Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:35 - ಕನ್ನಡ ಸತ್ಯವೇದವು C.L. Bible (BSI)

35 ಶಿಲ್ಪಿಗಳು, ಚಮತ್ಕಾರವಾದ ಕೆಲಸ ನಿಯೋಜಿಸುವವರು ಹಾಗು ನೀಲಿ, ಊದ ಹಾಗು ಕಡುಗೆಂಪು ವರ್ಣದ ದಾರದಿಂದಲೂ ನಯವಾದ ನಾರುಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲ ಕಸುಬುದಾರರು ನಡೆಸುವ ಕೆಲಸಗಳನ್ನು ನಿಯೋಜಿಸುವುದಕ್ಕೂ ಹಾಗು ಕಾರ್ಯಗತ ಮಾಡುವುದಕ್ಕೂ ಸರ್ವೇಶ್ವರ ಅವರಿಗೆ ಜ್ಞಾನವನ್ನು ಪೂರ್ತಿಯಾಗಿ ಅನುಗ್ರಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಶಿಲ್ಪಿಗಳು, ಚಮತ್ಕಾರವಾದ ಕೆಲಸ ಕಲ್ಪಿಸುವವರು, ನೀಲಿ ಧೂಮ್ರರಕ್ತವರ್ಣದ ದಾರದಿಂದಲೂ ನಾರುಬಟ್ಟೆಯಿಂದಲೂ ಬುಟೇದಾರೀ ಕೆಲಸಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ನಡಿಸುವ ಕೆಲಸಗಳನ್ನು ಕಲ್ಪಿಸುವದಕ್ಕೂ ಮಾಡುವದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೆಹೋವನು ಇವರಿಬ್ಬರಿಗೆ ಎಲ್ಲಾ ವಿಧದ ಕೆಲಸಗಳನ್ನು ಮಾಡಲು ವಿಶೇಷ ನಿಪುಣತೆಯನ್ನು ಅನುಗ್ರಹಿಸಿದ್ದಾನೆ. ಅವರು ಮರಗೆಲಸವನ್ನೂ ಲೋಹದ ಕೆಲಸವನ್ನೂ ಮಾಡಬಲ್ಲರು. ಅವರು ನೀಲಿ, ನೇರಳೆ ಕೆಂಪುದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಅಲಂಕೃತವಾದ ಬಟ್ಟೆಗಳನ್ನು ನೇಯಿಗೆ ಮಾಡಬಲ್ಲರು; ಅವರು ಉಣ್ಣೆ ಬಟ್ಟೆಗಳನ್ನು ನೇಯಲು ಶಕ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಕೆತ್ತನೆಯ ಕೆಲಸಗಳನ್ನು, ವಿನ್ಯಾಸದ ಕೆಲಸಗಳನ್ನು, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ, ನಯವಾದ ನಾರುಬಟ್ಟೆ ಇವುಗಳಲ್ಲಿ ಕಸೂತಿ ಕೆಲಸಗಳನ್ನು ಮಾಡುವುದಕ್ಕೆ ಮತ್ತು ನೇಯ್ಗೆಯ ಕೆಲಸ ಮಾಡುವುದಕ್ಕೆ ಎಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಯೆಹೋವ ದೇವರು ಅವರಿಗೆ ಜ್ಞಾನವನ್ನು ಅನುಗ್ರಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:35
23 ತಿಳಿವುಗಳ ಹೋಲಿಕೆ  

ಚಿನ್ನ, ಬೆಳ್ಳಿ, ತಾಮ್ರಗಳಿಂದ ಕೆಲಸ ನಡೆಸುವುದಕ್ಕೂ, ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ವಿಚಿತ್ರ ಕೆತ್ತನೆ ಕೆಲಸ ಮಾಡುವುದಕ್ಕೂ


ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ಟೈರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು, ಅವನ ಎಲ್ಲಾ ಕೆಲಸವನ್ನು ಮಾಡಿದನು.


ಅವನ ದೇವರು ಇದನ್ನೆಲ್ಲಾ ಸರಿಯಾಗಿ ತಿಳಿಸಿ ಕಲಿಸಿಕೊಡುತ್ತಾರೆ.


ಮತ್ತು ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು, ತಕ್ಕಜ್ಞಾನ, ವಿವೇಕ ವಿವಿಧ ಶಿಲ್ಪಶಾಸ್ತ್ರ ಕುಶಲತೆಯನ್ನು ಅನುಗ್ರಹಿಸಿದ್ದೇನೆ.


