Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:29 - ಕನ್ನಡ ಸತ್ಯವೇದವು C.L. Bible (BSI)

29 ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯ ತನಕ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯವರೆಗೂ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯ ತನಕ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಈ ಚೌಕಟ್ಟುಗಳು ಕೆಳಭಾಗಕ್ಕೆ ಒಟ್ಟಾಗಿ ಸೇರಿಸಲ್ಪಟ್ಟಿದ್ದವು; ತುದಿಯಲ್ಲಿ ಒಂದು ಬಳೆಯು ಮೂಲೆ ಚೌಕಟ್ಟುಗಳನ್ನು ಒಟ್ಟಿಗೆ ಹಿಡಿದುಕೊಂಡಿತ್ತು. ಅವರು ಎರಡೂ ಮೂಲೆಗಳಿಗೆ ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಈ ಮೂಲೆಗಳನ್ನು ಅಡಿಯಲ್ಲಿ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿದರು. ಇದೇ ರೀತಿಯಲ್ಲಿ ಅವರು ಎರಡು ಮೂಲೆಗಳಲ್ಲಿ ಎರಡಕ್ಕೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:29
16 ತಿಳಿವುಗಳ ಹೋಲಿಕೆ  

ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ.


ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.


ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ.


ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು.


ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ-ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.


ಸೋದರರು ಒಂದಾಗಿ ಬಾಳ್ವುದು I ಅದೆಷ್ಟು ಚೆನ್ನ, ಅದೆಷ್ಟು ರಮ್ಯ II


ನೋಡು, ಜೆರುಸಲೇಮ್ ಪಟ್ಟಣವಿದು I ಗಟ್ಟಿಯಾಗಿಯೆ ಕಟ್ಟಲ್ಪಟ್ಟಿಹುದು II


ಅವು ಬುಡದಿಂದ ತುದಿಯವರೆಗೂ, ಅಂದರೆ ಮೊದಲನೆಯ ಬಳೆಯ ತನಕ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.


ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು;


ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೇಕಲ್ಲುಗಳೂ, ಅಂತೂ ಹದಿನಾರು ಗದ್ದಿಗೇಕಲ್ಲುಗಳೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು