ವಿಮೋಚನಕಾಂಡ 35:34 - ಕನ್ನಡ ಸತ್ಯವೇದವು C.L. Bible (BSI)34 ಅದೂ ಅಲ್ಲದೆ, ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೆ ಮತ್ತು ದಾನ್‍ಕುಲದ ಅಹೀಸಾಮಾಕನ ಮಗ ಒಹೋಲೀಯಾಬನಿಗೆ ವಿಶೇಷ ವರವನ್ನು ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೂ ಮತ್ತು ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನಿಗೂ ವರಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವದಕ್ಕೆ ಸಹ ಅವನಿಗೂ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನಿಗೂ ವರಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಇತರರಿಗೆ ಕಲಿಸುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನು ಯೆಹೋವನು ಬೆಚಲೇಲನಿಗೂ ಒಹೊಲೀಯಾಬನಿಗೂ ಅನುಗ್ರಹಿಸಿದ್ದಾನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಇದಲ್ಲದೆ ಕಲಿಸುವುದಕ್ಕೆ ಅವನಿಗೆ ಮತ್ತು ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದಾರೆ. ಅಧ್ಯಾಯವನ್ನು ನೋಡಿ |
ಇವನು ದಾನ್ ಕುಲದ ಒಬ್ಬ ಸ್ತ್ರೀಯ ಮಗ; ಅವನ ತಂದೆ ಟೈರಿನವನು. ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ ಊದಾ, ನೀಲಿ, ಕೆಂಪುವರ್ಣಗಳುಳ್ಳ ನಾರುಬಟ್ಟೆಗಳನ್ನು ನೇಯುವುದಕ್ಕೂ ಎಲ್ಲಾ ತರದ ಕೆತ್ತನೆಯ ಕೆಲಸ ಮಾಡುವುದಕ್ಕೂ ತನಗೆ ಒಪ್ಪಿಸಲಾಗುವ ಎಲ್ಲಾ ಕಲಾತ್ಮಕ ಕೆಲಸಗಳನ್ನು ನಡೆಸುವುದಕ್ಕೂ ಇವನು ಸಮರ್ಥನು. ನೀನೂ ನಿನ್ನ ತಂದೆ ದಾವೀದನೂ ಗೊತ್ತುಮಾಡಿದ ಕಲಾಕುಶಲರೊಡನೆ ಇವನು ಕೆಲಸಮಾಡಲಿ.