ನೀನಾದರೋ ದೇವರಿಗೆ ಮೆಚ್ಚುಗೆಯಾದವನಂತೆ, ತನ್ನ ಕೆಲಸಕ್ಕೆ ಹಿಂದೆಗೆಯದ ಕೆಲಸಗಾರನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ ಬಾಳಲು ಪ್ರಯತ್ನಪಡು.


ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ.


ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.


ನಿಮ್ಮ ಬಳಿ ಒಂದು ವಿಷಯವನ್ನು ಕೇಳಲಿಚ್ಛಿಸುತ್ತೇನೆ; ನೀವು ಪವಿತ್ರಾತ್ಮರನ್ನು ಪಡೆದುದು ಹೇಗೆ? ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲೋ? ಇಲ್ಲವೆ ಶುಭಸಂದೇಶವನ್ನು ಕೇಳಿ ವಿಶ್ವಾಸಿಸಿದ್ದರಿಂದಲೋ?


ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು.


ಪವಿತ್ರಾತ್ಮ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ;


ವರದಾನಗಳು ವಿಧವಿಧವಾಗಿವೆ; ಅವುಗಳನ್ನು ಕೊಡುವ ಪವಿತ್ರಾತ್ಮ ಒಬ್ಬರೇ.


ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ.


ಏಕೆಂದರೆ, ಕ್ರಿಸ್ತಯೇಸುವಿನಲ್ಲಿ ನೀವು ಎಲ್ಲ ದೃಷ್ಟಿಯಿಂದಲೂ ಶ್ರೀಮಂತರು, ಜ್ಞಾನಸಂಪನ್ನರು ಮತ್ತು ವಾಕ್‍ಚತುರರು ಆಗಿದ್ದೀರಿ.


ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.


ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು.


ನನ್ನ ದಿನಗಳು ಮಗ್ಗದ ಲಾಳಕ್ಕಿಂತ ತ್ವರಿತ ಅವುಗಳಿಗಿದೋ ನಿರೀಕ್ಷೆಯಿಲ್ಲದ ಮುಕ್ತಾಯ.


ಇವನು ದಾನ್ ಕುಲದ ಒಬ್ಬ ಸ್ತ್ರೀಯ ಮಗ; ಅವನ ತಂದೆ ಟೈರಿನವನು. ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ ಊದಾ, ನೀಲಿ, ಕೆಂಪುವರ್ಣಗಳುಳ್ಳ ನಾರುಬಟ್ಟೆಗಳನ್ನು ನೇಯುವುದಕ್ಕೂ ಎಲ್ಲಾ ತರದ ಕೆತ್ತನೆಯ ಕೆಲಸ ಮಾಡುವುದಕ್ಕೂ ತನಗೆ ಒಪ್ಪಿಸಲಾಗುವ ಎಲ್ಲಾ ಕಲಾತ್ಮಕ ಕೆಲಸಗಳನ್ನು ನಡೆಸುವುದಕ್ಕೂ ಇವನು ಸಮರ್ಥನು. ನೀನೂ ನಿನ್ನ ತಂದೆ ದಾವೀದನೂ ಗೊತ್ತುಮಾಡಿದ ಕಲಾಕುಶಲರೊಡನೆ ಇವನು ಕೆಲಸಮಾಡಲಿ.


ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


“ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮಾತ್ಕಾರವಾಗಿ ಕಸೂತಿ ಹಾಕಿಸಬೇಕು.


ಕುರುಬನು ತನ್ನ ಗುಡಿಸಲನ್ನು ಕಿತ್ತುಹಾಕುವಂತೆ ನೇಯಿಗೆಯವನು ತನ್ನ ಹಾಸನ್ನು ಸುತ್ತುವಂತೆ ಮಗ್ಗದಿಂದ ಅವನು ದಾರವನ್ನು ಕತ್ತರಿಸುವಂತೆ ಬೆಳಗುಬೈಗಿನೊಳಗೆ ನನ್ನ ಆಯುಷ್ಯವನ್ನು ನೀ ಮುಗಿಸುತ್ತಿರುವೆನೆಂದೆ.


“ಬೆಚಲೇಲನು ಮತ್ತು ಒಹೋಲೀಯಾಬನು ಎಲ್ಲವನ್ನು ಸರ್ವೇಶ್ವರ ಸ್ವಾಮಿ ಆಜ್ಞಾಪಿಸಿದ ಪ್ರಕಾರವೇ ಮಾಡುವರು. ಬೇರೆ ಕಲೆಗಾರರು, ಅಂದರೆ ಸರ್ವೇಶ್ವರನಿಂದ ಜ್ಞಾನವಿವೇಕಗಳನ್ನು ಹೊಂದಿ, ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಬೇಕಾದ ಸಕಲವಿಧ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಅವರೊಂದಿಗೆ ಕೆಲಸ ಮಾಡುವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು