ವಿಮೋಚನಕಾಂಡ 37:17 - ಕನ್ನಡ ಸತ್ಯವೇದವು C.L. Bible (BSI)17 ಚೊಕ್ಕಬಂಗಾರದ ದೀಪವೃಕ್ಷವನ್ನು ಮಾಡಿದನು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದನು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಮೊಗ್ಗುಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮತ್ತು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನು ಮತ್ತು ಕಂಬವನ್ನು ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವನ್ನು ಅಖಂಡವಾಗಿ ಪುಷ್ಪದಗೊಂಚಲುಗಳು, ಪುಷ್ಪಗಳು, ಮೊಗ್ಗುಗಳು ಅಲಂಕಾರವಾಗಿ ಅದರಿಂದಲೇ ಹೊರಟಂತೆ ಕೆತ್ತಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮತ್ತು ಚೊಕ್ಕಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನೂ ಕಂಬವನ್ನೂ ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಪುಷ್ಪಪಾತ್ರೆಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬಳಿಕ ಅವನು ದೀಪಸ್ತಂಭವನ್ನು ಮಾಡಿದನು. ಅವನು ಅಪ್ಪಟ ಬಂಗಾರದಿಂದ ಕಂಬವನ್ನು ಮಾಡಿದನು. ತರುವಾಯ ಹೂವು, ಮೊಗ್ಗು ಮತ್ತು ದಳಗಳನ್ನು ಮಾಡಿ ಜೋಡಿಸಿದನು. ಹೀಗೆ ಅವು ಪುಷ್ಪಾಲಂಕಾರವಾದ ಒಂದೇ ವಸ್ತುವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಚೊಕ್ಕ ಬಂಗಾರದಿಂದ ದೀಪಸ್ತಂಭವನ್ನು ಮಾಡಿದರು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದರು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇದ್ದವು. ಅಧ್ಯಾಯವನ್ನು ನೋಡಿ |
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.