Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:3 - ಕನ್ನಡ ಸತ್ಯವೇದವು C.L. Bible (BSI)

3 ನೀವು ವಾಸಿಸುವ ಯಾವ ಮನೆಯಲ್ಲೇ ಆಗಲಿ, ಸಬ್ಬತ್ ದಿನದಂದು ಬೆಂಕಿಯನ್ನು ಹೊತ್ತಿಸಬಾರದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು” ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು; ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ವಾಸಿಸುವ ಯಾವ ಸ್ಥಳದಲ್ಲಿಯೂ ಸಬ್ಬತ್‌ದಿನದಂದು ಬೆಂಕಿಯನ್ನು ಹೊತ್ತಿಸಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸಬ್ಬತ್ ದಿನದಲ್ಲಿ ನೀವು ವಾಸಮಾಡುವ ಯಾವ ಮನೆಯಲ್ಲಿಯೂ ಬೆಂಕಿಯನ್ನು ಹೊತ್ತಿಸಬಾರದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:3
9 ತಿಳಿವುಗಳ ಹೋಲಿಕೆ  

ಅದಕ್ಕೆ ಮೋಶೆ, “ಇದು ಸರ್ವೇಶ್ವರ ಹೇಳಿದ ಮಾತು. ನಾಳೆ ವಿಶ್ರಾಂತಿಯ ದಿನ, ಸರ್ವೇಶ್ವರನ ಪರಿಶುದ್ಧ ‘ಸಬ್ಬತ್’ ದಿನ. ಆಹಾರಕ್ಕೆ ಸುಡಬೇಕಾದುದನ್ನು ಸುಟ್ಟು, ಬೇಯಿಸಬೇಕಾದುದನ್ನು ಬೇಯಿಸಿದ ನಂತರ ಮಿಕ್ಕಿದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿ,” ಎಂದನು.


ಮೊದಲನೆಯ ದಿನದಲ್ಲೇ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲೂ ದೇವಾರಾಧನೆಗಾಗಿ ಸಭೆಸೇರಬೇಕು. ಈ ಎರಡೂ ದಿವಸಗಳಲ್ಲಿ ಯಾವ ಕೆಲಸವನ್ನೂ ಮಾಡಕೂಡದು. ಊಟಕ್ಕೆ ಬೇಕಾದುದನ್ನು ಮಾತ್ರ ಮಾಡಬಹುದು.


“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ


ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು.


ವಾರದಲ್ಲಿ ನೀವು ಆರು ದಿವಸ ಕೆಲಸಮಾಡಿ. ಏಳನೆಯ ದಿವಸ ಯಾವ ಕೆಲಸವನ್ನೂ ಮಾಡದಿರಿ. ಆ ದಿನ ನಿಮ್ಮ ಎತ್ತುಗಳು, ಕತ್ತೆಗಳು, ದಾಸದಾಸಿಯರು ಹಾಗೂ ಪರದೇಶೀಯರು ವಿಶ್ರಮಿಸಿಕೊಳ್ಳಲಿ.


ಆರು ದಿನಗಳು ಕೆಲಸ ಮಾಡಬಹುದು. ಏಳನೆಯ ದಿನ ವಿಶ್ರಾಂತಿದಿನವಾದ ಸಬ್ಬತ್, ಸರ್ವೇಶ್ವರನಾದ ನನಗೆ ಪರಿಶುದ್ಧ ದಿನ. ಇಂಥ ಸಬ್ಬತ್ ದಿನದಲ್ಲಿ ದುಡಿಯುವವನಿಗೆ ಮರಣ ಶಿಕ್ಷೆಯಾಗಬೇಕು.


ಮೋಶೆ ಇಸ್ರಯೇಲರ ಇಡೀ ಸಮಾಜವನ್ನು ಉದ್ದೇಶಿಸಿ: “ಸರ್ವೇಶ್ವರನ ಆಜ್ಞೆ ಇದು: ನೀವು ನಿಮ್ಮ ನಿಮ್ಮ ಆಸ್ತಿಪಾಸ್ತಿಯಿಂದ ಸರ್ವೇಶ್ವರನಿಗೆ ಕಾಣಿಕೆಯನ್ನು ಕೊಡಬೇಕು. ಮನಃಪೂರ್ವಕವಾಗಿ ಕೊಡಬೇಕು. ಸರ್ವೇಶ್ವರನಿಗೆ ತರಬೇಕಾದಂಥ ಕಾಣಿಕೆಗಳು ಇವು: ಚಿನ್ನ, ಬೆಳ್ಳಿ, ತಾಮ್ರ,


ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು