Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:8 - ಕನ್ನಡ ಸತ್ಯವೇದವು C.L. Bible (BSI)

8 ನಿಪುಣ ಶಿಲ್ಪಗಾರರೆಲ್ಲರು ಸೇರಿ ಹತ್ತು ತಾನು ನಯವಾದ ನಾರುಬಟ್ಟೆಯಿಂದ ಗುಡಾರವನ್ನು ನಿರ್ಮಿಸಿದರು. ಆ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿಹಾಕಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಕೆಲಸದವರಲ್ಲಿದ್ದ ಜಾಣರೆಲ್ಲರು ಹೊಸೆದ ನಾರಿನ ಹತ್ತುತಾನು ಬಟ್ಟೆಗಳಿಂದ ಗುಡಾರವನ್ನು ಮಾಡಿ ಆ ಬಟ್ಟೆಗಳಲ್ಲಿ ನೀಲಿ ಧೂಮ್ರ ರಕ್ತವರ್ಣಗಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ತರುವಾಯ ನಿಪುಣರು ಪವಿತ್ರಗುಡಾರವನ್ನು ಮಾಡಲು ಪ್ರಾರಂಭಿಸಿದರು. ಅವರು ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪು ದಾರಗಳಿಂದಲೂ ಹತ್ತು ಪರದೆಗಳನ್ನು ಮಾಡಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಗಳಲ್ಲಿ ಕಸೂತಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕೆಲಸದವರಲ್ಲಿದ್ದ ಶಿಲ್ಪಿಗಳೆಲ್ಲರೂ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:8
14 ತಿಳಿವುಗಳ ಹೋಲಿಕೆ  

ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿಟ್ಟು ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.


ದಾವೀದ ನಗರದಲ್ಲಿ ದಾವೀದನು ತನ್ನ ವೈಯಕ್ತಿಕ ಉಪಯೋಗಕ್ಕಾಗಿ ಮನೆಗಳನ್ನು ಕಟ್ಟಿಸಿಕೊಂಡನು. ದೇವಮಂಜೂಷಕ್ಕೂ ಒಂದು ಸ್ಥಳವನ್ನು ಸಿದ್ಧಪಡಿಸಿ ಅದಕ್ಕೆ ಒಂದು ಗುಡಾರವನ್ನು ಹಾಕಿಸಿದನು.


ಇದಲ್ಲದೆ ಅವನು ಎಣ್ಣೇಮರದಿಂದ 4:4 ಮೀಟರ್ ಎತ್ತರವಾದ ಎರಡು ‘ಕೆರೂಬಿ’ಗಳನ್ನು ಮಾಡಿಸಿ ಅವುಗಳನ್ನು ಗರ್ಭಗುಡಿಯಲ್ಲಿರಿಸಿದನು.


“ನಿಮ್ಮಲ್ಲಿರುವ ಶಿಲ್ಪಕಾರರೆಲ್ಲರು ಬಂದು ಸರ್ವೇಶ್ವರನು ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.


ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ.


ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.


ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು.


ದೇವದರ್ಶನದ ಗುಡಾರ, ಆಜ್ಞಾಶಾಸನಗಳಿರುವ ಮಂಜೂಷ, ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲ ಉಪಕರಣಗಳು;


ಪ್ರತಿಯೊಂದು ಬಟ್ಟೆ ಇಪ್ಪತ್ತೆಂಟು ಮೊಳ ಉದ್ದ ಹಾಗು ನಾಲ್ಕು ಮೊಳ ಅಗಲವಾಗಿತ್ತು. ಎಲ್ಲ ಬಟ್ಟೆಗಳು ಒಂದೇ ಅಳತೆಯಾಗಿದ್ದವು.


ಸರ್ವೇಶ್ವರನ ದಾಸನಾದ ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ದೇವದರ್ಶನದ ಗುಡಾರ ಅಲ್ಲಿಯೇ ಇತ್ತು.


ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದೊಡನೆ ಮತ್ತು ನಾರಿನ ಬಟ್ಟೆಯೊಡನೆ ಕಲಾತ್ಮಕ ಕೆಲಸದವರ ಪದ್ಧತಿಯ ಮೇರೆಗೆ ಕಸೂತಿ ಕೆಲಸ ಮಾಡುವುದಕ್ಕಾಗಿ ಬಂಗಾರವನ್ನು ತಟ್ಟಿ ತಗಡುಗಳನ್ನು ಮಾಡಿ, ಸಣ್ಣ ಸಣ್ಣ ಎಳೆಗಳಾಗಿ ಕತ್ತರಿಸಿದರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು