬನನ್ನು ಮತ್ತು ಸರ್ವೇಶ್ವರನಿಂದ ಜ್ಞಾನಪಡೆದು ಕೆಲಸ ಕೈಗೊಳ್ಳಲು ಉತ್ಸುಕರಾಗಿದ್ದ ಕಲೆಗಾರರೆಲ್ಲರನ್ನು ಮೋಶೆ ತನ್ನ ಬಳಿಗೆ ಕರೆಸಿದನು.


ಸರ್ವೇಶ್ವರನ ಆಲಯದ ಪ್ರಾಕಾರದೊಳಗಿದ್ದ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ ದೇವತೆಗಾಗಿ ಬಟ್ಟೆಬರೆಗಳನ್ನು ನೇಯುತ್ತಿದ್ದರು.


ರಾಟೆಯನ್ನು ತಾನೆ ಆಡಿಸುತ್ತಾಳೆ; ಕದಿರನ್ನು ಕೈಯಿಂದ ಹಿಡಿಯುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು