Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:3 - ಕನ್ನಡ ಸತ್ಯವೇದವು C.L. Bible (BSI)

3 ಅವರು ದೇವಮಂದಿರದ ನಿರ್ಮಾಣಕ್ಕಾಗಿ ಜನರು ಕೊಟ್ಟಿದ್ದ ಕಾಣಿಕೆಗಳನ್ನು ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಯೇಲರು ಪ್ರತಿದಿನ ಬೆಳಿಗ್ಗೆ ಮೋಶೆಯ ಬಳಿಗೆ ಬಂದು ಹೆಚ್ಚೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಾಯೇಲ್ಯರು ಪ್ರತಿದಿನದ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಹೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲರು ಕಾಣಿಕೆಗಳಾಗಿ ತಂದ ವಸ್ತುಗಳನ್ನೆಲ್ಲಾ ಮೋಶೆಯು ಅವರಿಗೆ ಕೊಟ್ಟನು. ಅವರು ದೇವರ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಈ ವಸ್ತುಗಳನ್ನು ಉಪಯೋಗಿಸಿದರು. ಪ್ರತಿ ಮುಂಜಾನೆ ಜನರು ಕಾಣಿಕೆಗಳನ್ನು ತರುತ್ತಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಪರಿಶುದ್ಧ ಆಲಯದ ನಿರ್ಮಾಣಕ್ಕೋಸ್ಕರ ಇಸ್ರಾಯೇಲರು ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ತೆಗೆದುಕೊಂಡರು. ಇದಲ್ಲದೆ ಅವರು ಪ್ರತಿದಿನ ಬೆಳಿಗ್ಗೆ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:3
11 ತಿಳಿವುಗಳ ಹೋಲಿಕೆ  

ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು.


‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ರಾಜರು ಆಳುವುದು ನನ್ನ ಸಹಾಯದಿಂದ ಅಧಿಪತಿಗಳು ನ್ಯಾಯತೀರ್ಪು ಮಾಡುವುದು ನನ್ನಿಂದ.


ಇಲ್ಲಮಾಡುವೆನು ಕೆಡುಕರನು ಪ್ರಭುವಿನಾ ನಗರದೊಳಗೆ I ನಾಶಮಾಡುವೆನು ನಾಡಿನ ದುರುಳರನು ದಿನದಿನಗಳೊಳಗೆ II


ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II


ಜನನಾಯಕರು ಮಹಾಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು, ವಕ್ಷ ಕವಚದಲ್ಲಿ ಖಚಿಸಬೇಕಾದ ರತ್ನಗಳನ್ನು,


ಬೆಚಲೇಲನನ್ನು ಒಹೋಲೀಯಾಬನನ್ನು ಮತ್ತು ಸರ್ವೇಶ್ವರನಿಂದ ಜ್ಞಾನಪಡೆದು ಕೆಲಸ ಕೈಗೊಳ್ಳಲು ಉತ್ಸುಕರಾಗಿದ್ದ ಕಲೆಗಾರರೆಲ್ಲರನ್ನು ಮೋಶೆ ತನ್ನ ಬಳಿಗೆ ಕರೆಸಿದನು.


ದೇವಮಂದಿರದ ನಿರ್ಮಾಣದಲ್ಲಿ ಮಗ್ನರಾಗಿದ್ದ ಆ ಶಿಲ್ಪಿಗಳೆಲ್ಲರು ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು,


ಹುಳಿಹಿಟ್ಟಿನ ರೊಟ್ಟಿಯನ್ನು ಹೋಮಮಾಡಿ ಉಪಕಾರಸ್ಮರಣೆ ಮಾಡಿಕೊಳ್ಳಿ. ಇಷ್ಟಬಂದಂತೆ ಕಾಣಿಕೆಗಳನ್ನು ಸಮರ್ಪಿಸಿ ಪ್ರಚಾರಮಾಡಿಕೊಳ್ಳಿ. ಹೀಗೆ ಮಾಡುವುದು ನಿಮಗೆ ಇಷ್ಟವಲ್ಲವೆ?” ಇದು ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು